NZ vs AUS, T20 World Cup 2021: ಟಾಸ್ ಗೆದ್ದವರೇ ಬಾಸ್, ಯಾರೂ ಗೆದ್ದರೂ ಇತಿಹಾಸ..!

2015ರ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಕಂಡಿದ್ದ ನ್ಯೂಜಿಲೆಂಡ್ ಆ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

Written by - Puttaraj K Alur | Last Updated : Nov 14, 2021, 10:36 AM IST
  • ಇಂದು ದುಬೈನಲ್ಲಿ ನಡೆಯಲಿದೆ ಆಸ್ಟ್ರೇಲಿಯಾ Vs ನ್ಯೂಜಿಲೆಂಡ್ ಫೈನಲ್ ಕದನ
  • ಚೊಚ್ಚಲ ಟಿ-20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಲು ಆಸೀಸ್ ಮತ್ತು ಕಿವೀಸ್ ಸಜ್ಜು
  • ಟಿ-20 ವಿಶ್ವಕಪ್ ಕಿರೀಟಕ್ಕಾಗಿ ನಡೆಯಲಿರುವ ಫೈಟ್ ನಲ್ಲಿ ಟಾಸ್ ಗೆದ್ದವರೇ ಬಾಸ್..!
NZ vs AUS, T20 World Cup 2021: ಟಾಸ್ ಗೆದ್ದವರೇ ಬಾಸ್, ಯಾರೂ ಗೆದ್ದರೂ ಇತಿಹಾಸ..! title=
ಟಾಸ್ ಗೆದ್ದವರೇ ಬಾಸ್..!

ನವದೆಹಲಿ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ(Dubai International Cricket Stadium)ದಲ್ಲಿ ಇಂದು ಐಸಿಸಿ ಟಿ-20 ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಇದುವರೆಗೂ ಟಿ-20 ಚಾಂಪಿಯನ್ ಆಗದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿವೆ. ಈ ಬಾರಿಯ ಟಿ20 ವಿಶ್ವಕಪ್ ನಲ್ಲಿ ಟಾಸ್ ಗೆದ್ದವರೇ ಬಾಸ್ ಎನ್ನುವ ಪರಿಸ್ಥಿತಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಟಾಸ್ ಮಹತ್ವದ ಪಾತ್ರ ವಹಿಸಲಿದೆ.

‘ಎ’ಗುಂಪಿನ ಲೀಗ್ ಪಂದ್ಯಗಳಲ್ಲಿ ತಲಾ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್(NZ vs AUS) ಸೆಮಿಫೈನಲ್ ಪ್ರವೇಶಿಸಿದ್ದವು. ಕಿವೀಸ್ ಆಂಗ್ಲರನ್ನು ಬಗ್ಗುಬಡಿದರೆ, ಪಾಕ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಆಸೀಸ್ ಫೈನಲ್ ಗೆ ಎಂಟ್ರಿ ಕೊಟ್ಟಿವೆ. 2007ರಿಂದ ಆರಂಭವಾಗಿರುವ ಟಿ.20 ವಿಶ್ವಕಪ್ ನಲ್ಲಿ ಆಸೀಸ್ ಮತ್ತು ಕಿವೀಸ್ ಒಮ್ಮೆಯೂ ಚಾಂಪಿಯನ್ ಆಗಿಲ್ಲ. ಹೀಗಾಗಿ ಇಂದು ಯಾರೇ ಗೆಲ್ಲಲಿ ಹೊಸ ಇತಿಹಾಸ ಸೃಷ್ಟಿಯಾಗಲಿವೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಬಗ್ಗೆ ಶಾಹೀದ್ ಆಫ್ರೀದಿ ಹೇಳಿದ್ದೇನು ಗೊತ್ತೇ ?

