ಮುಂಬೈ: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ 65ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸನ್‍ರೈಸರ್ಸ್ ಹೈದರಾಬಾದ್ ರೋಚಕ ಗೆಲುವು ಸಾಧಿಸಿತು. ಗೆಲುವಿಗಾಗಿ ಕೊನೆ ಓವರ್ ವರೆಗೂ ಹೋರಾಟ ನಡೆಸಿದ ಮುಂಬೈ ಕೇವಲ 3 ರನ್ ಗಳಿಂದ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿತು.
ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ ಗಳ ಬೃಹತ್ ಮೊತ್ತ ಗಳಿಸಿತು. ಗೆಲುವಿನ ಗುರಿ ಬೆನ್ನತ್ತಿದ ಮುಂಬೈ ಕೊನೆ ಓವರ್ ವರೆಗೂ ಹೋರಾಟ ನಡೆಸಿದರು ಪ್ರಯೋಜನವಾಗಲಿಲ್ಲ. 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡ ರೋಹಿತ್ ಶರ್ಮಾ ಪಡೆ 190 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದನ್ನೂ ಓದಿ: IPL 2022 : ರೋಹಿತ್-ವಿರಾಟ್ ಕಳಪೆ ಫಾರ್ಮ್ ಬಗ್ಗೆ ಗಂಗೂಲಿ ಹೇಳಿದ್ದು ಹೀಗೆ!
ಬೃಹತ್ ಮೊತ್ತ ಪೇರಿಸಿದ ಹೈದರಾಬಾದ್
Rahul Tripathi is adjudged Player of the Match for his excellent knock of 76 off 44 deliveries as #SRH win by 3 runs.#TATAIPL #MIvSRH pic.twitter.com/OieNVAKF0o
— IndianPremierLeague (@IPL) May 17, 2022
ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಪರ ರಾಹುಲ್ ತ್ರಿಪಾಠಿ(76) ಭರ್ಜರಿ ಅರ್ಧಶತಕ ಭಾರಿಸಿದರು. ಇನ್ನುಳಿದಂತೆ ಪ್ರಿಯಾಂ ಗರ್ಗ್(42) ಮತ್ತು ನಿಕೋಲಸ್ ಪೂರನ್(38) ರನ್ ಗಳಿಸಿದರು. ಈ ಮೂವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಹೈದರಾಬಾದ್ 193 ರನ್ ಗಳ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು. ಮುಂಬೈ ಪರ ರಮಣದೀಪ್ ಸಿಂಗ್ 3 ವಿಕೆಟ್ ಪಡೆದು ಮಿಂಚಿದರೆ, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್ ಮತ್ತು ಡೇನಿಯಲ್ ಸ್ಯಾಮ್ಸ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಕೊನೆವರೆಗೂ ಹೋರಾಟ ನಡೆಸಿದ ಮುಂಬೈ
194 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಮುಂಬೈ ಕೊನೆ ಓವರ್ ವರೆಗೂ ಹೋರಾಟ ನಡೆಸಿದರೂ ಪ್ರಯೋಜನವಾಗಲಿಲ್ಲ. ಮುಂಬೈ ಪರ ನಾಯಕ ರೋಹಿತ್ ಶರ್ಮಾ(48), ಟಿಮ್ ಡೇವಿಡ್(46), ಇಶಾನ್ ಕಿಶನ್(42), ಡೇನಿಯಲ್ ಸ್ಯಾಮ್ಸ್(15) ಮತ್ತು ರಮಣದೀಪ್ ಸಿಂಗ್(ಅಜೇಯ 14) ರನ್ ಗಳಿಸಿದರು. ಹೈದರಾಬಾದ್ ಪರ ಉಮ್ರಾನ್ ಮಲಿಕ್ 3 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಇದನ್ನೂ ಓದಿ: IPL 2022 : ರಾಜಸ್ಥಾನ ಟಾಪ್ 2 ಸ್ಥಾನಕ್ಕೆ ಬರಲು ಈ ಆಟಗಾರರು ಕಾರಣ : ಕ್ಯಾಪ್ಟನ್ ಸ್ಯಾಮ್ಸನ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.