Team India Head Coach: 2024ರ ಐಸಿಸಿ ಟಿ20 ವಿಶ್ವಕಪ್ ಗೆದ್ದ ನಂತರ, ಟೀಮ್ ಇಂಡಿಯಾದ ಮುಂದಿನ ಮುಖ್ಯ ಕೋಚ್ ಯಾರು ಮತ್ತು ರಾಹುಲ್ ದ್ರಾವಿಡ್ ಬದಲಿಗೆ ಯಾರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಎಲ್ಲದರ ಮಧ್ಯೆ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಇದೀಗ ಗಂಭೀರ್ ಅಲ್ಲ ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ಆರಾಧ್ಯ ದೈವವಾಗಿರುವ ಓರ್ವ ವ್ಯಕ್ತಿಗೆ ಜವಾಬ್ದಾರಿ ನೀಡಲಾಗಿದೆ ಎಂಬ ದೊಡ್ಡ ಸುದ್ದಿ ಹೊರಬಿದ್ದಿದೆ.
ಇದನ್ನೂ ಓದಿ: ಇಂದು ಭಾರತ vs ಜಿಂಬಾಬ್ವೆ ಮುಖಾಮುಖಿ: ಉಭಯ ತಂಡಗಳ ಬಲಾಬಲವೇನು? ಹೆಡ್ ಟು ಹೆಡ್ ರೆಕಾರ್ಡ್ ಇಲ್ಲಿದೆ
ಭಾರತ ತಂಡವು ಪ್ರಸ್ತುತ ಜಿಂಬಾಬ್ವೆ ಪ್ರವಾಸದಲ್ಲಿದೆ. ಅಲ್ಲಿ ಉಭಯ ತಂಡಗಳ ನಡುವೆ 5 ಪಂದ್ಯಗಳ T20 ಸರಣಿ ನಡೆಯಲಿದೆ. ಈ ಪ್ರವಾಸಕ್ಕೆ ಯುವ ಬ್ಯಾಟ್ಸ್ಮನ್ ಶುಭಮನ್ ಗಿಲ್ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಇನ್ನೊಂದೆಡೆ ಜಿಂಬಾಬ್ವೆ ವಿರುದ್ಧದ ಈ ಸರಣಿಯಲ್ಲಿ ಗಂಭೀರ್ ಬದಲಿಗೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಅಧ್ಯಕ್ಷ ವಿವಿಎಸ್ ಲಕ್ಷ್ಮಣ್ ಅವರಿಗೆ ಜವಾಬ್ದಾರಿಯನ್ನು ನೀಡಲಾಗಿದೆ.
ಪ್ರಸ್ತುತ ಭಾರತದ ಮುಖ್ಯ ಕೋಚ್ ಹುದ್ದೆಗೆ ಹಲವು ಮಂದಿಯ ಸಂದರ್ಶನ ನಡೆಸಿದ್ದು, ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಇಬ್ಬರ ಹೆಸರನ್ನು ಅನುಮೋದಿಸಿದೆ.
ಟಿ20 ವಿಶ್ವಕಪ್ನಲ್ಲಿ ಭಾರತ ಜಯಗಳಿಸಿದ ನಂತರ ಮಾತನಾಡಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ, “ಸಿಎಸಿ ಇಬ್ಬರ ಹೆಸರನ್ನು ಆಯ್ಕೆ ಮಾಡಿದೆ. ಭಾರತಕ್ಕೆ ಬಂದ ನಂತರ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದ್ದರು.
ಯಾರು ಹೊಸ ಕೋಚ್ ಆಗುತ್ತಾರೋ ಅವರು ಶ್ರೀಲಂಕಾ ಪ್ರವಾಸದಿಂದ ಅಧಿಕಾರ ವಹಿಸಿಕೊಳ್ಳುತ್ತಾರೆ. ಟೀಮ್ ಇಂಡಿಯಾ ಈ ತಿಂಗಳು ಶ್ರೀಲಂಕಾಕ್ಕೆ ಭೇಟಿ ನೀಡಲಿದೆ, ಅಲ್ಲಿ ಎರಡು ತಂಡಗಳು 3 ಪಂದ್ಯಗಳ T20I ಸರಣಿ ಮತ್ತು 3 ಪಂದ್ಯಗಳ ODI ಸರಣಿಯನ್ನು ಆಡಲಿವೆ.
ಇದನ್ನೂ ಓದಿ: ಮಹಾ ಪ್ರಮಾದ! ಬದುಕಿದ್ದಾಗಲೇ ಅಡ್ವಾಣಿಯವರಿಗೆ ಶೃದ್ಧಾಂಜಲಿ ಸಲ್ಲಿಸಿದ ಕೇಂದ್ರ ಸಚಿವ ವಿ ಸೋಮಣ್ಣ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿವಿಎಸ್ ಲಕ್ಷ್ಮಣ್ ಅವರನ್ನು ತಮ್ಮ ಆರಾಧ್ಯ ದೈವವೆಂದು ಪರಿಗಣಿಸುತ್ತಾರೆ. ಇಷ್ಟೇ ಅಲ್ಲ, ಈ ಇವರಿಬ್ಬರು ಐಪಿಎಲ್’ನ ಆರಂಭಿಕ ಹಂತದಲ್ಲಿ ಒಂದೇ ತಂಡದ ಪರ ಆಡುತ್ತಿದ್ದರು. ರೋಹಿತ್ ಆ ಸಮಯದಲ್ಲಿ ಯುವ ಆಟಗಾರನಾಗಿ ಡೆಕ್ಕನ್ ಚಾರ್ಜರ್ಸ್’ನ ಭಾಗವಾಗಿದ್ದರು ಮತ್ತು ಲಕ್ಷ್ಮಣ್ ತಂಡದಲ್ಲಿ ಹಿರಿಯ ಆಟಗಾರರಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