Ireland vs India, 2nd T20I: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 33 ರನ್ ಗಳ ಭರ್ಜರಿ ಗೆಲುವು

ಡಬ್ಲಿನ್ ನಲ್ಲಿ ನಡೆದ ಐರ್ಲೆಂಡ್ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಟೀಮ್ ಇಂಡಿಯಾ 33 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Written by - Manjunath N | Last Updated : Aug 21, 2023, 05:17 AM IST
  • ಮೊದಲು ಟಾಸ್ ಗೆದ್ದ ಐರ್ಲೆಂಡ್ ತಂಡವು ಟೀಮ್ ಇಂಡಿಯಾಗೆ ಬ್ಯಾಟಿಂಗ್ ಅವಕಾಶ ನೀಡಿತು.
  • 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 185 ರನ್ ಗಳನ್ನು ಗಳಿಸಿತು.
 Ireland vs India, 2nd T20I: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 33 ರನ್ ಗಳ ಭರ್ಜರಿ ಗೆಲುವು  title=

ನವದೆಹಲಿ: ಡಬ್ಲಿನ್ ನಲ್ಲಿ ನಡೆದ ಐರ್ಲೆಂಡ್ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಟೀಮ್ ಇಂಡಿಯಾ 33 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಮೊದಲು ಟಾಸ್ ಗೆದ್ದ ಐರ್ಲೆಂಡ್ ತಂಡವು ಟೀಮ್ ಇಂಡಿಯಾಗೆ ಬ್ಯಾಟಿಂಗ್ ಅವಕಾಶ ನೀಡಿತು.ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಭಾರತದ ರುತುರಾಜ್ ಗಾಯಕ್‌ವಾಡ್ (43 ಎಸೆತಗಳಲ್ಲಿ 58), ರಿಂಕು ಸಿಂಗ್ (21 ಎಸೆತಗಳಲ್ಲಿ 38) ಮತ್ತು ಸಂಜು ಸ್ಯಾಮ್ಸನ್ (26 ಎಸೆತಗಳಲ್ಲಿ 40)  ಅವರ ಬ್ಯಾಟಿಂಗ್ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 185 ರನ್ ಗಳನ್ನು ಗಳಿಸಿತು.

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಮಂಡ್ಯದಲ್ಲಿ ರೈತರ ಮೌನ ಪ್ರತಿಭಟನೆ

ಟೀಮ್ ಇಂಡಿಯಾ ನೀಡಿದ 186 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ತಂಡವು 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 152 ರನ್ ಗಳನ್ನು ಗಳಿಸಲು ಮಾತ್ರ ಶಕ್ತವಾಯಿತು.ಐರ್ಲೆಂಡ್ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ ಆಂಡ್ರ್ಯೂ ಬಾಲ್ಬಿರ್ನಿ ಕೇವಲ 51 ಎಸೆತಗಳಲ್ಲಿ ಐದು ಬೌಂಡರಿ ನಾಲ್ಕು ಸಿಕ್ಸರ್ ನೆರವಿನಿಂದ 72 ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡ್ಯೋಯ್ಯುವ ಪ್ರಯತ್ನ ಮಾಡಿದ್ದರು. ಆದರೆ ಅಂತಿಮವಾಗಿ ಆರ್ಸ್ದೀಪ್ ಇವರ ವಿಕೆಟ್ ಕಬಳಿಸುವ ಮೂಲಕ ಐರ್ಲೆಂಡ್ ಗೆಲುವಿಗೆ ಕಡಿವಾಣ ಹಾಕಿದರು.

ಟೀಮ್ ಇಂಡಿಯಾದ ಪರವಾಗಿ ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ ಮತ್ತು ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್ ಪಡೆಯುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News