IND vs PAK: 7 ವರ್ಷಗಳ ನಂತರ ಭಾರತಕ್ಕೆ ಬರಲಿದೆ ಪಾಕಿಸ್ತಾನ ತಂಡ! ಮತ್ತೆ ನೋಡಬಹುದು ಬದ್ಧವೈರಿಗಳ ಕಾದಾಟ?

Pakistan Cricket Team Tour Of India: ಸುಮಾರು 7 ವರ್ಷಗಳ ನಂತರ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತಕ್ಕೆ ಬರಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಪಾಕಿಸ್ತಾನ ಕ್ರಿಕೆಟ್ ತಂಡ 2016 ರಲ್ಲಿ ಕೊನೆಯ ಬಾರಿಗೆ ಭಾರತ ಪ್ರವಾಸಕ್ಕೆ ಬಂದಿತ್ತು. ಆ ಬಳಿಕ ಭಾರತ ಪ್ರವಾಸ ಮಾಡಿರಲಿಲ್ಲ ಭಾರತ.

Written by - Bhavishya Shetty | Last Updated : Mar 22, 2023, 07:46 PM IST
    • 2023ರ ODI ವಿಶ್ವಕಪ್ ಅಕ್ಟೋಬರ್‌ನಿಂದ ಭಾರತದಲ್ಲಿ ನಡೆಯಲಿದೆ.
    • ಪಾಕಿಸ್ತಾನ ಕ್ರಿಕೆಟ್ ತಂಡ 2023 ರ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಬಹುದು.
    • ಈ ಸಮಯದಲ್ಲಿ, ಎರಡು ತಂಡಗಳ ನಡುವಿನ ಪೈಪೋಟಿಯನ್ನು ಕ್ರಿಕೆಟ್ ಅಭಿಮಾನಿಗಳು ನೋಡಬಹುದು
IND vs PAK: 7 ವರ್ಷಗಳ ನಂತರ ಭಾರತಕ್ಕೆ ಬರಲಿದೆ ಪಾಕಿಸ್ತಾನ ತಂಡ! ಮತ್ತೆ ನೋಡಬಹುದು ಬದ್ಧವೈರಿಗಳ ಕಾದಾಟ? title=
Pakistan Tour Of India

Pakistan Cricket Team Tour Of India: ಪಾಕಿಸ್ತಾನ ಕ್ರಿಕೆಟ್ ತಂಡ 2016 ರಲ್ಲಿ ಕೊನೆಯ ಬಾರಿಗೆ ಭಾರತ ಪ್ರವಾಸಕ್ಕೆ ಬಂದಿತ್ತು. ಈ ಸಂದರ್ಭದಲ್ಲಿ ಟಿ20 ವಿಶ್ವಕಪ್ ಭಾರತದಲ್ಲಿ ನಡೆದಿತ್ತು. ಈ ಟೂರ್ನಿಯ ಬಳಿಕ ಪಾಕಿಸ್ತಾನ ತಂಡ ಭಾರತ ಪ್ರವಾಸ ಮಾಡಿಲ್ಲ. ಇದೆಲ್ಲದರ ನಡುವೆ ಎರಡೂ ದೇಶಗಳ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಸುಮಾರು 7 ವರ್ಷಗಳ ನಂತರ ಪಾಕಿಸ್ತಾನ ಕ್ರಿಕೆಟ್ ತಂಡ ಭಾರತಕ್ಕೆ ಬರಲಿದೆ.

ಇದನ್ನೂ ಓದಿ: Virat Kohli Video: ಏನಾಯ್ತು ವಿರಾಟ್ ಕೊಹ್ಲಿಗೆ..? ಮೂರನೇ ಏಕದಿನ ಪಂದ್ಯದಲ್ಲಿ ವಿಚಿತ್ರ ವರ್ತನೆ! ವಿಡಿಯೋ ವೈರಲ್

