Indian Cricket Team: ಟೀಂ ಇಂಡಿಯಾ ಜುಲೈ 12 ರಿಂದ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಪ್ರವಾಸದಲ್ಲಿ ಡ್ಯಾಶಿಂಗ್ ಬ್ಯಾಟ್ಸ್‌ಮನ್ ಟೀಮ್ ಇಂಡಿಯಾದ ಭಾಗವಾಗಲು ಸಾಧ್ಯವಾಗಿಲ್ಲ. ಆದರೆ ಈಗ ದುಲೀಪ್ ಟ್ರೋಫಿ 2023 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ವರ್ಷದ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿಯಿಂದಲೂ ಈ ಆಟಗಾರನನ್ನು ಕೈಬಿಡಲಾಗಿತ್ತು ಎಂಬುದನ್ನು ಇಲ್ಲಿ ಉಲ್ಲೇಖಿಸಲೇಬೇಕು.
ಇದನ್ನೂ ಓದಿ: ಇನ್ನೇಕೆ 7 ಸೀಟರ್… ಬಂದೇಬಿಡ್ತು 10 ಸೀಟರ್ ಕಾರು: ಹಿಂದೆಂದೂ ಕಂಡಿರದ ಅದ್ಭುತ ಫೀಚರ್: ಬೆಲೆಯೂ ಭಾರೀ ಅಗ್ಗ!
ಡ್ಯಾಶಿಂಗ್ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ಟೀಂ ಇಂಡಿಯಾದ ಭಾಗವಾಗಲು ಬಹಳ ದಿನಗಳಿಂದ ಹಂಬಲಿಸುತ್ತಿದ್ದರೂ ಸಹ ಸಾಧ್ಯವಾಗುತ್ತಿಲ್ಲ. ಕಳೆದ ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ಮಯಾಂಕ್ ಕಳಪೆ ಪ್ರದರ್ಶನ ನೀಡಿದ್ದರು. ಅಂದಿನಿಂದ ಆಯ್ಕೆದಾರರು ಅವರನ್ನು ತಂಡಕ್ಕೆ ಆಯ್ಕೆ ಮಾಡದೆ ಹೊರಗುಳಿಯುವಂತೆ ಮಾಡಿದ್ದಾರೆ.
ಇದೀಗ ದುಲೀಪ್ ಟ್ರೋಫಿ 2023 ರಲ್ಲಿ ತಮ್ಮ ತಂಡಕ್ಕೆ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದಾರೆ. ದುಲೀಪ್ ಟ್ರೋಫಿಯಲ್ಲಿ ದಕ್ಷಿಣ ವಲಯದ ಪರ ಆಡುವಾಗ ಉತ್ತರ ವಲಯದ ವಿರುದ್ಧ ಮಯಾಂಕ್ ಅದ್ಭುತ ಪ್ರದರ್ಶನ ನೀಡಿದ್ದಾರೆ.
ಎರಡೂ ಇನಿಂಗ್ಸ್‌ಗಳಲ್ಲಿ ಅರ್ಧ ಶತಕ:
ಮಯಾಂಕ್ ಅಗರ್ವಾಲ್ ಅವರ ಅದ್ಭುತ ಪ್ರದರ್ಶನದಿಂದಾಗಿ ದಕ್ಷಿಣ ವಲಯ ತಂಡ ಫೈನಲ್‌ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 115 ಎಸೆತಗಳಲ್ಲಿ 76 ರನ್ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ 57 ಎಸೆತಗಳಲ್ಲಿ 54 ರನ್ ಗಳಿಸಿದರು. ಅವರು ಎರಡೂ ಇನ್ನಿಂಗ್ಸ್ ಗಳಲ್ಲಿ ತಮ್ಮ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಹೊರಹೊಮ್ಮಿದ್ದಾರೆ.
ಇದನ್ನೂ ಓದಿ: 20 ವರ್ಷಗಳ ಬಳಿಕ ಈ ರಾಶಿಗೆ ಕೋಟ್ಯಾಧಿಪತಿ ಯೋಗ: ಉದ್ಯೋಗಿಗಳಿಗೆ ಬಡ್ತಿ- ಹೆಜ್ಜೆಹೆಜ್ಜೆಗೂ ಧನಲಕ್ಷ್ಮೀ ಜೊತೆ ನಿಲ್ಲುವಳು!
ಟೀಂ ಇಂಡಿಯಾದಲ್ಲಿ ಇದುವರೆಗಿನ ಪ್ರದರ್ಶನ:
ಮಯಾಂಕ್ ಭಾರತ ಪರ ಇದುವರೆಗೆ ಒಟ್ಟು 21 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ 41.33 ಸರಾಸರಿಯಲ್ಲಿ 1488 ರನ್ ಗಳಿಸಿದ್ದಾರೆ. ಇದರಲ್ಲಿ 5 ಅರ್ಧ ಶತಕ ಮತ್ತು 4 ಶತಕ ಒಳಗೊಂಡಿದೆ. ಮತ್ತೊಂದೆಡೆ ಏಕದಿನದಲ್ಲಿ 17.2 ರ ಸರಾಸರಿಯಲ್ಲಿ ಕೇವಲ 86 ರನ್ ಗಳಿಸಿದ್ದಾರೆ. ಕಳೆದ ವರ್ಷ ಜೂನ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಮಯಾಂಕ್ ಕೊನೆಯ ಬಾರಿಗೆ ಟೀಮ್ ಇಂಡಿಯಾದ ಭಾಗವಾಗಿದ್ದರು. ಆದರೆ ಅವರು ಪ್ಲೇಯಿಂಗ್ 11 ರಲ್ಲಿ ತಮ್ಮ ಸ್ಥಾನವನ್ನು ಗಳಿಸಲು ಸಾಧ್ಯವಾಗಲಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.