Kane Williamson: ಇದೇ ಕಾರಣಕ್ಕೆ ನಾಯಕತ್ವ ತೊರೆದ ಕೇನ್ ವಿಲಿಯಮ್ಸನ್: ಮುಂದಿನ ಕ್ಯಾಪ್ಟನ್ ಇವರೇ

Kane Williamson steps down as Test captain:  ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಕೇನ್ ವಿಲಿಯಮ್ಸನ್ ಹೇಳಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಮೂರು ಮಾದರಿಗಳಲ್ಲಿ ಆಡುವ ಬಯಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅವರು ಏಕದಿನ ಮತ್ತು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್‌ನ ನಾಯಕತ್ವವು ನನಗೆ ನಂಬಲಾಗದ ವಿಶೇಷ ಗೌರವವಾಗಿದೆ ಎಂದು ವಿಲಿಯಮ್ಸನ್ ಹೇಳಿದರು.

Written by - Bhavishya Shetty | Last Updated : Dec 15, 2022, 11:58 AM IST
    • ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವವನ್ನು ತ್ಯಜಿಸಲು ನಿರ್ಧರಿಸಿದ್ದಾರೆ
    • ವಿಲಿಯಮ್ಸನ್ ಅವರು ಟಿ20 ಮತ್ತು ಏಕದಿನ ಮಾದರಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ
    • ಮುಂದಿನ ವರ್ಷ ಅಂದರೆ 2023ರಲ್ಲಿ ಏಕದಿನ ವಿಶ್ವಕಪ್ ಕೂಡ ನಡೆಯಲಿದೆ
Kane Williamson: ಇದೇ ಕಾರಣಕ್ಕೆ ನಾಯಕತ್ವ ತೊರೆದ ಕೇನ್ ವಿಲಿಯಮ್ಸನ್: ಮುಂದಿನ ಕ್ಯಾಪ್ಟನ್ ಇವರೇ title=
Kane Williamson

Kane Williamson steps down as Test captain: ಅನುಭವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವವನ್ನು ತ್ಯಜಿಸಲು ನಿರ್ಧರಿಸಿದ್ದಾರೆ. ಬುಧವಾರ ರಾತ್ರಿ ನ್ಯೂಜಿಲೆಂಡ್ ಕ್ರಿಕೆಟ್ ಈ ಬಗ್ಗೆ ಮಾಹಿತಿ ನೀಡಿದೆ. ಆದರೆ, ವಿಲಿಯಮ್ಸನ್ ಅವರು ಟಿ20 ಮತ್ತು ಏಕದಿನ ಮಾದರಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದು ಅವರ ಅಭಿಮಾನಿಗಳಿಗೆ ಸಂತಸದ ಸುದ್ದಿ. ಮುಂದಿನ ವರ್ಷ ಅಂದರೆ 2023ರಲ್ಲಿ ಏಕದಿನ ವಿಶ್ವಕಪ್ ಕೂಡ ನಡೆಯಲಿದೆ. ವಿಲಿಯಮ್ಸನ್ ನಾಯಕತ್ವದಲ್ಲಿ, ನ್ಯೂಜಿಲೆಂಡ್ ಭಾರತವನ್ನು ಸೋಲಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: Lionel Messi Retirement: ಫುಟ್ಬಾಲ್ ಲೋಕಕ್ಕೆ ‘ಮೆಸ್ಸಿ’ ವಿದಾಯ!! ಸಂದರ್ಶನದಲ್ಲಿ ರಿವೀಲ್ ಆಯ್ತು ಸತ್ಯಾಂಶ

ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಕೇನ್ ವಿಲಿಯಮ್ಸನ್ ಹೇಳಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಮೂರು ಮಾದರಿಗಳಲ್ಲಿ ಆಡುವ ಬಯಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅವರು ಏಕದಿನ ಮತ್ತು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್‌ನ ನಾಯಕತ್ವವು ನನಗೆ ನಂಬಲಾಗದ ವಿಶೇಷ ಗೌರವವಾಗಿದೆ ಎಂದು ವಿಲಿಯಮ್ಸನ್ ಹೇಳಿದರು.

“ಈ ಮಾದರಿಯಲ್ಲಿ ತಂಡವನ್ನು ಮುನ್ನಡೆಸುವ ಸವಾಲುಗಳನ್ನು ಅನುಭವಿಸಿದ್ದೇನೆ. ನಾಯಕತ್ವದಿಂದ ಮೈದಾನದ ಒಳಗೆ ಮತ್ತು ಹೊರಗೆ ಕೆಲಸದ ಹೊರೆ ಹೆಚ್ಚಾಗುತ್ತದೆ. ನನ್ನ ವೃತ್ತಿಜೀವನದ ಈ ಹಂತದಲ್ಲಿ, ಈ ನಿರ್ಧಾರಕ್ಕೆ ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ನ್ಯೂಜಿಲೆಂಡ್ ಕ್ರಿಕೆಟ್ (NZC) ನೊಂದಿಗೆ ಚರ್ಚಿಸಿದ ನಂತರ ಮುಂದಿನ ಎರಡು ವರ್ಷಗಳಲ್ಲಿ ಎರಡು ವಿಶ್ವಕಪ್‌ಗಳೊಂದಿಗೆ ಸೀಮಿತ ಓವರ್‌ಗಳ ಸ್ವರೂಪಗಳಲ್ಲಿ ನಾಯಕತ್ವದಲ್ಲಿ ಮುಂದುವರಿಯುವುದು ಉತ್ತಮ ಎಂದು ನಾವು ಭಾವಿಸಿದ್ದೇವೆ” ಎಂದರು.

ಇದನ್ನೂ ಓದಿ: IPL auction: ಧೋನಿ ಕೈಬಿಟ್ಟಿದ್ದ ಈ ಆಟಗಾರ ಐಪಿಎಲ್ ಹರಾಜಿನಲ್ಲಿ ಕೋಟಿಗೆ ಸೇಲ್!

ಅನುಭವಿ ವೇಗದ ಬೌಲರ್ ಟಿಮ್ ಸೌಥಿ ಟೆಸ್ಟ್ ಮಾದರಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. 34 ವರ್ಷದ ಸೌಥಿ, ಬಲಗೈ ಮಧ್ಯಮ ವೇಗಿ. ಇದುವರೆಗೆ 88 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಸುದೀರ್ಘ ಸ್ವರೂಪದ ಕ್ರಿಕೆಟ್‌ನಲ್ಲಿ ಅವರು ಒಟ್ಟು 347 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ, ಅವರು ಟೆಸ್ಟ್‌ನಲ್ಲಿ 5 ಅರ್ಧ ಶತಕಗಳೊಂದಿಗೆ 1855 ರನ್ ಗಳಿಸಿದ್ದಾರೆ. ಏಕದಿನದಲ್ಲಿ 204 ಹಾಗೂ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 134 ವಿಕೆಟ್‌ಗಳನ್ನು ಪಡೆದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News