2023ರ ODI ವಿಶ್ವಕಪ್ ಅಕ್ಟೋಬರ್‌ನಿಂದ ಭಾರತದಲ್ಲಿ ನಡೆಯಲಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಪಂದ್ಯಾವಳಿಗಾಗಿ, ಪಾಕಿಸ್ತಾನ ತಂಡದ ವೀಸಾ ಅನುಮೋದನೆಯನ್ನು ಭಾರತ ಸರ್ಕಾರದಿಂದ ನೀಡಲಾಗುವುದು ಎಂದು ಬಿಸಿಸಿಐ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ (ಐಸಿಸಿ) ಭರವಸೆ ನೀಡಿದೆ. ಪಾಕಿಸ್ತಾನ ಕ್ರಿಕೆಟ್ ತಂಡ ಭಾರತಕ್ಕೆ ಬರಬಹುದು ಮತ್ತು 2023 ರ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಬಹುದು ಎಂಬುದು ಇದರಿಂದ ಸ್ಪಷ್ಟವಾಗಿದೆ. ಈ ಸಮಯದಲ್ಲಿ, ಎರಡು ತಂಡಗಳ ನಡುವಿನ ಪೈಪೋಟಿಯನ್ನು ಕ್ರಿಕೆಟ್ ಅಭಿಮಾನಿಗಳು ನೋಡಬಹುದು.

ಅಕ್ಟೋಬರ್ 5 ರಿಂದ ಟೂರ್ನಿ ಆರಂಭ!

ESPN Cricinfo ವರದಿಯ ಪ್ರಕಾರ, ಈ ವರ್ಷ ಭಾರತದಲ್ಲಿ ನಡೆಯಲಿರುವ ODI ವಿಶ್ವಕಪ್ 2023 ಅಕ್ಟೋಬರ್ 5 ರಿಂದ ಪ್ರಾರಂಭವಾಗಬಹುದು. ನವೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ವರದಿಯ ಪ್ರಕಾರ, 2023 ರ ವಿಶ್ವಕಪ್‌ನಲ್ಲಿ ಮೂರು ನಾಕೌಟ್ ಪಂದ್ಯಗಳು ಸೇರಿದಂತೆ ಒಟ್ಟು 48 ಪಂದ್ಯಗಳು ನಡೆಯಲಿವೆ. ಬಿಸಿಸಿಐ ಈ ದೊಡ್ಡ ಕ್ರಿಕೆಟ್ ಪಂದ್ಯಾವಳಿಗಾಗಿ ಕನಿಷ್ಠ ಒಂದು ಡಜನ್ ಸ್ಥಳಗಳನ್ನು ಆಯ್ಕೆ ಮಾಡಿದೆ. ಇದರಲ್ಲಿ ಬೆಂಗಳೂರು, ಚೆನ್ನೈ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ದೆಹಲಿ, ಧರ್ಮಶಾಲಾ, ಇಂದೋರ್, ಮುಂಬೈ ಮತ್ತು ರಾಜ್‌ಕೋಟ್ ಸೇರಿವೆ.

ಇದನ್ನೂ ಓದಿ: ಟೀಂ ಇಂಡಿಯಾ ಜೊತೆ KKRಗೂ ಭಾರೀ ಆಘಾತ: WTC ಫೈನಲ್ ಸೇರಿ IPLನಿಂದಲೂ ಹೊರಬಿದ್ದ ಭಾರತದ ಈ ಸ್ಟಾರ್ ಆಟಗಾರ!

ಮುಂದುವರಿದ ಏಷ್ಯಾ ಕಪ್ ಆತಿಥ್ಯ ವಿವಾದ!

ಏಷ್ಯಾ ಕಪ್ 2023 ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿದೆ. ಈ ಪಂದ್ಯಾವಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಡುವೆ ವಿವಾದವಿದೆ. 2023ರ ಏಷ್ಯಾಕಪ್‌ಗಾಗಿ ಭಾರತ ತಂಡವು ಪಾಕಿಸ್ತಾನದಲ್ಲಿ ಆಡಲು ಹೋಗುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈಗಾಗಲೇ ಘೋಷಿಸಿದ್ದಾರೆ. ಇದರ ಜೊತೆಗೆ 2023 ರ ಏಷ್ಯಾ ಕಪ್‌ನಲ್ಲಿ ಆಡಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, 2023 ರ ಏಕದಿನ ವಿಶ್ವಕಪ್‌ನಲ್ಲಿ ಆಡಲು ನಮ್ಮ ತಂಡವೂ ಭಾರತಕ್ಕೆ ಆಗಮಿಸುವುದಿಲ್ಲ ಎಂದು ಪಿಸಿಬಿ ಹೇಳಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News