Indian Premier League 2024: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆಂಡ್ರೆ ರಸೆಲ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಪರಿಣಾಮ ಕೋಲ್ಕತ್ತಾ ನೈಟ್ ರೈಡರ್ಸ್ ಬೃಹತ್ ಮೊತ್ತ ಪೇರಿಸಿ 4 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಆಂಡ್ರೆ ರಸೆಲ್ 25 ಎಸೆತಗಳಲ್ಲಿ 3 ಬೌಂಡರಿ ಮತ್ತು 7 ಸಿಕ್ಸರ್‌ಗಳೊಂದಿಗೆ ಅಜೇಯ 64 ರನ್ ಗಳಿಸಿದರು. 256 ಸ್ಟ್ರೈಕ್‌ರೇಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.
ಒಂದು ಹಂತದಲ್ಲಿ ಕೋಲ್ಕತ್ತಾ ತಂಡವು 15 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಕೇವಲ 123 ರನ್ ಗಳಿಸಿತ್ತು. ರಿಂಕು ಸಿಂಗ್ ಜೊತೆಗೂಡಿ ಏಳನೇ ವಿಕೆಟ್‌ಗೆ ರಸೆಲ್ 81 ರನ್‌ಗಳ ಜೊತೆಯಾಟ ನೀಡಿದರು. ಪರಿಣಾಮ ಕೆಕೆಆರ್ 208 ರನ್‌ಗಳ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು. ಐಪಿಎಲ್‌ನಲ್ಲಿ ರಸೆಲ್ 1,325 ಎಸೆತಗಳಲ್ಲಿ 153 ಬೌಂಡರಿ ಮತ್ತು 200 ಸಿಕ್ಸರ್‌ಗಳನ್ನು ಒಳಗೊಂಡಂತೆ ಒಟ್ಟಾರೆ 2,326 ರನ್ ಗಳಿಸಿದ ಸಾಧನೆ ಮಾಡಿದರು.
ಇದನ್ನೂ ಓದಿ: 208 ಬೃಹತ್ ಮೊತ್ತದ ರನ್ ಸಾಧಿಸಿದ ಕೆಕೆಆರ್ : ಗೆಲುವಿನ ಗುರಿಯನ್ನು ತಲುಪುವ ಭರದಲ್ಲಿ ಹೈದರಬಾದ್
Russell Mania in Kolkata 👌
Andre Russell’s thunderous all round performance earns him the Player of the Match award 🏆
Scorecard ▶️ https://t.co/xjNjyPa8V4 #TATAIPL | #KKRvSRH pic.twitter.com/PbkcrsSEed
— IndianPremierLeague (@IPL) March 23, 2024
ಆಂಡ್ರೆ ರಸೆಲ್ ವಿಶೇಷ ಸಾಧನೆ
ಇನ್ನು ಈ ಪಂದ್ಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಆಂಡ್ರೆ ರಸೆಲ್ 97 ಇನ್ನಿಂಗ್ಸ್‌ಗಳಲ್ಲಿ 200 ಸಿಕ್ಸ್ ಸಿಡಿಸಿದ ವಿಶೇಷ ಸಾಧನೆ ಮಾಡಿದರು. ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ಅತಿಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಗೇಲ್ 141 ಇನ್ನಿಂಗ್ಸ್‌ಗಳಲ್ಲಿ 357 ಸಿಕ್ಸರ್‌ಗಳನ್ನು ಬಾರಿಸಿದ್ದರೆ, ರೋಹಿತ್ ಶರ್ಮಾ 238 ಇನ್ನಿಂಗ್ಸ್‌ಗಳಲ್ಲಿ 257 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಎಬಿ ಡಿವಿಲಿಯರ್ಸ್ 170 ಇನ್ನಿಂಗ್ಸ್‌ಗಳಲ್ಲಿ 251 ಸಿಕ್ಸರ್‌ಗಳನ್ನು ಬಾರಿಸಿದ್ದರೆ, ಎಂ.ಎಸ್.ಧೋನಿ 218 ಇನ್ನಿಂಗ್ಸ್‌ಗಳಲ್ಲಿ 239 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ 230 ಇನ್ನಿಂಗ್ಸ್‌ಗಳಲ್ಲಿ 235 ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.
ಕೋಲ್ಕತ್ತಾಗೆ ರೋಚಕ ಗೆಲುವು!
ಶನಿವಾರ ನಡೆದ ಐಪಿಎಲ್ ಟೂರ್ನಿಯ ೩ನೇ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಕೋಲ್ಕತ್ತಾ ೪ ರನ್‌ಗಳ ರೋಚಕ ಗೆಲುವು ಸಾಧಿಸಿತು. ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ ಆಯ್ದಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನಿಗದಿತ ೨೦ ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ಗಳಿಸಿತು. ಬೃಹತ್ ಮೊತ್ತದ ಟಾರ್ಗೆಟ್ ಬೆನ್ನತ್ತಿದ ಹೈದರಾಬಾದ್ ಗೆಲುವಿನ ಸಮೀಪ ಬಂದು ಸೋಲು ಕಂಡಿತು. ಹೆನ್ರಿಚ್ ಕ್ಲಾಸಿನ್ ಏಕಾಂಗಿ ಹೋರಾಟ ನಡೆಸಿದರೂ ಪ್ರಯೋಜನವಾಗಲಿಲ್ಲ. ಹೈದರಾಬಾದ್ ೨೦ ಓವರ್‌ಗಳಲ್ಲಿ ೭ ವಿಕೆಟ್ ಕಳೆದುಕೊಂಡು ೨೦೪ ರನ್ ಗಳಿಸಲಷ್ಟೇ ಶಕ್ತವಾಯಿತು.
ಇದನ್ನೂ ಓದಿ: KKR Vs SRH : 208ರನ್ ಗಳ ಭರ್ಜರಿ ಮೊತ್ತದೊಂದಿಗೆ, ಭರ್ಜರಿ 4 ರನ್ ಅಂತರದಿಂದ ಗೆಲುವು ಸಾಧಿಸಿದ ಕೆಕೆಆರ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