Dhoni name on bat: ಈ ಕ್ರಿಕೆಟರ್‌ ಬ್ಯಾಟ್‌ ಮೇಲಿದೆ ಲೆಜೆಂಡರಿ ಕ್ರಿಕೆಟಿಗ ಧೋನಿ ಹೆಸರು

WPL 2023: ಮಹಿಳೆಯರ ಪ್ರೀಮಿಯರ್ ಲೀಗ್ 2023 ಮಾರ್ಚ್ 4 ರಿಂದ ಪ್ರಾರಂಭವಾಗಿದೆ. ಭಾನುವಾರ ನಡೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿತು.

Written by - Chetana Devarmani | Last Updated : Mar 6, 2023, 12:35 PM IST
  • ಮಹಿಳೆಯರ ಪ್ರೀಮಿಯರ್ ಲೀಗ್ 2023
  • ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ಪಂದ್ಯ
  • ಈ ಕ್ರಿಕೆಟರ್‌ ಬ್ಯಾಟ್‌ ಮೇಲಿದೆ ಕ್ರಿಕೆಟಿಗ ಧೋನಿ ಹೆಸರು
Dhoni name on bat: ಈ ಕ್ರಿಕೆಟರ್‌ ಬ್ಯಾಟ್‌ ಮೇಲಿದೆ ಲೆಜೆಂಡರಿ ಕ್ರಿಕೆಟಿಗ ಧೋನಿ ಹೆಸರು  title=
WPL 2023

Kiran Navgire writes MS Dhoni name on her bat: ಮಹಿಳೆಯರ ಪ್ರೀಮಿಯರ್ ಲೀಗ್ 2023 ಮಾರ್ಚ್ 4 ರಿಂದ ಪ್ರಾರಂಭವಾಗಿದೆ. ಭಾನುವಾರ ನಡೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿತು. ಮೈದಾನದಲ್ಲಿ ಅಪರೂಪಕ್ಕೆ ಕಾಣಸಿಗುವ ಘಟನೆ ಈ ಪಂದ್ಯದಲ್ಲಿ ಕಂಡುಬಂದಿದೆ. ಯುಪಿ ತಂಡದ ಆಟಗಾರ್ತಿಯೊಬ್ಬರು ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಅಭಿಮಾನಿಯಾಗಿದ್ದು, ಒಂದು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮಹೇಂದ್ರ ಸಿಂಗ್ ಧೋನಿ ಅವರ ಫ್ಯಾನ್ ಫಾಲೋಯಿಂಗ್ ಅತಿ ದೊಡ್ಡದಾಗಿದೆ. ಸ್ಟಾರ್‌ ಆಟಗಾರರಿಂದ  ಹಿಡಿದು ಚಿಕ್ಕ ಮಕ್ಕಳವರೆಗೂ ಅವರ ಅಭಿಮಾನಿಗಳಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡದ ಬ್ಯಾಟ್ಸ್ ಮನ್ ಕಿರಣ್ ನವಗಿರೆ ಎಲ್ಲರ ಗಮನ ತನ್ನತ್ತ ಸೆಳೆದುಕೊಂಡಿದ್ದಾರೆ. ವಾಸ್ತವವಾಗಿ, ಅವರು ಬ್ಯಾಟಿಂಗ್‌ಗೆ ಬಂದಾಗ, ಅವರ ಬ್ಯಾಟ್‌ನಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರನ್ನು ಬರೆಯಲಾಗಿದೆ. ಅಷ್ಟೇ ಅಲ್ಲ, ಧೋನಿ ಅವರ ಬ್ಯಾಟ್‌ನಲ್ಲಿ ಅವರ ಜೆರ್ಸಿ ಸಂಖ್ಯೆ 07 ಅನ್ನು ಸಹ ಬರೆಯಲಾಗಿದೆ. ಅವರು ಎಂಎಸ್ ಧೋನಿಯ ದೊಡ್ಡ ಅಭಿಮಾನಿ ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

ಇದನ್ನೂ ಓದಿ : WPL 2023 : ಯುಪಿ ವಾರಿಯರ್ಸ್'ಗೆ ರೋಚಕ ಗೆಲುವು, ಗುಜರಾತ್‌ಗೆ ಸತತ ಎರಡನೇ ಸೋಲು!

ಕಿರಣ್ ನವಗಿರೆ ಬ್ಯಾಟಿಂಗ್‌ಗೆ ಇಳಿದಾಗ ಯುಪಿ ತಂಡ ಸಂಕಷ್ಟಕ್ಕೆ ಸಿಲುಕಿತ್ತು. ತಂಡ 13 ರನ್‌ಗೆ 1 ವಿಕೆಟ್ ಕಳೆದುಕೊಂಡಿತ್ತು. ಇಂತಹ ಪರಿಸ್ಥಿತಿಯಲ್ಲಿ ಕಿರಣ್ 170 ರನ್ ಗಳ ಗುರಿ ಬೆನ್ನತ್ತುವಲ್ಲಿ ಪ್ರಮುಖ ಪಾತ್ರ ವಹಿಸಿದರು. 43 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 53 ರನ್ ಗಳಿಸಿದರು. 1 ಎಸೆತ ಬಾಕಿ ಇರುವಂತೆಯೇ ತಂಡ 3 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.

2011 ರ ವಿಶ್ವಕಪ್‌ನಿಂದ ಮಹೇಂದ್ರ ಸಿಂಗ್ ಧೋನಿಯನ್ನು ಅನುಸರಿಸುತ್ತಿದ್ದೇನೆ ಎಂದು ಕಿರಣ್ ನವಗಿರೆ ಜಿಯೋ ಸಿನಿಮಾದ ಸಂದರ್ಶನದಲ್ಲಿ ಹೇಳಿದ್ದಾರೆ. ಆಗ ನನಗೆ ಮಹಿಳಾ ಕ್ರಿಕೆಟ್ ಕೂಡ ನಡೆಯುತ್ತದೆ ಎಂದು ತಿಳಿದಿರಲಿಲ್ಲ. ನಾನು ಪುರುಷರ ಕ್ರಿಕೆಟ್ ನೋಡಿದೆ ಮತ್ತು ನನ್ನ ಹಳ್ಳಿಯಲ್ಲಿ ಹುಡುಗರೊಂದಿಗೆ ಆಟವಾಡಲು ಪ್ರಾರಂಭಿಸಿದೆ. ಅಂದಿನಿಂದ ನಾನು ಕ್ರಿಕೆಟ್ ಅನ್ನು ಪ್ರೀತಿಸುತ್ತೇನೆ ಎಂದು ಹೇಳಿದರು. 

ಇದನ್ನೂ ಓದಿ : Sania Mirza : ಟೆನಿಸ್ ವೃತ್ತಿಜೀವನಕ್ಕೆ ಗುಡ್ ಬೈ ಹೇಳಿದ ಸಾನಿಯಾ ಮಿರ್ಜಾ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News