CSK vs RCB, IPL 2024: 24 ವರ್ಷದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್ಮನ್ ಅನುಜ್ ರಾವತ್ ಐಪಿಎಲ್ 2024ರ ಆರಂಭಕ್ಕೂ ಮುನ್ನವೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಬಿರುಸಿನ ಬ್ಯಾಟಿಂಗ್ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ಗ ಬೆವರಿಳಿಸಿದರು. ಈ ಬ್ಯಾಟ್ಸ್ಮನ್ 48 ರನ್ಗಳ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಆರ್ಸಿಬಿ ತಂಡವು ಗೌರವಾನ್ವಿತ ಸ್ಕೋರ್ ಕಲೆಹಾಕಲು ನೆರವಾದರು. 6ನೇ ವಿಕೆಟ್ಗೆ ದಿನೇಶ್ ಕಾರ್ತಿಕ್ ಜತೆಗೂಡಿದ ಅನುಜ್ ರಾವತ್ ತಂಡವನ್ನು ಸಂಕಷ್ಟದ ಪರಿಸ್ಥಿತಿಯಿಂದ ಪಾರು ಮಾಡಿದ್ದಲ್ಲದೆ ತಂಡವನ್ನು 173 ರನ್ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಅನುಜ್ ರಾವತ್ ಬಿರುಸಿನ ಬ್ಯಾಟಿಂಗ್
Innings Break!
Anuj Rawat & Dinesh Karthik fire with the bat to power @RCBTweets to 173/6 🙌 🙌
Mustafizur Rahman stars with the ball for @ChennaiIPL 👌 👌
Stay Tuned for the #CSK chase ⌛️
Scorecard ▶️ https://t.co/4j6FaLF15Y#TATAIPL | #CSKvRCB pic.twitter.com/OgVMjbwQiX
— IndianPremierLeague (@IPL) March 22, 2024
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 78 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇದಾದ ಬಳಿಕ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಅನುಜ್ ರಾವತ್ ಆರಂಭದಲ್ಲಿ ತಾಳ್ಮೆಯುತ ಬ್ಯಾಟಿಂಗ್ ನಡೆಸಿದರು. ನಂತರ ಬೌಂಡರಿ, ಸಿಕ್ಸರ್ ಸಿಡಿಸತೊಡಗಿದರು. ಕೊನೆಯ ಓವರ್ ತನಕ ಬ್ಯಾಟಿಂಗ್ ಮಾಡಿದ ಅವರು 25 ಎಸೆತಗಳಲ್ಲಿ 48 ರನ್ ಗಳಿಸಿದರು. ಈ ಇನ್ನಿಂಗ್ಸ್ನಲ್ಲಿ ಅವರು 4 ಬೌಂಡರಿ ಮತ್ತು 3 ಸಿಕ್ಸರ್ಗಳನ್ನು ಬಾರಿಸಿದರು. ದಿನೇಶ್ ಕಾರ್ತಿಕ್ ಜೊತೆಗೂಡಿ 6ನೇ ವಿಕೆಟ್ಗೆ 50 ಎಸೆತಗಳಲ್ಲಿ 95 ರನ್ಗಳ ಜೊತೆಯಾಟವಾಡಿದರು.
ಇದನ್ನೂ ಓದಿ: ದಿನೇಶ್-ರಾವತ್ ಜವಾಬ್ದಾರಿಯುತ ಆಟ : ಗಾಯಕ್ವಾಡ್ ತಂಡಕ್ಕೆ 174ರನ್ ಗಳ ಗೆಲುವಿನ ಗುರಿ ನೀಡಿದ RCB ಪಡೆ
Anuj Rawat 🤝 Dinesh Karthik
5⃣0⃣-run stand ✅@RCBTweets reach the 130-run mark 👍
Follow the match ▶️ https://t.co/4j6FaLF15Y #TATAIPL | #CSKvRCB pic.twitter.com/MINkZQZWdJ
— IndianPremierLeague (@IPL) March 22, 2024
3.40 ಕೋಟಿಗೆ ಖರೀದಿ
2022ರ ಐಪಿಎಲ್ ಟೂರ್ನಿಯ ಮಿನಿ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅನುಜ್ ರಾವತ್ ಅವರನ್ನು 3.40 ಕೋಟಿ ರೂ.ಗೆ ತನ್ನ ತಂಡಕ್ಕೆ ಸೇರಿಸಿತ್ತು. ಅನುಜ್ ರಾವತ್ 2021ರಲ್ಲಿ ಐಪಿಎಲ್ಗೆ ಪಾದಾರ್ಪಣೆ ಮಾಡಿದರು. ಈ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ಅವರನ್ನು 80 ಲಕ್ಷ ರೂ. ನೀಡಿ ಖರೀದಿಸಿತ್ತು. ಅನುಜ್ ಅವರ ಚೊಚ್ಚಲ ಪಂದ್ಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧವಾಗಿತ್ತು. ಆದರೆ ಈ ಪಂದ್ಯದಲ್ಲಿ ಅವರು ಬ್ಯಾಟಿಂಗ್ ಮಾಡಲಿಲ್ಲ. ಅನುಜ್ ರಾವತ್ ಅವರ ಐಪಿಎಲ್ ವೃತ್ತಿಜೀವನದ ಬಗ್ಗೆ ಹೇಳುವುದಾದರೆ, ಅವರು 20 ಪಂದ್ಯಗಳಲ್ಲಿ 268 ರನ್ ಗಳಿಸಿದ್ದಾರೆ.
ಅನುಜ್ ರಾವತ್ ಮತ್ತು ಕಾರ್ತಿಕ್ ಅದ್ಭುತ ಬ್ಯಾಟಿಂಗ್!
ಈ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಮತ್ತು ಅನುಜ್ ರಾವತ್ 6ನೇ ವಿಕೆಟ್ಗೆ 95 ರನ್ಗಳ ಜೊತೆಯಾಟ ನೀಡಿದರು. ಇದರೊಂದಿಗೆ ಇಬ್ಬರೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6ನೇ ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಅತಿದೊಡ್ಡ ಜೊತೆಯಾಟದ ಸಾಧನೆ ಮಾಡಿದರು. ಇದಕ್ಕೂ ಮುನ್ನ ಸಿಎಸ್ಕೆ ವಿರುದ್ಧ ಬ್ಯಾಟಿಂಗ್ ಮಾಡುವಾಗ ಮುಂಬೈ ಮೈದಾನದಲ್ಲಿ ದಿನೇಶ್ ಕಾರ್ತಿಕ್ ಮತ್ತು ಆಂಡ್ರೆ ರಸೆಲ್ 6ನೇ ವಿಕೆಟ್ಗೆ 81 ರನ್ಗಳ ಜೊತೆಯಾಟವಾಡಿದ್ದರು.
ಇದನ್ನೂ ಓದಿ: ರಹಾನೆ-ರಚಿನ್ ಮಿಂಚಿನ ಓಟಕ್ಕೆ ವಿರಾಟ್ ಕೊಹ್ಲಿ ವಿಕೆಟ್ ಉಡೀಸ್… ವಾರೆ ವ್ಹಾ!! ಅದ್ಭುತ ಕ್ಯಾಚ್ ವಿಡಿಯೋ ಇಲ್ಲಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