ನ್ಯೂಜಿಲೆಂಡ್ ಇದೇ ಮೊದಲ ಬಾರಿಗೆ ಟಿ-20 ವಿಶ್ವಕಪ್ ಫೈನಲ್(T20 World Cup 2021 Final) ಪ್ರವೇಶಿಸಿದರೆ, 2010ರಲ್ಲಿ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಿ ಇಂಗ್ಲೆಂಡ್ ಎದುರು ಸೋಲು ಕಂಡಿತ್ತು. ಉಭಯ ತಂಡಗಳು ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠವಾಗಿರುವುದರಿಂದ ಯಾರಿಗೆ ಚಾಂಪಿಯನ್ ಪಟ್ಟ ಒಲಿದು ಬರಲಿದೆ ಎಂಬುದು ಕುತೂಹಲ ಮೂಡಿಸಿದೆ. ಸೆಮಿಫೈನಲ್ ಕದನದಲ್ಲಿ ನ್ಯೂಜಿಲೆಂಡ್ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ 2019ರ ಏಕದಿನ ವಿಶ್ವಕಪ್ ಸೋಲಿನ ಸೇಡು ತೀರಿಸಿಕೊಂಡಿದೆ. ‘ಬಿ’ ಗುಂಪಿನ ಪೈಕಿ ಎಲ್ಲಾ 5 ಲೀಗ್ ಪಂದ್ಯಗಳನ್ನು ಗೆದ್ದು ಈ ಬಾರಿ ಟ್ರೋಫಿ ಎತ್ತಿಹಿಡಿಯುವ ಫೆವರಿಟ್ ತಂಡವೆನಿಸಿಕೊಂಡಿದ್ದ ಪಾಕಿಸ್ತಾನಕ್ಕೆ ಆಸ್ಟ್ರೇಲಿಯಾ ಸೋಲಿನ ರುಚಿ ತೋರಿಸಿದೆ.

ಸೋಲಿನ ಸೇಡು ತೀರಿಸಿಕೊಳ್ಳುತ್ತಾ ನ್ಯೂಜಿಲೆಂಡ್..?

ಏಕದಿನ ವಿಶ್ವಕಪ್‌ನಲ್ಲಿ (ODI World Cup) ಹ್ಯಾಟ್ರಿಕ್‌ ಸಹಿತ 5 ಬಾರಿ ಚಾಂಪಿಯನ್‌ ಆಗಿ ಮೆರೆದ ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್ ಎತ್ತಿಹಿಡಿಯುವ ತವಕದಲ್ಲಿದೆ. 2015 ಮತ್ತು 2019ರ ಏಕದಿನ ವಿಶ್ವಕಪ್‌ ಫೈನಲ್‌ ಪ್ರವೇಶಿಸಿ ಎರಡರಲ್ಲೂ ಸೋಲು ಕಂಡಿರುವ ಕೇನ್ ವಿಲಿಯಮ್ಸನ್ ಪಡೆ ಗೆಲುವಿನ ಉತ್ಸಾಹದಲ್ಲಿದೆ. 2015ರ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಕಂಡಿದ್ದ ನ್ಯೂಜಿಲೆಂಡ್ ಆ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಅಂತಿಮವಾಗಿ ಯಾರಿಗೆ ವಿಜಯಲಕ್ಷ್ಮೀ ಒಲಿಯುತ್ತಾಳೆಂಬುದನ್ನು ಕಾದು ನೋಡಬೇಕಿದೆ.  

ಇದನ್ನೂ ಓದಿ: ಐಸಿಸಿ ಹಾಲ್ ಆಫ್ ಫೇಮ್‌ಗೆ ಮಹೇಲಾ ಜಯವರ್ಧನಾ, ಶಾನ್ ಪೊಲಾಕ್, ಜಾನೆಟ್ ಬ್ರಿಟಿನ್ ಸೇರ್ಪಡೆ

ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ ವೆಲ್, ಮಾರ್ಕಸ್ ಸ್ಟೋಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆ್ಯಡಂ ಜಂಪಾ, ಜೋಸ್ ಹ್ಯಾಜಲ್‌ವುಡ್.

ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೆರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸಿಫರ್ಟ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಾಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಆಡಂ ಮಿಲ್ನೆ, ಟ್ರೆಂಟ್ ಬೌಲ್ಟ್, ಇಶ್ ಸೋಧಿ.

ಪಂದ್ಯದ ಸಮಯ: ಸಂಜೆ 7:30  

ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News