KL Rahul: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಭೇಟಿ

KL Rahul visits Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನದ ಬಳಿಕ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ​

Written by - Zee Kannada News Desk | Last Updated : Jun 25, 2023, 03:49 PM IST
  • ದಕ್ಷಿಣ ಕನ್ನಡ ಜಿಲ್ಲೆಯ ನಾಗಾರಾಧನೆಯ ಪುಣ್ಯತಾಣ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೆ.ಎಲ್.ರಾಹುಲ್ ಭೇಟಿ
  • ಶ್ರೀ ದೇವಳಕ್ಕೆ ಆಗಮಿಸಿದ ಟೀಂ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು
  • ಕುಕ್ಕೆ ಸುಬ್ರಹ್ಮಣ್ಯ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಕೆ.ಎಲ್.ರಾಹುಲ್
KL Rahul: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಭೇಟಿ title=
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೆ.ಎಲ್.ರಾಹುಲ್ ಭೇಟಿ

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ನಾಗಾರಾಧನೆಯ ಪುಣ್ಯತಾಣ, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಶ್ರೀ ದೇವಳಕ್ಕೆ ಆಗಮಿಸಿದ ಕೆ.ಎಲ್.ರಾಹುಲ್ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ಅರ್ಚಕರು ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಅವರು ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ನಂತರ ದೇವಳದಲ್ಲಿ ಪ್ರಸಾದ ಭೋಜನ ಸ್ವೀಕರಿಸಿದರು.

ಇದನ್ನೂ ಓದಿ: "ರಣಜಿ ಆಡುವುದನ್ನು ನಿಲ್ಲಿಸಿ " ಶಾಕಿಂಗ್ ಹೇಳಿಕೆ ನೀಡಿದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್

ಕ್ಷೇತ್ರಕ್ಕೆ ಆಗಮಿಸಿದ ಕೆ.ಎಲ್.ರಾಹುಲ್ ಅವರನ್ನು ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್ ಸ್ವಾಗತಿಸಿದರು. ಕುಕ್ಕೆ ಸುಬ್ರಹ್ಮಣ್ಯನ ಅನನ್ಯ ಭಕ್ತರಾದ ರಾಹುಲ್ ಪ್ರತಿವರ್ಷ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆಯುತ್ತಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನದ ಬಳಿಕ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ರಾಹುಲ್‌ಗೆ ಹೆಗ್ಗಡೆಯವರು ಶಾಲು ಹೊದಿಸಿ ಬೆಳ್ಳಿಯ ನಾಣ್ಯ, ಗೋವಿನ ಕಂಚಿನ ಪ್ರತಿಮೆಯನ್ನು ನೀಡಿ ಗೌರವಿಸಿದರು. ಈ ವೇಳೆ ಹೆಗ್ಗಡೆ ಕುಟುಂಬದವರು ಜೊತೆಯಲ್ಲಿದ್ದರು.

ಇದನ್ನೂ ಓದಿ: India tour of West Indies 2023: ಚೇತೇಶ್ವರ ಪೂಜಾರ ಬದಲಿಗೆ ಟಾಪ್ 5 ಆಟಗಾರರು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News