IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವು 

ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿ 2024 ಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ರನ್ ಗಳ ಜಯ ಸಾಧಿಸಿದೆ.

Written by - Manjunath N | Last Updated : Apr 15, 2024, 12:11 AM IST
  • ಋತುರಾಜ್ ಗಾಯಕ್ವಾಡ್ 69 ಹಾಗೂ ಶಿವಂ ದುಬೆ 68 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ನೆರವಾದರು.
  • ಇನ್ನೊಂದೆಡೆಗೆ ಮುಂಬೈ ಇಂಡಿಯನ್ಸ್ ತಂಡವು ಅಂತಿಮವಾಗಿ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 186 ರನ್ ಗಳನ್ನು ಮಾತ್ರ ಗಳಿಸಲಷ್ಟೇ ಶಕ್ತವಾಯಿತು
IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವು  title=

ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿ 2024 ಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ರನ್ ಗಳ ಜಯ ಸಾಧಿಸಿದೆ.

ಟಾಸ್ ಗೆದ್ದು ಮೊದಲು ಮುಂಬೈ ಇಂಡಿಯನ್ಸ್ ತಂಡವು ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಗೆ ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿತು.ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡ ಚೆನ್ನೈ ತಂಡವು 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 206 ರನ್ ಗಳನ್ನು ಗಳಿಸಿತು.

ಇದನ್ನೂ ಓದಿ: ಬಿಜೆಪಿ ಭರವಸೆಗಳನ್ನು ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

ಚೆನ್ನೈ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಋತುರಾಜ್ ಗಾಯಕ್ವಾಡ್ 69 ಹಾಗೂ ಶಿವಂ ದುಬೆ 68 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಇನ್ನೊಂದೆಡೆಗೆ ಮುಂಬೈ ಇಂಡಿಯನ್ಸ್ ತಂಡವು ಚೆನ್ನೈ ತಂಡವು ನೀಡಿದ 207 ರನ್ ಗಳನ್ನು ಬೆನ್ನಟ್ಟಿ ಅಂತಿಮವಾಗಿ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 186 ರನ್ ಗಳನ್ನು ಮಾತ್ರ ಗಳಿಸಲಷ್ಟೇ ಶಕ್ತವಾಯಿತು.ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 105 ರನ್ ಗಳನ್ನು ಗಳಿಸಿದರು.

ಇದನ್ನೂ ಓದಿ: ಮಂಡ್ಯ ಅಖಾಡಕ್ಕೆ ಇಂದು ಮಾಜಿ ಪ್ರಧಾನಿ ಎಂಟ್ರೀ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಮತೀಶ ಪತಿರಾನ ನಾಲ್ಕು ವಿಕೆಟ್ ಗಳನ್ನು ಕಬಳಿಸುವ ಮೂಲಕ ಮುಂಬೈ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.

ನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

Trending News