RCB ಗೆಲುವಿನ ಬಳಿಕ ಮಡದಿ-ಮಕ್ಕಳೊಂದಿಗೆ ವಿರಾಟ್ ಕೊಹ್ಲಿ ವಿಡಿಯೋ ಕಾಲ್: ವಾಚ್ ಕ್ಯೂಟ್ ವಿಡಿಯೋ

Virat Kohli Video Call: ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದ ನಂತರ,  ಆರ್‌ಸಿ‌ಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಕ್ಕಳಾದ ವಮಿಕ ಮತ್ತು ಆಕಾಯ್ ಅವರೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸದ್ಯ, ಈ ವಿಡಿಯೋ ಈಗ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.  

Written by - Yashaswini V | Last Updated : Mar 26, 2024, 11:21 AM IST
  • ಐ‌ಪಿ‌ಎಲ್ 2024ರ ಇತ್ತೀಚಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.
  • ವಿರಾಟ್ ಕೊಹ್ಲಿ 77 ರನ್ ಗಳ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
  • ಈ ಮ್ಯಾಚ್ ಬಳಿಕ ವಿರಾಟ್ ಕೊಹ್ಲಿ ತಮ್ಮ ಮಡದಿ ಮತ್ತು ಮಕ್ಕಳೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿದ್ದರು...
RCB ಗೆಲುವಿನ ಬಳಿಕ ಮಡದಿ-ಮಕ್ಕಳೊಂದಿಗೆ ವಿರಾಟ್ ಕೊಹ್ಲಿ ವಿಡಿಯೋ ಕಾಲ್: ವಾಚ್ ಕ್ಯೂಟ್ ವಿಡಿಯೋ   title=

Virat Kohli Video Call with Anushka Sharma Vamika Akay: ಐಪಿಎಲ್ 2024ರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಪ್ಲೇಯರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿ‌ಬಿ) ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಅವರ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಐಪಿಎಲ್ 2024ರ  ಆರನೇ ಪಂದ್ಯ (ಆರ್‌ಸಿ‌ಬಿಯ ಎರಡನೇ ಪಂದ್ಯದ)  ನಂತರ, ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಕ್ಕಳಾದ ವಮಿಕಾ, ಅಕಾಯ್ ಜೊತೆಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿರುವ ವಿಡಿಯೋ ಇದಾಗಿದ್ದು, ಈ ಕ್ಯೂಟ್ ವಿಡಿಯೋಗೆ ನೆಟ್ಟಿಗರು ಫಿದಾ ಆಗಿದ್ದಾರೆ. 

ವಾಸ್ತವವಾಗಿ, ಐ‌ಪಿ‌ಎಲ್ 2024ರ (IPL 2024) ಇತ್ತೀಚಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ವಿರಾಟ್ ಕೊಹ್ಲಿ 77 ರನ್ ಗಳ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಮ್ಯಾಚ್ ಬಳಿಕ ವಿರಾಟ್ ಕೊಹ್ಲಿ (Virat Kohli) ತಮ್ಮ ಮಡದಿ ಮತ್ತು ಮಕ್ಕಳೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿರುವ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. 

ಇದನ್ನೂ ಓದಿ- ಹೇಯ್ ಪ್ರಭು ಯೇ ಕ್ಯಾ ಹುವಾ.. ಓಡಿಬಂದು ರೋಹಿತ್‌ ಶರ್ಮಾ ಪತ್ನಿ ರಿತಿಕಾ ಅವರನ್ನ ಅಪ್ಪಿಕೊಂಡ ಹಾರ್ದಿಕ್ ಪಾಂಡ್ಯ.. ವಿಡಿಯೋ ವೈರಲ್!!‌

ಐ‌ಪಿ‌ಎಲ್ 2024ರ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ವಿರುದ್ಧ ಮುಗ್ಗರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿನ್ನೆ(ಮಾರ್ಚ್ 25) ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿದೆ.  ವಿಡಿಯೋ ಕಾಲ್ ಮೂಲಕ ತಮ್ಮ ಕುಟುಂಬದೊಂದಿಗೆಈ ಸಂತೋಷದ ಕ್ಷಣಗಳನ್ನು ಆನಂದಿಸುತ್ತಿದ್ದ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ (Anushka Sharma), ಮಕ್ಕಳಾದ ವಮಿಕ (Vamika) ಮತ್ತು ಅಕಾಯ್(Akay)  ಗೆ ಫ್ಲೈಯಿಂಗ್ ಕಿಸ್ ನೀಡುತ್ತಿರುವುದು ಕಂಡು ಬಂದಿದೆ. ಇದೀಗ ಈ ವೀಡಿಯೋ ವೈರಲ್ ಆಗಿದೆ. 

ಇದನ್ನೂ ಓದಿ- RCB ತಂಡಕ್ಕೆ ಪದಾರ್ಪಣೆ ಮಾಡಿದ ಮಯಾಂಕ್ ದಾಗರ್ ಯಾರು ಗೊತ್ತಾ? ಟೀಂ ಇಂಡಿಯಾ ಮಾಜಿ ದಿಗ್ಗಜ ಆಟಗಾರನ ಸೋದರಳಿಯ ಈತ!!

ಕುಟುಂಬದೊಂದಿಗೆ ವಿರಾಟ್ ಕೊಹ್ಲಿ ಅವರ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಿರುವ ಈ ಮುದ್ದಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಕೂಡ ವಿರಾಟ್ ಕುಟುಂಬಕ್ಕೆ ಆಶೀರ್ವಾದದ ಮೂಲಕ ಪ್ರೀತಿಯ ಹೊಳೆಯನ್ನೇ ಹರಿಸುತ್ತಿದ್ದಾರೆ. ಈ ಮುದ್ದಾದ ವಿಡಿಯೋವನ್ನು ನೀವೂ ಒಮ್ಮೆ ನೋಡಿ... 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News