IPL 2023: ವ್ಯರ್ಥವಾದ ಕಾನ್ವೆ ಸ್ಪೋಟಕ ಬ್ಯಾಟಿಂಗ್, ಚೆನ್ನೈ ಬಗ್ಗು ಬಡಿದ ಪಂಜಾಬ್ ಕಿಂಗ್ಸ್

 ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಲ್ಕು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Zee Kannada News Desk | Last Updated : Apr 30, 2023, 07:47 PM IST
  • ಇದರಿಂದಾಗಿ ಚೆನ್ನೈ ತಂಡವು 20 ಓವರ್ ಗಳಲ್ಲಿ ಕೇವಲ ನಾಲ್ಕು ವಿಕೆಟ್ ನಷ್ಟಕ್ಕೆ 200 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿತು.
  • 201 ರನ್ ಗಳ ಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗೆಲುವಿನ ಗುರಿಯನ್ನು ತಲುಪಿತು.
 IPL 2023: ವ್ಯರ್ಥವಾದ ಕಾನ್ವೆ ಸ್ಪೋಟಕ ಬ್ಯಾಟಿಂಗ್, ಚೆನ್ನೈ ಬಗ್ಗು ಬಡಿದ ಪಂಜಾಬ್ ಕಿಂಗ್ಸ್ title=

ಚೆನ್ನೈ:  ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಲ್ಕು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಚೆನ್ನೈ ತಂಡವು ಭರ್ಜರಿ ಶುಭಾರಂಭವನ್ನು ಮಾಡಿತು.ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ ಹಾಗೂ ಕಾನ್ವೆ ಅವರ 86 ರನ್ ಗಳ ಜೊತೆಯಾಟವು ಬೃಹತ್ ಮೊತ್ತ ಗಳಿಸುವಲ್ಲಿ ನೆರವಾಯಿತು.ರುತುರಾಜ್ 31 ಎಸೆತಗಳಲ್ಲಿ 37 ರನ್ ಗಳಿಸಿದರೆ ಇನ್ನೊಂದೆಡೆಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಕಾನ್ವೆ ಕೇವಲ 52 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 16 ಬೌಂಡರಿಗಳ ನೆರವಿನಿಂದಾಗಿ ಬರೋಬ್ಬರಿ ಅಜೇಯ 92 ರನ್ ಗಳಿಸಿದರು.

ಇದರಿಂದಾಗಿ ಚೆನ್ನೈ ತಂಡವು 20 ಓವರ್ ಗಳಲ್ಲಿ ಕೇವಲ ನಾಲ್ಕು ವಿಕೆಟ್ ನಷ್ಟಕ್ಕೆ 200 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿತು.201 ರನ್ ಗಳ ಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗೆಲುವಿನ ಗುರಿಯನ್ನು ತಲುಪಿತು.

ಪಂಜಾಬ್ ತಂಡದ ಪರವಾಗಿ ಪ್ರಭ್ಸಿಮ್ರಾನ್ ಸಿಂಗ್ ಕೇವಲ 24 ಎಸೆತಗಳಲ್ಲಿ 42  ರನ್ ಗಳಿಸುವ ಮೂಲಕ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು, ಇನ್ನೂ ಮಧ್ಯಮ ಕ್ರಮಾಂಕದಲ್ಲಿ ಲಿವಿಂಗ್ ಸ್ಟೋನ್ ಸಹ ಸ್ಪೋಟಕ ಬ್ಯಾಟಿಂಗ್ ಆಡಿ ಕೇವಲ 24 ಎಸೆತಗಳಲ್ಲಿ 40 ರನ್ ಗಳಿಸಿ ತಂಡದ ಗೆಲುವಿಗೆ ನೆರವಾದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News