Shoaib Malik Marriage: ಸಾನಿಯಾ ಮಿರ್ಜಾ ಜೊತೆ ಡಿವೋರ್ಸ್ ಬೆನ್ನಲ್ಲೇ 3ನೇ ಮದ್ವೆಯಾದ ಶೋಯೆಬ್! ವಧು ಈ ಖ್ಯಾತ ನಟಿ…

Sania Mirza and Shoaib Malik Relationship: ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರು ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ. ಶೋಯೆಬ್ ಮಲಿಕ್ ತನ್ನ ಮದುವೆಯ ಫೋಟೋಗಳನ್ನು ಶನಿವಾರ, ಜನವರಿ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

Written by - Bhavishya Shetty | Last Updated : Jan 20, 2024, 01:52 PM IST
    • ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ 2ನೇ ವಿವಾಹ
    • ಮದುವೆಯ ಫೋಟೋಗಳನ್ನು ಶೇರ್ ಮಾಡಿದ ಶೋಯೆಬ್ ಮಲಿಕ್
    • ಪಾಕಿಸ್ತಾನಿ ನಟಿ ಸನಾ ಜಾವೇದ್ ಜೊತೆ ಮದುವೆ
Shoaib Malik Marriage: ಸಾನಿಯಾ ಮಿರ್ಜಾ ಜೊತೆ ಡಿವೋರ್ಸ್ ಬೆನ್ನಲ್ಲೇ 3ನೇ ಮದ್ವೆಯಾದ ಶೋಯೆಬ್! ವಧು ಈ ಖ್ಯಾತ ನಟಿ… title=
Shoaib Malik Marriage

Sania Mirza and Shoaib Malik Marriage Status: ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರ ಡಿವೋರ್ಸ್ ವದಂತಿಗಳ ನಡುವೆ, ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರು ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ. ಶೋಯೆಬ್ ಮಲಿಕ್ ತನ್ನ ಮದುವೆಯ ಫೋಟೋಗಳನ್ನು ಶನಿವಾರ, ಜನವರಿ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಶೋಯೆಬ್ ಮಲಿಕ್ ಮತ್ತು ಸನಾ ಜಾವೇದ್ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಇತ್ತು.

ಇದನ್ನೂ ಓದಿ: ಭಾರತ-ಇಂಗ್ಲೆಂಡ್ ಟೆಸ್ಟ್’ನಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್ ಯಾರು?

ಕಳೆದ ವರ್ಷ ಸನಾ ಅವರ ಜನ್ಮದಿನದಂದು ಮಲಿಕ್ ಶುಭ ಹಾರೈಸಿದ್ದರು. ಅವರೊಂದಿಗಿನ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಕೂಡ ಹಂಚಿಕೊಂಡಿದ್ದರು. ಶೋಯೆಬ್ ಮಲಿಕ್ ಮಾತ್ರವಲ್ಲದೆ ನಟಿ ಸನಾ ಜಾವೇದ್ ಕೂಡ ತಮ್ಮ ಮದುವೆಯ ಫೋಟೋಗಳನ್ನು ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ 2010 ರಲ್ಲಿ ವಿವಾಹವಾಗಿದ್ದರು. ಇವರಿಬ್ಬರೂ ಸಾಂಪ್ರದಾಯಿಕ ಮುಸ್ಲಿಂ ಶೈಲಿಯಲ್ಲಿ ಮದುವೆಯಾಗಿದ್ದರು. ಇಬ್ಬರಿಗೂ ಒಬ್ಬ ಮಗನಿದ್ದು, ಅವನ ಹೆಸರು ಇಝಾನ್.

ಇದನ್ನೂ ಓದಿ: Rohit Sharma: ಟಿ20 ವಿಶ್ವಕಪ್’ಗೆ ಈ 10 ಆಟಗಾರರು ಪಕ್ಕಾ ಆಗಿದ್ದಾರೆ ಎಂದ ರೋಹಿತ್ ಶರ್ಮಾ!

ಸಾನಿಯಾ ಮಿರ್ಜಾ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ನಿಗೂಢ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. ಅದರಲ್ಲಿ “ಮದುವೆ ಕಷ್ಟ. ವಿಚ್ಛೇದನ ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ” ಎಂದು ಬರೆದಿಕೊಂಡಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News