Ind vs WI : ಎರಡನೇ ಟಿ20 ಪಂದ್ಯ ಗೆಲ್ಲಲು ಟೀಂ ಇಂಡಿಯಾದ Playing 11 ನಲ್ಲಿ ಭಾರಿ ಬದಲಾವಣೆ!

ಹೀಗಾಗಿ ಎರಡನೇ ಟಿ20 ಪಂದ್ಯದ ಪ್ಲೇಯಿಂಗ್ XI ನಲ್ಲಿ ಹಲವು ದೊಡ್ಡ ಬದಲಾವಣೆಗಳಾಗಬಹುದು. ಅನೇಕ ಫ್ಲಾಪ್ ಆಟಗಾರರಿಗೆ ಗೆಟ್ ಪಾಸ್ ನೀಡುವ ಸಾಧ್ಯತೆ ಇದೆ. 

Written by - Channabasava A Kashinakunti | Last Updated : Jul 31, 2022, 08:55 AM IST
  • ಎರಡನೇ ಟಿ20 ಪಂದ್ಯದ ಪ್ಲೇಯಿಂಗ್ XI ನಲ್ಲಿ ಹಲವು ದೊಡ್ಡ ಬದಲಾವಣೆ
  • ಫ್ಲಾಪ್ ಆಟಗಾರರಿಗೆ ಗೆಟ್ ಪಾಸ್ ನೀಡುವ ಸಾಧ್ಯತೆ ಇದೆ.
  • 2ನೇ T20Iಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
Ind vs WI : ಎರಡನೇ ಟಿ20 ಪಂದ್ಯ ಗೆಲ್ಲಲು ಟೀಂ ಇಂಡಿಯಾದ Playing 11 ನಲ್ಲಿ ಭಾರಿ ಬದಲಾವಣೆ! title=

IND vs WI : ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಅಬ್ಬರದ ಜಯ ಸಾಧಿಸಿದೆ. ಇದೀಗ ಎರಡನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಲು ಬಯಸಿದೆ. ಇದಕ್ಕಾಗಿ ಕ್ಯಾಪ್ಟನ್ ರೋಹಿತ್ ಶರ್ಮಾ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಹೀಗಾಗಿ ಎರಡನೇ ಟಿ20 ಪಂದ್ಯದ ಪ್ಲೇಯಿಂಗ್ XI ನಲ್ಲಿ ಹಲವು ದೊಡ್ಡ ಬದಲಾವಣೆಗಳಾಗಬಹುದು. ಅನೇಕ ಫ್ಲಾಪ್ ಆಟಗಾರರಿಗೆ ಗೆಟ್ ಪಾಸ್ ನೀಡುವ ಸಾಧ್ಯತೆ ಇದೆ. 

ಇವರಾಗಬಹುದು ಆರಂಭಿಕ ಜೋಡಿ

ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆಗೆ ಸೂರ್ಯಕುಮಾರ್ ಯಾದವ್ ಓಪನಿಂಗ್ ಮಾಡಿದರು. ಸೂರ್ಯಕುಮಾರ್ ಯಾದವ್ ಅವರು ಓಪನರ್ ಆಗಿ ಬಂದರು ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡಲಿಲ್ಲ. ಹೀಗಾಗಿ ಇಶಾನ್ ಕಿಶನ್ ಗೆ ಎರಡನೇ ಪಂದ್ಯದಲ್ಲಿ ಅವಕಾಶ ಸಿಗಬಹುದು. ಇಶಾನ್ ಕಿಶನ್ ಅತ್ಯುತ್ತಮ ಫಾರ್ಮ್‌ನಲ್ಲಿ ಪ್ರದರ್ಶನ ನೀಡುತ್ತಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಪ್ಲೇಯಿಂಗ್ 11 ನಲ್ಲಿ ಅವಕಾಶ ಪಡೆದರು, ಅಯ್ಯರ್ ಕೂಡ ಅನುಪಸ್ಥಿತಿ ಕಾಡಿದರೆ ಅವರ ಜಾಗದಲ್ಲಿ ದೀಪಕ್ ಹೂಡಾಗೆ ಅವಕಾಶ ನೀಡಬಹುದು.

