ಬೆಂಗಳೂರು: ಐಪಿಎಲ್ 2023 ರ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಐಪಿಎಲ್ ಕಪ್ ನ ಹವಾ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಈಗ ಇದರ ಭಾಗವಾಗಿ ಈಗಾಗಲೇ ಮುಂಬೈ, ಚೆನ್ನೈ, ವಿಶಾಖಪಟ್ಟಣದ ನಾಲ್ಕು ಪ್ರದೇಶಗಳಲ್ಲಿ ಟ್ರೋಫಿ ಪ್ರದರ್ಶನ ಯಶಸ್ವಿಯಾಗಿ ನಡೆದಿದೆ. ಈಗ ಇದೇ ಮಾರ್ಚ್ 26 ರಂದು ನಮ್ಮ ಬೆಂಗಳೂರಿಗೆ ಕೂಡ ಟ್ರೋಪಿ ಬರಲಿದ್ದು,ನಗರದ ಪ್ರಮುಖ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಐಪಿಎಲ್ ಟ್ರೋಪಿಯನ್ನು ಪ್ರದರ್ಶನಕ್ಕೆ ಇಡಲಾಗುತ್ತಿದೆ.
ಇದನ್ನೂ ಓದಿ: "ಯಾರ್ಯಾರೋ ನಾನೇ ಸಿಎಂ ನಾನೇ ಸಿಎಂ ಎಂಬ ಭ್ರಮೆಯಲ್ಲಿದ್ದಾರೆ"
ಬೆಳಿಗ್ಗೆ 5 ಗಂಟೆ 15 ರಿಂದ ನೈಸ್ ಟೋಲ್ ಗೇಟ್,ಹೊಸಕೆರೆ ಹಾಳುವಿನಲ್ಲಿ ಬೆಳಿಗ್ಗೆ 11 ಗಂಟೆಯವರೆಗೆ ಟ್ರೋಪಿಯನ್ನು ಪ್ರದರ್ಶನಕ್ಕೆ ಇರಿಸಲಾಗುತ್ತದೆ, ನಂತರ ಮೈಯಾಸ್, ಜಯನಗರದಲ್ಲಿ ಮಧ್ಯಾಹ್ನ 1 ರಿಂದ 3 ಗಂಟೆ ವರೆಗೆ, ಕೋರಮಂಗಲದ ಫೋರಂ ಮಾಲ್ ನಲ್ಲಿ ಸಂಜೆ 5 ರಿಂದ 8ರವರೆಗೆ, ಅಂತಿಮವಾಗಿ 9 ರಿಂದ 11 ಗಂಟೆಗೆ ನಗರದ ವಿಶೇಷ ಸ್ಥಳದಲ್ಲಿ ಐಪಿಎಲ್ ಟ್ರೋಫಿಯನ್ನು ಪ್ರದರ್ಶನಕ್ಕೆ ಇರಿಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.