IPL 2024: ಕೊಲ್ಕತ್ತಾ ನೈಟ್ ರೈಡರ್ಸ್ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್

ಇಲ್ಲಿನ ಡಾ.ವೈ.ಎಸ್.ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿ 2024 ಯಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೊಲ್ಕತಾ ನೈಟ್ ರೈಡರ್ಸ್ ತಂಡವು 108 ರನ್ ಗಳ ಅಂತರಿಂದ ಗೆಲುವು ಸಾಧಿಸಿದೆ.

Written by - Manjunath Naragund | Last Updated : Apr 4, 2024, 12:37 AM IST
  • ಕೋಲ್ಕತ್ತಾ ಪರವಾಗಿ ಸ್ಪೋಟಕ ಬ್ಯಾಟಿಂಗ್ ಬೀಸಿದ ನರೈನ್ 39 ಏಳು ಸಿಕ್ಸರ್ ಹಾಗೂ ಏಳು ಬೌಂಡರಿಗಳ ನೆರವಿನಿಂದ 85 ರನ್ ಗಳನ್ನು ಗಳಿಸಿದರು.
  • ಇವರಿಗೆ ಸಾಥ್ ನೀಡಿದ ಅಂಗಕೃಷ್ ರಘುವಂಶಿ ಐದು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದ 54 ಗಳಿಸಿದರು.
  • ಅಂತಿಮವಾಗಿ ಕೊನೆಯಲ್ಲಿ ರಿಂಕು ಸಿಂಗ್ ಕೇವಲ 8 ಎಸೆತಗಳಲ್ಲಿ 26 ರನ್ ಗಳಿಸಿದರು.
 IPL 2024: ಕೊಲ್ಕತ್ತಾ ನೈಟ್ ರೈಡರ್ಸ್ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್ title=

ವಿಶಾಖಪಟ್ಟಣ: ಇಲ್ಲಿನ ಡಾ.ವೈ.ಎಸ್.ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿ 2024 ಯಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೊಲ್ಕತಾ ನೈಟ್ ರೈಡರ್ಸ್ ತಂಡವು 108 ರನ್ ಗಳ ಅಂತರಿಂದ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 272 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿತು.

ಇದನ್ನು ಓದಿ : Google Update: ಹಿಂದಿ ಭಾಷೆಯಲ್ಲಿ ಎರಡು ಫ್ಯಾಕ್ಟ್ ಚೆಕ್ ಟೂಲ್ ಗಳನ್ನು ಬಿಡುಗಡೆ ಮಾಡಿದ ಗೂಗಲ್!

ಕೋಲ್ಕತ್ತಾ ಪರವಾಗಿ ಸ್ಪೋಟಕ ಬ್ಯಾಟಿಂಗ್ ಬೀಸಿದ ನರೈನ್ 39 ಏಳು ಸಿಕ್ಸರ್ ಹಾಗೂ ಏಳು ಬೌಂಡರಿಗಳ ನೆರವಿನಿಂದ 85 ರನ್ ಗಳನ್ನು ಗಳಿಸಿದರು.ಇವರಿಗೆ ಸಾಥ್ ನೀಡಿದ ಅಂಗಕೃಷ್ ರಘುವಂಶಿ ಐದು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳ ನೆರವಿನಿಂದ 54 ಗಳಿಸಿದರು.ಅಂತಿಮವಾಗಿ ಕೊನೆಯಲ್ಲಿ ರಿಂಕು ಸಿಂಗ್ ಕೇವಲ 8 ಎಸೆತಗಳಲ್ಲಿ 26 ರನ್ ಗಳಿಸಿದರು.

ಇದನ್ನು ಓದಿ : DC Vs KKR : ಟಾಸ್ ಗೆದ್ದ ಕೆಕೆಆರ್, ಬ್ಯಾಟಿಂಗ್ ಆಯ್ದುಕೊಂಡ ಅಯ್ಯರ್ ಪಡೆ

273 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದಕೊಂಡು 166 ರನ್ ಗಳಿಸಲಷ್ಟೇ ಶಕ್ತವಾಯಿತು.ದೆಹಲಿ ಪರವಾಗಿ ರಿಶಬ್ ಪಂತ್ 55,ತ್ರಿಸ್ತಾನ್ ತಬ್ದ್ಸ್ 54 ರನ್ ಗಳನ್ನು ಗಳಿಸಿದ್ದು ಬಿಟ್ಟರೆ  ಉಳಿದವರ್ಯಾರು ಕೂಡ ಅಂತಹ ನಿರೀಕ್ಷಿತ ಪ್ರದರ್ಶನವನ್ನು ನೀಡಲಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News