IND vs AUS: ಬ್ಯಾಟಿಂಗ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನೇ ಬ್ರೇಕ್‌ ಮಾಡಿದ್ರು ಶಮಿ.!

India vs Australia 1st Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಿ 177 ರನ್ ಗಳಿಸಿತ್ತು. ಅದೇ ಸಮಯದಲ್ಲಿ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 400 ರನ್ ಗಳಿಸಿತ್ತು. 

Written by - Chetana Devarmani | Last Updated : Feb 11, 2023, 02:19 PM IST
  • ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ
  • ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ
  • ಬ್ಯಾಟಿಂಗ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನೇ ಬ್ರೇಕ್‌ ಮಾಡಿದ್ರು ಶಮಿ
IND vs AUS: ಬ್ಯಾಟಿಂಗ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನೇ ಬ್ರೇಕ್‌ ಮಾಡಿದ್ರು ಶಮಿ.! title=
Mohammed Shami

India vs Australia 1st Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಿ 177 ರನ್ ಗಳಿಸಿತ್ತು. ಅದೇ ಸಮಯದಲ್ಲಿ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 400 ರನ್ ಗಳಿಸಿತ್ತು. ಟೀಂ ಇಂಡಿಯಾದ ಇನ್ನಿಂಗ್ಸ್ ಸಮಯದಲ್ಲಿ, ಮೊಹಮ್ಮದ್ ಶಮಿ ಅವರ ಬ್ಯಾಟಿಂಗ್‌ನೊಂದಿಗೆ ಉತ್ತಮ ಇನ್ನಿಂಗ್ಸ್ ಕೂಡ ಕಂಡುಬಂದಿದೆ, ಅದರ ಆಧಾರದ ಮೇಲೆ ಅವರು ವಿರಾಟ್ ಕೊಹ್ಲಿಯಂತಹ ಅನುಭವಿ ಬ್ಯಾಟ್ಸ್‌ಮನ್‌ಗಳ ದಾಖಲೆಯನ್ನು ಮುರಿದಿದ್ದಾರೆ. 

ಮೊಹಮ್ಮದ್ ಶಮಿ ನಾಗ್ಪುರ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 47 ಎಸೆತಗಳನ್ನು ಎದುರಿಸಿ 37 ರನ್‌ಗಳ ಇನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಶಮಿ 2 ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದರು. ಮೊಹಮ್ಮದ್ ಶಮಿ ತಮ್ಮ ಇನ್ನಿಂಗ್ಸ್‌ನ ಮೂರನೇ ಸಿಕ್ಸರ್ ಬಾರಿಸಿದ ತಕ್ಷಣ, ಅವರು ಟೆಸ್ಟ್‌ನಲ್ಲಿ ಸಿಕ್ಸರ್ ಬಾರಿಸುವ ವಿಷಯದಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದರು.

ಇದನ್ನೂ ಓದಿ : IND vs AUS: ಟೀಂ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸುತ್ತಿದೆ ಆಸೀಸ್: ಟೆಸ್ಟ್ ಪಂದ್ಯದ ಪ್ರಮುಖಾಂಶಗಳು ಇಲ್ಲಿವೆ

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನ 178 ಇನ್ನಿಂಗ್ಸ್‌ಗಳಲ್ಲಿ 24 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ, ಆದರೆ ಮೊಹಮ್ಮದ್ ಶಮಿ ಈಗ 85 ಇನ್ನಿಂಗ್ಸ್‌ಗಳಲ್ಲಿ 25 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಮೊಹಮ್ಮದ್ ಶಮಿ ಈ 85 ಇನ್ನಿಂಗ್ಸ್‌ಗಳಲ್ಲಿ 2 ಅರ್ಧಶತಕಗಳೊಂದಿಗೆ 722 ರನ್ ಗಳಿಸಿದ್ದಾರೆ. ಟೀಂ ಇಂಡಿಯಾ ಪರ ಹಲವು ಸಂದರ್ಭಗಳಲ್ಲಿ ಮಹತ್ವದ ಇನ್ನಿಂಗ್ಸ್ ಆಡಿದ್ದಾರೆ.

ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 400 ರನ್ ಗಳಿಸಿತ್ತು. ರೋಹಿತ್ ಶರ್ಮಾ ಈ ಇನ್ನಿಂಗ್ಸ್‌ನಲ್ಲಿ ಗರಿಷ್ಠ 120 ರನ್ ಗಳಿಸಿದರು. ಅದೇ ಸಮಯದಲ್ಲಿ ಅಕ್ಷರ್ ಪಟೇಲ್ 84 ರನ್‌ಗಳ ಇನಿಂಗ್ಸ್ ಆಡಿದರು. ಇದಲ್ಲದೇ ರವೀಂದ್ರ ಜಡೇಜಾ 70 ರನ್ ಗಳಿಸಿದರು. ಆಸ್ಟ್ರೇಲಿಯಾ ಪರ ಟಾಡ್ ಮರ್ಫಿ ಗರಿಷ್ಠ 7 ವಿಕೆಟ್ ಪಡೆದರು.

ಇದನ್ನೂ ಓದಿ : Rohit Sharma ಶತಕದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಪತ್ನಿ ರಿತಿಕಾ: ಸಂಚಲನ ಮೂಡಿಸಿದೆ ಈ ಪೋಸ್ಟ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News