ಧೋನಿಯಂತೆ ಕೀಪಿಂಗ್, ಪಂತ್’ನಂತೆ ಬ್ಯಾಟಿಂಗ್.. ODIನಲ್ಲಿ ದ್ವಿಶತಕ ಸಿಡಿಸಿದ ಈ ಕಿಲಾಡಿ ಟೆಸ್ಟ್ ಕ್ರಿಕೆಟ್’ಗೆ ಲಗ್ಗೆ!

Cricket News in Kannada: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದ ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್ ಗಳು ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಆಟಗಾರರು ಕೆಎಸ್ ಭರತ್ ಮತ್ತು ಇಶಾನ್ ಕಿಶನ್.

Written by - Bhavishya Shetty | Last Updated : Jul 11, 2023, 07:34 AM IST
    • ಟೀಮ್ ಇಂಡಿಯಾ ಈಗ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ತನ್ನ ಹೊಸ ಋತುವನ್ನು ಶುರು ಮಾಡಲಿದೆ
    • ಜುಲೈ 12 ರಿಂದ ಉಭಯ ತಂಡಗಳ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
    • ರಿಷಭ್ ಪಂತ್ ಅವರಂತಹ ಡ್ಯಾಶಿಂಗ್ ಆಟಗಾರ ಪ್ಲೇಯಿಂಗ್ 11 ರಲ್ಲಿ ಆಡುವ ಅವಕಾಶ ಪಡೆಯಬಹುದು.
ಧೋನಿಯಂತೆ ಕೀಪಿಂಗ್, ಪಂತ್’ನಂತೆ ಬ್ಯಾಟಿಂಗ್.. ODIನಲ್ಲಿ ದ್ವಿಶತಕ ಸಿಡಿಸಿದ ಈ ಕಿಲಾಡಿ ಟೆಸ್ಟ್ ಕ್ರಿಕೆಟ್’ಗೆ ಲಗ್ಗೆ!  title=
ishan kishan

India vs West Indies 1st Test: ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ 2023 (WTC 2023) ನ ಫೈನಲ್‌ ನಲ್ಲಿ ಸೋಲು ಕಂಡ ಬಳಿಕ, ಟೀಮ್ ಇಂಡಿಯಾ ಈಗ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ತನ್ನ ಹೊಸ ಋತುವನ್ನು ಶುರು ಮಾಡಲಿದೆ. ಜುಲೈ 12 ರಿಂದ ಉಭಯ ತಂಡಗಳ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಇನ್ನು ಈ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಅವರಂತಹ ಡ್ಯಾಶಿಂಗ್ ಆಟಗಾರ ಪ್ಲೇಯಿಂಗ್ 11 ರಲ್ಲಿ ಆಡುವ ಅವಕಾಶ ಪಡೆಯಬಹುದು. ಈ ಆಟಗಾರ ಟೀಂ ಇಂಡಿಯಾ ಪರ ಏಕದಿನ ಮತ್ತು ಟಿ20 ಮಾದರಿಯಲ್ಲಿ ಮಾತ್ರ ಆಡಿದ್ದಾರೆ. ಆದರೆ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಈ ಆಟಗಾರ ಟೆಸ್ಟ್ ತಂಡದಲ್ಲೂ ಆಡುವುದನ್ನು ಕಾಣಬಹುದು.

ಇದನ್ನೂ ಓದಿ: Cafe Coffee Day Story: ಪತಿ ಆತ್ಮಹತ್ಯೆ, ಕಂಪನಿಗೆ 7000 ಕೋಟಿ ಸಾಲ ಇತ್ತು, ಸಿಸಿಡಿಯ 'ರಕ್ಷಕ' ಮಾಳವಿಕಾ

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದ ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್ ಗಳು ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಆಟಗಾರರು ಕೆಎಸ್ ಭರತ್ ಮತ್ತು ಇಶಾನ್ ಕಿಶನ್. ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಕೆಎಸ್ ಭರತ್ ಟೀಂ ಇಂಡಿಯಾದಲ್ಲಿ ನಿರಂತರವಾಗಿ ಅವಕಾಶ ಪಡೆಯುತ್ತಿದ್ದಾರೆ. ಆದರೆ ಒಂದೇ ಒಂದು ಅವಕಾಶವನ್ನೂ ಉತ್ತಮವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಿರುವಾಗ ಇಶಾನ್ ಕಿಶನ್ ಮುಂಬರುವ ಟೆಸ್ಟ್ ಸರಣಿಯಲ್ಲಿ ಪಾದಾರ್ಪಣೆ ಮಾಡುವ ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಿದೆ.

ಈಗಾಗಲೇ  ಇಶಾನ್ ಕಿಶನ್ ಟೆಸ್ಟ್ ಸರಣಿಗಾಗಿ ನೆಟ್ಸ್‌ನಲ್ಲಿ ಬೆವರು ಹರಿಸುತ್ತಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಗಾಯಗೊಂಡಿರುವ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆದರೆ ಅವರು ಪ್ಲೇಯಿಂಗ್ 11 ರ ಭಾಗವಾಗಲು ಸಾಧ್ಯವಾಗಲಿಲ್ಲ. ಇದಕ್ಕೂ ಮೊದಲು, ಆಸ್ಟ್ರೇಲಿಯಾ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲೂ ತಂಡದ ಭಾಗವಾಗಿದ್ದರು.

ಇಶಾನ್ ಕಿಶನ್ 48 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ 38.76ರ ಸರಾಸರಿಯಲ್ಲಿ 2985 ರನ್ ಗಳಿಸಿದ್ದಾರೆ. ಅದರಲ್ಲಿ 16 ಅರ್ಧ ಶತಕ ಮತ್ತು 6 ಶತಕಗಳು ಒಳಗೊಂಡಿದೆ.

ಟೀಂ ಇಂಡಿಯಾದ ಇದುವರೆಗಿನ ಪ್ರದರ್ಶನ:

ಇಶಾನ್ ಕಿಶನ್ ಟೀಂ ಇಂಡಿಯಾ ಪರ ಇದುವರೆಗೆ 14 ಏಕದಿನ ಹಾಗೂ 27 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ 1 ದ್ವಿಶತಕ ಸೇರಿದಂತೆ 510 ರನ್ ಗಳಿಸಿದ್ದಾರೆ. ಮತ್ತೊಂದೆಡೆ, ಅವರು ಟಿ20ಯಲ್ಲಿ 653 ರನ್ ಗಳಿಸಿದ್ದಾರೆ.

ಇದನ್ನೂ ಓದಿ: ಬಿಸಿಬಿಸಿ ರಾಗಿಮುದ್ದೆ-ನಾಟಿ ಕೋಳಿ ಸಾರಿನ ಘಮ ಘಮ..ಮುದ್ದೆ ತಿನ್ನುವ ಸ್ಪರ್ಧೆ..!

ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಭಾರತೀಯ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್ ಮತ್ತು ನವದೀಪ್ ಸೈನಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News