IPL 2024 Points Table: ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ(ಏಪ್ರಿಲ್ 10) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್ಆರ್) ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ 3 ವಿಕೆಟ್ಗಳ ಸೋಲನುಭವಿಸಿದೆ. ಈ ಮೂಲಕ ಗುಜರಾತ್ ಟೈಟಾನ್ಸ್ ಆರ್ಆರ್ ತಂಡದ ಗೆಲುವಿನ ನಾಗಾಲೋಟಕ್ಕೆ ಲಗಾಮು ಹಾಕಿದೆ. ಆದಾಗ್ಯೂ, ರಾಜಸ್ಥಾನ್ ರಾಯಲ್ಸ್ ಐಪಿಎಲ್ 2024 ಪಾಯಿಂಟ್ ಪಟ್ಟಿಯಲ್ಲಿ (IPL 2024 Points Table) ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಗಮನಾರ್ಹವಾಗಿ 2024ರ ಐಪಿಎಲ್ ಪಂದ್ಯದಲ್ಲಿ (IPL Match) ಈವರೆಗೂ ಐದು ಪಂದ್ಯಗಳನ್ನು ಆಡಿರುವ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡ ನಾಲ್ಕು ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ಒಂದು ಪಂದ್ಯದಲ್ಲಿ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ ರಾಜಸ್ಥಾನ್ ರಾಯಲ್ಸ್ 8 ಅಂಕಗಳನ್ನು ಹೊಂದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) (ಕೆಕೆಆರ್) ತಂಡ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಪ್ರಸ್ತುತ 4 ಪಂದ್ಯಗಳಿಂದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಒಂದು ಪಂದ್ಯದಲ್ಲಿ ಸೋಲುಂಡಿದ್ದು, 06 ಅಂಕಗಳನ್ನು ಹೊಂದಿದೆ. ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ 6-6 ಅಂಕಗಳೊಂದಿಗೆ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ.
ಐಪಿಎಲ್ ಪಾಯಿಂಟ್ ಟೇಬಲ್ (IPL Point Table)ನಲ್ಲಿ ಅಗ್ರ ನಾಲ್ಕು ಸ್ಥಾನ ಪಡೆದಿರುವ ತಂಡಗಳು ಐಪಿಎಲ್ 2024ರ ಪ್ಲೇಆಫ್ಗೆ ಅರ್ಹತೆ ಪಡೆಯುತ್ತವೆ. ಅಗ್ರ ಎರಡು ತಂಡಗಳು ಮೊದಲ ಕ್ವಾಲಿಫೈಯರ್ನಲ್ಲಿ ಆಡಲಿದ್ದು, ವಿಜೇತರು ನೇರವಾಗಿ ಫೈನಲ್ಗೆ ಹೋಗುತ್ತಾರೆ.
ಇದನ್ನೂ ಓದಿ- Hardik Pandya: ಸಹೋದರನಿಂದಲೇ ದೋಖಾ.. ಹಾರ್ದಿಕ್ ಪಾಂಡ್ಯಗೆ ಕೋಟ್ಯಾಂತರ ಹಣ ವಂಚಿಸಿದ ವೈಭವ್ ಪಾಂಡ್ಯ..!!
ಆರೆಂಜ್ ಕ್ಯಾಪ್ ಯಾರ ಬಳಿ ಇದೆ?
ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ 316 ರನ್ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಈ ಮೂಲಕ ಆರ್ಸಿಬಿಯ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಗ್ರ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್ಆರ್) ಬ್ಯಾಟ್ಸ್ಮನ್ ರಿಯಾನ್ ಪರಾಗ್ 261 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ 255 ರನ್ ಗಳಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 246 ರನ್ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ ತಂಡದ ಮತ್ತೊಬ್ಬ ಬ್ಯಾಟ್ಸ್ಮನ್ ಸಾಯಿ ಸುದರ್ಶನ್ ಇಲ್ಲಿಯವರೆಗೆ 226 ರನ್ ಗಳಿಸುವ ಮೂಲಕ ಐದನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಇದನ್ನೂ ಓದಿ- ಈ ಐಪಿಎಲ್ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಟಾಪ್ 5 ಬ್ಯಾಟ್ಸ್ಮನ್ಗಳು ಇವರೇ.. ಯಾರು ನಂ.1 ?
ಈ ತಂಡದ ಬೌಲರ್ನ ಮುಡಿಗೆ ಪರ್ಪಲ್ ಕ್ಯಾಪ್!
2024ರ ಐಪಿಎಲ್ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಇದುವರೆಗೆ 10 ವಿಕೆಟ್ಗಳನ್ನು ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ 9 ವಿಕೆಟ್ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ವೇಗಿ ಅರ್ಷದೀಪ್ ಸಿಂಗ್ 8 ವಿಕೆಟ್ ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ. ಗುಜರಾತ್ ಟೈಟಾನ್ಸ್ ವೇಗಿ ಮೋಹಿತ್ ಶರ್ಮಾ 8 ವಿಕೆಟ್ ಪಡೆದು ನಾಲ್ಕನೇ ಸ್ಥಾನವನ್ನು ಕಾಯ್ದುಕೊಂಡಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಖಲೀಲ್ ಅಹ್ಮದ್ ಇದುವರೆಗಿನ ಪಂದ್ಯಗಳಲ್ಲಿ 7 ವಿಕೆಟ್ ಪಡೆಯುವ ಮೂಲಕ ಐದನೇ ಸ್ಥಾನದಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.