ವಿಶ್ವಕಪ್ ತಂಡದ ಆಯ್ಕೆಯಲ್ಲಿ ಐಪಿಎಲ್ ನಿರ್ಣಾಯಕ ಪಾತ್ರ ವಹಿಸಲಿದೆ- ಬಿಸಿಸಿಐ

ಮುಂಬರುವ ವಿಶ್ವಕಪ್ ತಂಡದ ಆಯ್ಕೆ ವೇಳೆ ಐಪಿಎಲ್ ನಲ್ಲಿ ನೀಡುವ ಪ್ರದರ್ಶನವು ನಿರ್ಣಾಯಕ ಪಾತ್ರವಹಿಸಲಿದೆ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

Last Updated : Mar 19, 2019, 02:50 PM IST
ವಿಶ್ವಕಪ್ ತಂಡದ ಆಯ್ಕೆಯಲ್ಲಿ ಐಪಿಎಲ್ ನಿರ್ಣಾಯಕ ಪಾತ್ರ ವಹಿಸಲಿದೆ- ಬಿಸಿಸಿಐ  title=

ನವದೆಹಲಿ: ಮುಂಬರುವ ವಿಶ್ವಕಪ್ ತಂಡದ ಆಯ್ಕೆ ವೇಳೆ ಐಪಿಎಲ್ ನಲ್ಲಿ ನೀಡುವ ಪ್ರದರ್ಶನವು ನಿರ್ಣಾಯಕ ಪಾತ್ರವಹಿಸಲಿದೆ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ತಂಡದ ನಾಲ್ಕನೇ ಸ್ಥಾನಕ್ಕಾಗಿ ಅಜಿಂಕ್ಯಾ ರಹಾನೆ ಅಂಬಟಿ ರಾಯಡು ಶ್ರೇಯಸ್ ಅಯ್ಯರ್ ಮತ್ತು ಕೆ.ಎಲ್ ರಾಹುಲ್ ನಡುವೆ ತೀವ್ರ ಸ್ಪರ್ಧೆ ಇದ್ದು. ಈ ಹಿನ್ನಲೆಯಲ್ಲಿ ವಿಶ್ವಕಪ್ ಗೂ ಮೊದಲು ಐಪಿಎಲ್ ನಲ್ಲಿ ಆಟಗಾರರು ನೀಡುವ ಪ್ರದರ್ಶನದ ಆಧಾರದ ಮೇಲೆ ಅಂತಿಮ ಆಯ್ಕೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ.

ಈ ವಿಚಾರವಾಗಿ ಐಎಎನ್ಎಸ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಹಿರಿಯ ಬಿಸಿಸಿಐ  ಅಧಿಕಾರಿಗಳು ಆಯ್ಕೆ ಸಮಿತಿಯು 12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆಟಗಾರರು ನೀಡುವ ಪ್ರದರ್ಶನವನ್ನು ಕೂಡ ಗಣನೆಗೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಇತ್ತೀಚಿಗೆ ತಂಡದಲ್ಲಿ  ಹಲವಾರು ಬದಲಾವಣೆಗಳನ್ನು ಮಾಡಿಕೊಂಡರು ಸಹಿತ ಇದುವರೆಗೆ ನಾಲ್ಕನೇ ಸ್ಥಾನಕ್ಕಾಗಿ ಯಾವುದೇ ಅಂತಿಮ ಆಯ್ಕೆಯನ್ನು ಮಾಡಲಾಗಿಲ್ಲ.ಇನ್ನು ಹಲವು ಆಟಗಾರರು ತಮ್ಮ ಪ್ರದರ್ಶನದಲ್ಲಿ ಸುಧಾರಣೆ ಕಂಡು ಬರದ ಹಿನ್ನಲೆಯಲ್ಲಿ ಕೆಲವು ಸ್ಥಾನಗಳನ್ನು ಮುಕ್ತವಾಗಿರಿಸಿಕೊಳ್ಳಲಾಗಿದೆ ಎಂದು ಹೇಳಿದರು. 

Trending News