ಶಿಮ್ಲಾ (ಹಿಮಾಚಲ ಪ್ರದೇಶ): ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದಾರಾ? ಎನ್ನುವ ಪ್ರಶ್ನೆ ಈಗ ಎಲ್ಲರಲ್ಲೂ ಎದುರಾಗಿದೆ. ಹೌದು, ಮೇ 12 ರಿಂದ ಮೇ 15 ರವರೆಗೆ ಧರ್ಮಶಾಲಾದಲ್ಲಿ ನಡೆಯಲಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಅಧಿವೇಶನದಲ್ಲಿ ರಾಹುಲ್ ದ್ರಾವಿಡ್ ಅವರ ಉಪಸ್ಥಿತಿ ಈಗ ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ.
ಈಗ ಈ ವಿಚಾರವಾಗಿ ಮಾತನಾಡಿದ ಬಿಜೆಪಿ ಧರ್ಮಶಾಲಾ ಶಾಸಕ ವಿಶಾಲ್ ನೆಹ್ರಿಯಾ ಈ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ದ್ರಾವಿಡ್ ಅವರು ಹಾಜರಾಗಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಬಿಜೆಪಿ ಶಾಸಕರು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಇತರ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರು ಉಪಸ್ಥಿತರಿರುತ್ತಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ವಿಜ್ಞಾನ ಸುಳ್ಳು ಹೇಳುವುದಿಲ್ಲ, ಪ್ರಧಾನಿ ಮೋದಿ ಸುಳ್ಳು ಹೇಳುತ್ತಾರೆ: ರಾಹುಲ್ ಗಾಂಧಿ
ಮೂರು ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಕೂಡ ಭಾಗವಹಿಸಲಿದ್ದಾರೆ.ದೇಶದಾದ್ಯಂತ 139 ಪ್ರತಿನಿಧಿಗಳು ಅಧಿವೇಶನದಲ್ಲಿ ತಮ್ಮ ಉಪಸ್ಥಿತರಿರುತ್ತಾರೆ.ಮೇ 12ರಿಂದ 15ರವರೆಗೆ ಧರ್ಮಶಾಲಾದಲ್ಲಿ ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ.ಬಿಜೆಪಿಯ ರಾಷ್ಟ್ರೀಯ ನಾಯಕತ್ವ ಮತ್ತು ಹಿಮಾಚಲ ಪ್ರದೇಶದ ನಾಯಕತ್ವ ಭಾಗಿಯಾಗಲಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನೆ ಸಚಿವರು, ಕೇಂದ್ರ ಸಚಿವರು ಇದರಲ್ಲಿ ಭಾಗವಹಿಸಲಿದ್ದಾರೆ'ಎಂದು ನೆಹ್ರಿಯಾ ಹೇಳಿದರು.
ಇದನ್ನೂ ಓದಿ: Aadhar Card ನಲ್ಲಿ ಎಷ್ಟು ಬಾರಿ ಹೆಸರು - ವಿಳಾಸ ಬದಲಾಯಿಸಬಹುದು, ಇಲ್ಲಿದೆ UIDAI ನಿಯಮಗಳು
ದ್ರಾವಿಡ್ ಅವರ ಉಪಸ್ಥಿತಿಯು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಯುವಕರಿಗೂ ಸಂದೇಶವನ್ನು ನೀಡುತ್ತದೆ ಎಂದು ನೆಹ್ರಿಯಾ ಹೇಳಿದರು.'ಭಾರತೀಯ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ.ಅವರ ಯಶಸ್ಸಿನಿಂದ ನಾವು ರಾಜಕೀಯದಲ್ಲಿ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಲಿರುವ ಯುವಕರಿಗೂ ಸಂದೇಶವನ್ನು ರವಾನಿಸಲಾಗುತ್ತದೆ" ಎಂದು ಅವರು ಹೇಳಿದರು.
ಈ ವರ್ಷ ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಈ ಬೆಳವಣಿಗೆ ಬಂದಿದೆ.2017 ರ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಕಾಂಗ್ರೆಸ್ 21 ಮತ್ತು ಇತರರು ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.