ಇದನ್ನೂ ಓದಿ : Commonwealth Games 2022 : ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಪದಕ : ಬೆಳ್ಳಿಗೆ ಮುತ್ತಿಕ್ಕಿದ ಬಿಂದಿಯಾರಾಣಿ!

ಇವರು ಮಧ್ಯಮ ಕ್ರಮಾಂಕ ಬ್ಯಾಟ್ಸಮನ್ 

ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಹಾಗೆ, ಹಾರ್ದಿಕ್ ಪಾಂಡ್ಯ ಐದನೇ ಕ್ರಮಾಂಕದಲ್ಲಿ ಆಡುವುದನ್ನು ಕಾಣಬಹುದು. ಹಾರ್ದಿಕ್ ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಅದ್ಭುತ ಆಟ ಪ್ರದರ್ಶಿಸುವಲ್ಲಿ ಪರಿಣತ ಆಟಗಾರ. ದಿನೇಶ್ ಕಾರ್ತಿಕ್ ಆರನೇ ಕ್ರಮಾಂಕದಲ್ಲಿ ಅವಕಾಶ ಪಡೆಯುವುದು ಖಚಿತ. ಮೊದಲ ಟಿ20 ಪಂದ್ಯದಲ್ಲಿ ಬಿರುಸಿನ ಆಟ ಪ್ರದರ್ಶಿಸಿದ ಕಾರ್ತಿಕ್ 19 ಎಸೆತಗಳಲ್ಲಿ 41 ರನ್‌ಗಳ ಇನಿಂಗ್ಸ್‌ ಆಡಿದರು. ಅವರಿಂದಲೇ ಭಾರತ ತಂಡ ಗೆಲ್ಲಲು ಸಾಧ್ಯವಾಯಿತು.

ಈ ಬೌಲರ್‌ಗಳ ಮೇಲೆ ನಂಬಿಕೆ ಇದೆ ರೋಹಿತ್‌ಗೆ 

ಮೊದಲ ಟಿ20 ಪಂದ್ಯದಲ್ಲಿ ಸ್ಪಿನ್ನರ್ ಗಳು ಅದ್ಭುತ ಆಟ ಪ್ರದರ್ಶಿಸಿ ತಮ್ಮ ಪ್ರದರ್ಶನದಿಂದ ಎಲ್ಲರ ಮನ ಗೆದ್ದಿದ್ದರು. ರವಿಚಂದ್ರನ್ ಅಶ್ವಿನ್ ಮತ್ತು ರವಿ ಬಿಷ್ಣೋಯ್ 2-2 ವಿಕೆಟ್ ಪಡೆದರು. ಇದೇ ವೇಳೆ ರವೀಂದ್ರ ಜಡೇಜಾ ಖಾತೆಗೆ ಒಂದು ವಿಕೆಟ್ ಹೋಯಿತು. ಈ ಮೂವರೂ ಆಟಗಾರರಿಗೆ ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಬಹುದು. ಭುವನೇಶ್ವರ್ ಕುಮಾರ್ ವೇಗದ ಬೌಲಿಂಗ್ ಅನ್ನು ಮುನ್ನಡೆಸುತ್ತಿರುವುದನ್ನು ಕಾಣಬಹುದು. ಇದೇ ವೇಳೆ ಮೊದಲ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಅದ್ಭುತ ಆಟ ಪ್ರದರ್ಶಿಸಿ ಎರಡು ವಿಕೆಟ್ ಪಡೆದರು. ಅಂತಹ ಪರಿಸ್ಥಿತಿಯಲ್ಲಿ, ಅವರು ಆಡುವ XI ನಲ್ಲಿ ಸ್ಥಾನ ಪಡೆಯಬಹುದು.

2ನೇ T20Iಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್.

ಇದನ್ನೂ ಓದಿ : Commonwealth Games 2022: ವೇಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಖಾತೆ ತೆರೆದ ಮೀರಾಬಾಯಿ ಚಾನು

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News