IND vs ENG: ಟೆಸ್ಟ್ ಕ್ರಿಕೆಟ್‌ನಲ್ಲಿ ಈ ದಾಖಲೆ ಬರೆದ ರವಿಚಂದ್ರನ್ ಅಶ್ವಿನ್ ! ಯಾವ ಭಾರತೀಯ ಬೌಲರ್ ಕೂಡಾ ಮಾಡಿರದ ಸಾಧನೆ ಇದು

IND vs ENG: ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 'ವಿಶಿಷ್ಟ ಶತಕ'ಸಾಧಿಸುವ ಮೂಲಕ ಈ ದಾಖಲೆ ಮಾಡಿದ್ದಾರೆ.

Written by - Ranjitha R K | Last Updated : Feb 23, 2024, 12:58 PM IST
  • ಇತಿಹಾಸ ನಿರ್ಮಿಸಿದ ರವಿಚಂದ್ರನ್ ಅಶ್ವಿನ್
  • ಇಂಗ್ಲೆಂಡ್ ವಿರುದ್ಧ 1000 ರನ್ ಮತ್ತು 100 ವಿಕೆಟ್
  • ಇಂಗ್ಲೆಂಡ್ ವಿರುದ್ಧ 92 ವಿಕೆಟ್ ಕಬಳಿಸಿದ್ದ ಅನಿಲ್ ಕುಂಬ್ಳೆ
IND vs ENG: ಟೆಸ್ಟ್ ಕ್ರಿಕೆಟ್‌ನಲ್ಲಿ ಈ ದಾಖಲೆ ಬರೆದ ರವಿಚಂದ್ರನ್ ಅಶ್ವಿನ್ !   ಯಾವ ಭಾರತೀಯ ಬೌಲರ್ ಕೂಡಾ ಮಾಡಿರದ ಸಾಧನೆ ಇದು  title=

IND vs ENG : ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ಬರೆದಿದ್ದಾರೆ. ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಕ್ರಿಕೆಟ್‌ನಲ್ಲಿ 100 ವಿಕೆಟ್ ಕಬಳಿಸುವ ಮೂಲಕ ದಾಖಲೆ ಮೆರೆದಿದ್ದಾರೆ.  ರವಿಚಂದ್ರನ್ ಅಶ್ವಿನ್ 22ನೇ ಓವರ್‌ನ ಎರಡನೇ ಎಸೆತದಲ್ಲಿ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋವ್ (38) ಅವರಿಗೆ ಎಲ್‌ಬಿಡಬ್ಲ್ಯೂ ಮಾಡಿ ಪೆವೆಲಿಯನ್ ಗೆ ಅಟ್ಟುವುದರೊಂದಿಗೆ ಈ ಇತಿಹಾಸ ಬರೆದಿದ್ದಾರೆ.  

ಇತಿಹಾಸ ನಿರ್ಮಿಸಿದ ರವಿಚಂದ್ರನ್ ಅಶ್ವಿನ್ :  
ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 'ವಿಶಿಷ್ಟ ಶತಕ'  ಸಾಧಿಸುವ ಮೂಲಕ ಈ ದಾಖಲೆ ಮಾಡಿದ್ದಾರೆ. ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 100 ವಿಕೆಟ್ ಪಡೆದ ಏಕೈಕ ಮತ್ತು ಮೊದಲ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ರವಿಚಂದ್ರನ್ ಅಶ್ವಿನ್ ಅವರಿಗಿಂತ ಮೊದಲು, ಮಾಜಿ ಅನುಭವಿ ಲೆಗ್ ಸ್ಪಿನ್ನರ್ ಭಾಗವತ್ ಚಂದ್ರಶೇಖರ್ ಇಂಗ್ಲೆಂಡ್ ವಿರುದ್ಧ ಭಾರತದ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದಿದ್ದರು. ಭಾರತದ ಮಾಜಿ ಲೆಗ್ ಸ್ಪಿನ್ನರ್ ಭಾಗವತ್ ಚಂದ್ರಶೇಖರ್ ಇಂಗ್ಲೆಂಡ್ ವಿರುದ್ಧ 23 ಟೆಸ್ಟ್ ಪಂದ್ಯಗಳಲ್ಲಿ 27.27 ಸರಾಸರಿಯಲ್ಲಿ 95 ವಿಕೆಟ್ ಪಡೆದಿದ್ದಾರೆ. 

