ಗಂಟೆಗೆ 152 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಈ ಕಿಲಾಡಿ 2 ವರ್ಷಗಳ ಬಳಿಕ Team Indiaಗೆ ಎಂಟ್ರಿ!

India vs West Indies 1st Test: ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಭಾರತ ತಂಡದಲ್ಲಿ ಹಲವು ಯುವ ಆಟಗಾರರು ಸೇರ್ಪಡೆಗೊಂಡಿದ್ದಾರೆ. ಕಳೆದ 2 ವರ್ಷಗಳಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಹರಸಾಹಸ ಪಡುತ್ತಿದ್ದ ಈ ಒಬ್ಬ ಆಟಗಾರ ಕೂಡ ಸ್ಥಾನ ಪಡೆದಿದ್ದಾರೆ.

Written by - Bhavishya Shetty | Last Updated : Jul 8, 2023, 12:34 PM IST
    • ಟೀಮ್ ಇಂಡಿಯಾದ ವೆಸ್ಟ್ ಇಂಡೀಸ್ ಪ್ರವಾಸವು ಜುಲೈ 12 ರಿಂದ ಪ್ರಾರಂಭವಾಗಲಿದೆ
    • 2 ವರ್ಷಗಳ ನಂತರ ಭಾರತ ತಂಡದಲ್ಲಿ ಆಡುವ ಅವಕಾಶ ಪಡೆಯುವ ಸಾಧ್ಯತೆ ಇದೆ
    • ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದ ನವದೀಪ್ ಸೈನಿ
ಗಂಟೆಗೆ 152 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಈ ಕಿಲಾಡಿ 2 ವರ್ಷಗಳ ಬಳಿಕ Team Indiaಗೆ ಎಂಟ್ರಿ!  title=
Navdeep Saini

India vs West Indies 1st Test: ಟೀಮ್ ಇಂಡಿಯಾದ ವೆಸ್ಟ್ ಇಂಡೀಸ್ ಪ್ರವಾಸವು ಜುಲೈ 12 ರಿಂದ ಪ್ರಾರಂಭವಾಗಲಿದೆ. ಮೊದಲಿಗೆ ಉಭಯ ತಂಡಗಳ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯ ಡೊಮಿನಿಕಾದ ವಿಂಡ್ಸರ್ ಪಾರ್ಕ್‌ ನಲ್ಲಿ ಜುಲೈ 12 ರಿಂದ 16 ರವರೆಗೆ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಕೂಡ ಡೊಮಿನಿಕಾಗೆ ತೆರಳಿದೆ. ವೆಸ್ಟ್ ಇಂಡೀಸ್ ವಿರುದ್ಧದ ಈ ಟೆಸ್ಟ್ ಸರಣಿಯು ಟೀಂ ಇಂಡಿಯಾದ ಆಟಗಾರನಿಗೆ ತುಂಬಾ ವಿಶೇಷವಾಗಿದ್ದು, ಈತ 2 ವರ್ಷಗಳ ನಂತರ ಭಾರತ ತಂಡದಲ್ಲಿ ಆಡುವ ಅವಕಾಶ ಪಡೆಯುವ ಸಾಧ್ಯತೆ ಇದೆ.

 ಇದನ್ನೂ ಓದಿ: ಏಷ್ಯಾಕಪ್’ಗೂ ಮುನ್ನ ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ: ಈ ಟೂರ್ನಿಯಲ್ಲಿ ಮತ್ತೆ ಮುಖಾಮುಖಿ.. ಕ್ಷಣಗಣನೆ ಶುರು!

ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಭಾರತ ತಂಡದಲ್ಲಿ ಹಲವು ಯುವ ಆಟಗಾರರು ಸೇರ್ಪಡೆಗೊಂಡಿದ್ದಾರೆ. ಕಳೆದ 2 ವರ್ಷಗಳಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಹರಸಾಹಸ ಪಡುತ್ತಿದ್ದ ಈ ಒಬ್ಬ ಆಟಗಾರ ಕೂಡ ಸ್ಥಾನ ಪಡೆದಿದ್ದಾರೆ. ಈ ಆಟಗಾರ ಬೇರಾರೂ ಅಲ್ಲ, ವೇಗದ ಬೌಲರ್ ನವದೀಪ್ ಸೈನಿ. ನವದೀಪ್ ಸೈನಿ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದ ನವದೀಪ್ ಸೈನಿ ಅವರ ವೃತ್ತಿಜೀವನಕ್ಕೆ ಬ್ರೇಕ್ ಬಿದ್ದಿದ್ದು, ಇದೀಗ ಅವರು 2 ವರ್ಷಗಳ ನಂತರ ಮರಳಿದ್ದಾರೆ.

ನವದೀಪ್ ಸೈನಿ 2019 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಗೆ ಪಾದಾರ್ಪಣೆ ಮಾಡಿದರು. ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಭಾರತಕ್ಕಾಗಿ 2 ಟೆಸ್ಟ್ ಪಂದ್ಯಗಳು, 8 ODIಗಳು ಮತ್ತು 11 T20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ ನಲ್ಲಿ 4, ಏಕದಿನದಲ್ಲಿ 6 ಮತ್ತು ಟಿ20ಯಲ್ಲಿ 13 ವಿಕೆಟ್‌ ಗಳನ್ನು ಪಡೆದಿದ್ದಾರೆ. 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಮೊದಲ ಅಂತಾರಾಷ್ಟ್ರೀಯ T20 ಪಂದ್ಯವನ್ನು ಆಡಿದ್ದರು. ಡಿಸೆಂಬರ್ 2019 ರಲ್ಲಿ ಅಂತರರಾಷ್ಟ್ರೀಯ ODI ಕ್ರಿಕೆಟ್‌ ಗೆ ಪಾದಾರ್ಪಣೆ ಮಾಡಿದರು. 2021 ರಲ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲಿ, ನವದೀಪ್ ಸೈನಿ ಭಾರತಕ್ಕಾಗಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡುವ ಅವಕಾಶವನ್ನು ಪಡೆದರ, 2 ವರ್ಷಗಳ ಹಿಂದೆ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಪರ ಕೊನೆಯ ಪಂದ್ಯ ಆಡಿದ್ದರು.

 ಇದನ್ನೂ ಓದಿ: IND vs WI ಟೆಸ್ಟ್ ಸರಣಿಗೆ ತಂಡ ಪ್ರಕಟ: ಕೊನೆಗೂ ಈ ಕಿಲಾಡಿ ಚಾಂಪಿಯನ್’ಗೆ ಮಣೆ ಹಾಕಿದ ಸಮಿತಿ!

ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಭಾರತೀಯ ಟೆಸ್ಟ್ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್ ಮತ್ತು ನವದೀಪ್ ಸೈನಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News