IPL 2021: ಇಂದು ಮುಂಬೈ vs ದೆಹಲಿ, ರಾಜಸ್ಥಾನ್ vs ಚೆನ್ನೈ ಸೆಣಸಾಟ

ಶನಿವಾರ ಮಧ್ಯಾಹ್ನ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

Written by - Puttaraj K Alur | Last Updated : Oct 2, 2021, 09:15 AM IST
  • ಶಾರ್ಜಾ ಕ್ರೀಡಾಂಗಣದಲ್ಲಿ ಬಲಿಷ್ಠ ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿ
  • ರೋಹಿತ್ ಶರ್ಮಾ ನೇತೃತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಗೆ ಮಾಡು ಇಲ್ಲೇ ಮಡಿ ಪಂದ್ಯ
  • ಅಬುಧಾಬಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಭರ್ಜರಿ ಹಣಾಹಣಿ
IPL 2021: ಇಂದು ಮುಂಬೈ vs ದೆಹಲಿ, ರಾಜಸ್ಥಾನ್ vs ಚೆನ್ನೈ ಸೆಣಸಾಟ  title=
ಇಂದು ಎರಡು ಐಪಿಎಲ್ ಪಂದ್ಯಗಳು ನಡೆಯಲಿವೆ (Photo Courtesy:@Zee News)

ನವದೆಹಲಿ: 14ನೇ ಆವೃತ್ತಿಯ ಐಪಿಎಲ್ ಟೂರ್ನಿ(IPL 2021)ಯಲ್ಲಿ ಇಂದು (ಅ.2) ಎರಡು ಪಂದ್ಯಗಳು ನಡೆಯಲಿವೆ. ಶಾರ್ಜಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬಲಿಷ್ಠ ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ಮಧ್ಯಾಹ್ನ 3.30ಕ್ಕೆ 46ನೇ ಪಂದ್ಯ ನಡೆಯಲಿದೆ. ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿರುವ 47ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಸೆಣಸಾಟ ನಡೆಯಲಿದೆ.

ಶನಿವಾರ ಮಧ್ಯಾಹ್ನ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್(Mumbai Indians) ತಂಡ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಈಗಾಗಲೇ ಬಹುತೇಕ ಪ್ಲೇ ಆಫ್ ಖಚಿತಪಡಿಸಿಕೊಂಡಿರುವ ರಿಷಭ್ ಪಂತ್ ನೇತೃತ್ವದ ದೆಹಲಿ ಕೂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಹವಣಿಸುತ್ತಿದೆ. ರೋಹಿತ್ ಶರ್ಮಾ ಪಡೆ ಇಂದಿನ ಪಂದ್ಯದಲ್ಲಿ ಸೋಲು ಕಂಡರೆ ಪ್ಲೇ ಆಫ್ ಆಸೆ ಮರಿಚಿಕೆಯಾಗಲಿದೆ.

ಇದನ್ನೂ ಓದಿ: Kolkata vs Punjab: ಮಿಂಚಿದ ಕೆ.ಎಲ್.ರಾಹುಲ್,ಮಾಯಾಂಕ್, ಪಂಜಾಬ್ ಗೆ 5 ವಿಕೆಟ್ ಗಳ ಭರ್ಜರಿ ಗೆಲುವು

ಈಗಾಗಲೇ ತಾನಾಡಿರುವ 11 ಪಂದ್ಯಗಳಲ್ಲಿ ಮುಂಬೈ ತಂಡ ಕೇವಲ 5 ಗೆಲುವು ಸಾಧಿಸಿದ್ದು, 6 ಸೋಲು ಕಂಡಿದೆ. 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 6 ಸ್ಥಾನದಲ್ಲಿರುವ ಹಿಟ್ ಮ್ಯಾನ್ ರೋಹಿತ್(Rohit Sharma) ಪಡೆಗೆ ಗೆಲುವು ಅನಿವಾರ್ಯವಾಗಿದೆ. ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಸೋಲಿನ ಮೇಲೆ ಸೋಲು ಕಂಡಿರುವ ಬಲಿಷ್ಠ ಮುಂಬೈ ಮಾಡು ಇಲ್ಲವೇ ಮಡಿ ಹೋರಾಟ ಮಾಡಬೇಕಾಗಿದೆ. ಗೆದ್ದರೆ ಮಾತ್ರ ಉಳಿಗಾಲವೆಂಬ ಪರಿಸ್ಥಿತಿ ರೋಹಿತ್ ಪಡೆಗೆ ನಿರ್ಮಾಣವಾಗಿದೆ. ಪ್ಲೇ ಆಫ್ ಹಂತಕ್ಕೆ ಪ್ರವೇಶಿಸಬೇಕಾದ ಬಾಕಿ ಇರುವ 3 ಪಂದ್ಯಗಳನ್ನು ಮುಂಬೈ ಗೆಲ್ಲಬೇಕಾದ ಒತ್ತಡದಲ್ಲಿದೆ.

