RCB Captain Virat Kohli: ಮೊಹಾಲಿಯಲ್ಲಿ ನಡೆಯುತ್ತಿರುವ ಐಪಿಎಲ್-2023ರ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆರ್’ಸಿಬಿ ತಂಡದ ನಿಯಮಿತ ನಾಯಕ ಫಾಫ್ ಡು ಪ್ಲೆಸಿಸ್ ಟಾಸ್’ಗೆ ಬಂದಿರಲಿಲ್ಲ. ಅವರ ಬದಲಿಗೆ ನಾಯಕತ್ವದ ಜವಾಬ್ದಾರಿಯನ್ನು ಡ್ಯಾಶಿಂಗ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ವಹಿಸಿಕೊಂಡಿದ್ದರು.
ಇದನ್ನೂ ಓದಿ: ಹರಿದ ಚಡ್ಡಿ ವರ್ಷಪೂರ್ತಿ ಹಾಕೋರ ಗಮನಕ್ಕೆ.. ಒಳಉಡುಪುಗಳಿಗೂ ಇದೆ Expire Date! ಹೀಗೆ ತಿಳಿಯಿರಿ
ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡೂ ತಂಡಗಳ ನಾಯಕರು ಬದಲಾಗಿದ್ದಾರೆ. ಆರ್’ಸಿಬಿಗೆ ವಿರಾಟ್ ಕೊಹ್ಲಿ ನಾಯಕತ್ವ ವಹಿಸಿಕೊಂಡರೆ, ಸ್ಯಾಮ್ ಕರೆನ್ ಪಂಜಾಬ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಸ್ಯಾಮ್ ಕರೆನ್ ಟಾಸ್ ಗೆದ್ದು ಬೆಂಗಳೂರನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಶಿಖರ್ ಧವನ್ ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ ಎಂದು ಟಾಸ್ ವೇಳೆ ಸ್ಯಾಮ್ ಹೇಳಿದ್ದಾರೆ.
ಟಾಸ್ ಸೋತ ನಂತರ ಮಾತನಾಡಿದ ವಿರಾಟ್, “ಫಾಫ್ ಇಂದು ಮಾಡುತ್ತಿಲ್ಲ. ಈ ಕಾರಣದಿಂದ ವೈಶಾಕ್ ಆ ಸ್ಥಾನವನ್ನು ತುಂಬಲಿದ್ದಾರೆ. ನಾವು ಮೊದಲು ಬ್ಯಾಟ್ ಮಾಡಲು ಬಯಸಿದ್ದೆವು. ಏಕೆಂದರೆ, ನಂತರ ಪಿಚ್ ನಿಧಾನವಾಗಬಹುದು. ಆಟದ ಮೇಲೆ ಗಮನ ಕೇಂದ್ರೀಕರಿಸುವುದು ಮುಖ್ಯವಾಗಿದೆ, ಇದನ್ನು ಬಿಟ್ಟರೆ ತಂಡದಲ್ಲಿ ಬೇರೆ ಯಾವುದೇ ಬದಲಾವಣೆ ಇಲ್ಲ” ಎಂದು ಹೇಳಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್-11): ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ವೇಯ್ನ್ ಪರ್ನೆಲ್ ಮತ್ತು ಮೊಹಮ್ಮದ್ ಸಿರಾಜ್
ಇದನ್ನೂ ಓದಿ: IPL ಮಧ್ಯೆ ಪತ್ನಿಯನ್ನು ನೆನೆದು ಕಣ್ಣೀರು ಹಾಕುತ್ತಿದ್ದಾನೆ ಈ ಆಟಗಾರ! ಫೋಟೋ ವೈರಲ್
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್-11): ಅಥರ್ವ ಟೇಡೆ, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರೆನ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್ ಮತ್ತು ಅರ್ಶ್‌ದೀಪ್ ಸಿಂಗ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.