ನವದೆಹಲಿ: ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸೈಖೋಮ್ ಮೀರಾಬಾಯಿ ಚಾನು ಅವರು ಟೋಕಿಯೊದಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ಕಾರಣಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ 1.50 ಕೋಟಿ ರೂಪಾಯಿ ನಗದು ಬಹುಮಾನ ವಿತರಿಸಿದರು.
ಇದನ್ನೂ ಓದಿ: ಈ ಕಾರಣಗಳಿಗಾಗಿ ವಿರಾಟ್ ಕೊಹ್ಲಿಯನ್ನು ಹೊಗಳಿದ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್
"ಇಂತಹ ಗೌರವವನ್ನು ಸ್ವೀಕರಿಸಲು ನಾನು ಕೃತಜ್ಞಳಾಗಿದ್ದೇನೆ.ನಾವು ಹಿಂದೆಂದೂ ಅಂತಹ ಮನ್ನಣೆಯನ್ನು ಪಡೆದಿಲ್ಲ,ಆದ್ದರಿಂದ ಇದು ನಮಗೆ ಹೆಮ್ಮೆಯ ಕ್ಷಣವಾಗಿದೆ" ಎಂದು ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ನಗದು ಬಹುಮಾನ ಸ್ವೀಕರಿಸಿದ ನಂತರ ಹೇಳಿದರು.
I'm grateful to receive such respect. We never got such recognition earlier, so it's a proud moment for us: Olympic silver medalist Mirabai Chanu, on receiving a reward of Rs 1.5 crore by UP govt, at Bharat Ratna Atal Bihari Vajpayee Ekana Stadium, Lucknow pic.twitter.com/UVzNrgFm60
— ANI UP/Uttarakhand (@ANINewsUP) December 25, 2021
ಇದನ್ನೂ ಓದಿ: Harbhajan Singh: ಕ್ರಿಕೆಟ್‌ನಿಂದ ನಿವೃತ್ತಿಯ ಬಳಿಕ ಹರ್ಭಜನ್ ಸಿಂಗ್ ರಾಜಕೀಯಕ್ಕೆ ಬರುತ್ತಾರಾ?
ಮೀರಾಬಾಯಿ ಚಾನು ಅವರು 49 ಕೆಜಿ ತೂಕದ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಟೋಕಿಯೊ ಒಲಿಂಪಿಕ್ಸ್‌ನ ಭಾರತದ ಮೊದಲ ಪದಕವನ್ನು ಗೆದ್ದರು,ಆ ಮೂಲಕ ಭಾರತವು ಒಲಿಂಪಿಕ್ಸ್‌ನಲ್ಲಿ 7 ಪದಕಗಳನ್ನು ಗಳಿಸಲು ಸಾಧ್ಯವಾಯಿತು.
ಇದನ್ನೂ ಓದಿ: ರಾಜಸ್ಥಾನದಲ್ಲಿ 21 ಹೊಸ ಒಮಿಕ್ರಾನ್ ಪ್ರಕರಣಗಳು ವರದಿ
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವು ನಾಲ್ಕು ಕಂಚು, ಎರಡು ಬೆಳ್ಳಿ ಮತ್ತು ಒಂದು ಚಿನ್ನದ ಪದಕವನ್ನು ಪಡೆದುಕೊಂಡಿದೆ.ಉತ್ತರ ಪ್ರದೇಶ ರಾಜ್ಯ ಸರ್ಕಾರವು ಚಿನ್ನದ ಪದಕ ವಿಜೇತರಿಗೆ ರೂ 2 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 1.50 ಕೋಟಿ ರೂ ಮತ್ತು ಕಂಚಿನ ಪದಕ ವಿಜೇತರಿಗೆ 1 ಕೋಟಿ ರೂ ನಗದು ಬಹುಮಾನವನ್ನು ನೀಡುತ್ತದೆ.ಈಗ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವುದರೊಂದಿಗೆ 1.50 ಕೋಟಿ ನಗದು ಬಹುಮಾನ ಪಡೆದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.