ಈಗಾಗಲೇ 2ನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿರುವ ದೆಹಲಿ ಕ್ಯಾಪಿಟಲ್ಸ್(Delhi Capitals) ಕೂಡ ಮತ್ತೊಂದು ಗೆಲುವಿನ ಭರವಸೆಯಲ್ಲಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ರಿಷಭ್ ಪಂತ್ ಪಡೆ ಗೆಲುವಿನ ವಿಶ್ವಾಸದಲ್ಲಿದೆ. ತಾನಾಡಿರುವ 11 ಪಂದ್ಯಗಳಲ್ಲಿ 8 ಗೆಲುವು ಸಾಧಿಸಿರುವ ದೆಹಲಿ 3 ಸೋಲು ಕಂಡಿದೆ. 16 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ದೆಹಲಿ ಚೆನ್ನೈ ತಂಡವನ್ನು ಬದಿಗೆ ಸರಿಸಿ ಅಗ್ರಸ್ಥಾನಕ್ಕೇರುವ ತವಕದಲ್ಲಿದೆ.

ಇದನ್ನೂ ಓದಿ: Watch: ಸಮುದ್ರದಾಳದಲ್ಲಿ ಜಾವೆಲಿನ್ ಎಸೆದ ನೀರಜ್ ಚೋಪ್ರಾ..!

ಸಂಜೆ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಎಂ.ಎಸ್.ಧೋನಿ(MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ಮತ್ತು ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಮೊದಲನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿರುವ ಧೋನಿ ಪಡೆ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ತಾನಾಡಿರುವ 11 ಪಂದ್ಯಗಳಲ್ಲಿ 9 ಗೆಲುವು ಮತ್ತು 2 ಸೋಲು ಕಂಡಿರುವ ಚೆನ್ನೈ 18 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠವಾಗಿರುವ ಧೋನಿ ಪೆಡೆ ರಾಜಸ್ಥಾನ್(Rajasthan Royals) ಮೇಲೆ ಮತ್ತೊಂದು ಗೆಲುವಿನ ಸವಾರಿ ಮಾಡುವ ವಿಶ್ವಾಸದಲ್ಲಿದೆ. ಪ್ರಸಕ್ತ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಪಡೆ ಪ್ಲೇ ಆಫ್ ಹಂತ ಪ್ರವೇಶಿಸುವುದು ಬಹುತೇಕ ಅನುಮಾನ. ತಾನಾಡಿರುವ 11 ಪಂದ್ಯಗಳಲ್ಲಿ ಕೇವಲ 4 ಗೆಲುವು 7 ಸೋಲು ಕಂಡಿರುವ ರಾಜಸ್ಥಾನ್ 8 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಬಾಕಿ ಉಳಿದಿರುವ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸ್ಯಾಮ್ಸನ್ ಪಡೆ ಪ್ಲೇ ಆಫ್ ಪ್ರವೇಶಿಸುವುದು ಡೌಟ್ ಆಗಿದೆ.

ಐಪಿಎಲ್‌ ಪಂದ್ಯ: 46

ದೆಹಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್

ದಿನಾಂಕ: ಅಕ್ಟೋಬರ್ 02, ಶನಿವಾರ

ಸ್ಥಳ: ಶಾರ್ಜಾ ಅಂತಾರಾಷ್ಟ್ರೀಯ ಕ್ರೀಡಾಂಗಣ

ಸಮಯ: ಮಧ್ಯಾಹ್ನ 3.30ಕ್ಕೆ

=============================================

ಐಪಿಎಲ್‌ ಪಂದ್ಯ: 47

ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್

ದಿನಾಂಕ: ಅಕ್ಟೋಬರ್ 02, ಶನಿವಾರ

ಸ್ಥಳ: ಅಬುಧಾಬಿಯ ಶೇಖ್ ಜಾಯೆದ್ ಅಂತಾರಾಷ್ಟ್ರೀಯ ಕ್ರೀಡಾಂಗಣ

ಸಮಯ: ಸಂಜೆ 7.30ಕ್ಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News