ಇದನ್ನೂ ಓದಿ : IND vs ENG Ranchi Test: ಬುಮ್ರಾಗೆ ರೆಸ್ಟ್‌.. ಆಕಾಶ್ ದೀಪ್ ಟೆಸ್ಟ್ ಕ್ರಿಕೆಟ್‌ಗೆ ಎಂಟ್ರಿ!

ಇಂಗ್ಲೆಂಡ್ ವಿರುದ್ಧ 1000 ರನ್ ಮತ್ತು 100 ವಿಕೆಟ್  : 
ರವಿಚಂದ್ರನ್ ಅಶ್ವಿನ್ ಅವರು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 1000 ಕ್ಕೂ ಅಧಿಕ ರನ್ ಮತ್ತು 100 ವಿಕೆಟ್‌ಗಳ ಗಡಿಯನ್ನು ಮುಟ್ಟಿದ ಏಷ್ಯಾದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 1085 ರನ್ ಗಳಿಸಿ 100 ವಿಕೆಟ್ ಪಡೆದಿದ್ದಾರೆ. ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ  23 ಟೆಸ್ಟ್ ಪಂದ್ಯಗಳಲ್ಲಿ 100 ವಿಕೆಟ್ ಪಡೆದಿದ್ದಾರೆ. 

ಇಂಗ್ಲೆಂಡ್ ವಿರುದ್ಧ  92 ವಿಕೆಟ್ ಕಬಳಿಸಿದ್ದ ಅನಿಲ್ ಕುಂಬ್ಳೆ : 
ಭಾರತದ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಇಂಗ್ಲೆಂಡ್ ವಿರುದ್ಧ 19 ಟೆಸ್ಟ್ ಪಂದ್ಯಗಳಲ್ಲಿ 30.59 ಸರಾಸರಿಯಲ್ಲಿ 92 ವಿಕೆಟ್ ಪಡೆದಿದ್ದಾರೆ. ಅನಿಲ್ ಕುಂಬ್ಳೆ ಭಾರತ ಪರ 132 ಟೆಸ್ಟ್ ಪಂದ್ಯಗಳಲ್ಲಿ 619 ವಿಕೆಟ್ ಪಡೆದಿದ್ದಾರೆ. ಬಿಷನ್ ಸಿಂಗ್ ಬೇಡಿ ಇಂಗ್ಲೆಂಡ್ ವಿರುದ್ಧ 22 ಟೆಸ್ಟ್ ಪಂದ್ಯಗಳಲ್ಲಿ 29.87 ಸರಾಸರಿಯಲ್ಲಿ 85 ವಿಕೆಟ್ ಪಡೆದಿದ್ದಾರೆ. ಬಿಶನ್ ಸಿಂಗ್ ಬೇಡಿ ಭಾರತ ಪರ 67 ಟೆಸ್ಟ್ ಪಂದ್ಯಗಳಲ್ಲಿ 266 ವಿಕೆಟ್ ಪಡೆದಿದ್ದಾರೆ. 

ಇದನ್ನೂ ಓದಿ :  Viral video cricket IPL: ಬಿಸಿಸಿಐ ಖಡಕ್‌ ವಾರ್ನಿಂಗ್‌ ನಡುವೆಯೂ.. ಐಪಿಎಲ್‌ಗೆ ಹಾರ್ದಿಕ್ ಪಾಂಡ್ಯ ಜೊತೆ ಇಶಾನ್‌ ಕಿಶನ್ ತಯಾರಿ!‌ ವಿಡಿಯೋ ವೈರಲ್‌

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಜೇಮ್ಸ್ ಆಂಡರ್ಸನ್ : 
ಇಂಗ್ಲೆಂಡ್‌ನ ಸ್ಟಾರ್ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಭಾರತದ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಜೇಮ್ಸ್ ಆಂಡರ್ಸನ್ ಇದುವರೆಗೆ ಭಾರತದ ವಿರುದ್ಧ 38 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 145 ವಿಕೆಟ್ ಪಡೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News