IND vs AUS: ಆಸೀಸ್ ನ ಈ ವಿಕೆಟ್ ಉರುಳಿತ್ತಿದ್ದಂತೆ ಎದ್ದುಬಿದ್ದು ಕುಣಿದಾಡಿದ ರಾಹುಲ್ ದ್ರಾವಿಡ್! ವಿಡಿಯೋ ನೋಡಿ

Rahul Dravid Celebration: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನ ದಿನವಾದ ಗುರುವಾರ ಮೊಹಮ್ಮದ್ ಸಿರಾಜ್ ತಮ್ಮ ಮೊದಲ ಎಸೆತದಲ್ಲಿ ಬೌಲಿಂಗ್ ಮಾಡಿದ್ದರು. ಈ ಸಂದರ್ಭದಲ್ಲಿ ಅಗತ್ಯವಾಗಿ ಬೇಕಿದ್ದ ವಿಕೆಟ್ ನ್ನು ಸಿರಾಜ್ ಉರುಳಿಸಿದರು. ಇದನ್ನು ಕಂಡ ಕೋಚ್ ರಾಹುಲ್ ದ್ರಾವಿಡ್ ಸಂಭ್ರಮದಿಂದ ಕುಣಿದಾಡಿದ್ದಾರೆ. ಈ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

Written by - Bhavishya Shetty | Last Updated : Feb 9, 2023, 08:00 PM IST
    • ಭಾರತ ತಂಡ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆಡುತ್ತಿದೆ
    • ನಾಗ್ಪುರದ ವಿಸಿಎ ಸ್ಟೇಡಿಯಂನಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಪಂದ್ಯ ನಡೆಯುತ್ತಿದೆ
    • ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ
IND vs AUS: ಆಸೀಸ್ ನ ಈ ವಿಕೆಟ್ ಉರುಳಿತ್ತಿದ್ದಂತೆ ಎದ್ದುಬಿದ್ದು ಕುಣಿದಾಡಿದ ರಾಹುಲ್ ದ್ರಾವಿಡ್! ವಿಡಿಯೋ ನೋಡಿ title=
Rahul Dravid

Rahul Dravid Celebration: ಅನುಭವಿ ಓಪನರ್ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆಡುತ್ತಿದೆ. ನಾಗ್ಪುರದ ವಿಸಿಎ ಸ್ಟೇಡಿಯಂನಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಪಂದ್ಯ ನಡೆಯುತ್ತಿದೆ. ಈ ಪಂದ್ಯಕ್ಕೆ ಸಂಬಂಧಿಸಿದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: IND vs AUS: ಟೆಸ್ಟ್ ಆರಂಭ ದಿನವೇ ಇಂಡೋ-ಆಸೀಸ್ ಕಿತ್ತಾಟ! ಸ್ಮಿತ್ ವಿರುದ್ಧ ಸಿಡಿದೆದ್ದ ಸಿರಾಜ್ ಮೈದಾನದಲ್ಲಿ ಮಾಡಿದ್ದೇನು?

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನ ದಿನವಾದ ಗುರುವಾರ ಮೊಹಮ್ಮದ್ ಸಿರಾಜ್ ತಮ್ಮ ಮೊದಲ ಎಸೆತದಲ್ಲಿ ಬೌಲಿಂಗ್ ಮಾಡಿದ್ದರು. ಈ ಸಂದರ್ಭದಲ್ಲಿ ಅಗತ್ಯವಾಗಿ ಬೇಕಿದ್ದ ವಿಕೆಟ್ ನ್ನು ಸಿರಾಜ್ ಉರುಳಿಸಿದರು. ಇದನ್ನು ಕಂಡ ಕೋಚ್ ರಾಹುಲ್ ದ್ರಾವಿಡ್ ಸಂಭ್ರಮದಿಂದ ಕುಣಿದಾಡಿದ್ದಾರೆ. ಈ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಸಿರಾಜ್ ಟೆಸ್ಟ್ ಕ್ರಿಕೆಟ್ ನಲ್ಲಿಯೂ ಸಹ ಅದೇ ಲಯವನ್ನು ಕಾಪಾಡಿಕೊಂಡು ಬಂದಿದ್ದಾರೆ.

ಇದನ್ನೂ ಓದಿ: VIDEO : ಜಡೇಜಾ ಹಾಕಿದ 'ಮ್ಯಾಜಿಕ್ ಬಾಲ್' ನೋಡಿ ಶಾಕ್ ಆದ ಸ್ಟೀವ್ ಸ್ಮಿತ್!

ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಗ್ಪುರ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಟಾಸ್ ಸೋತಿತು. ಆದರೆ ಆಸ್ಟ್ರೇಲಿಯಾ ಬ್ಯಾಟಿಂಗ್‌ಗೆ ಇಳಿದ ನಂತರ ಎರಡು ಆರಂಭಿಕ ಪ್ರಗತಿಯನ್ನು ಪಡೆಯಿತು. ಮೊಹಮ್ಮದ್ ಸಿರಾಜ್ ಉಸ್ಮಾನ್ ಖವಾಜಾ ಅವರ ವಿಕೆಟ್ ಕಬಳಿಸಿದರು. ಅಷ್ಟರಲ್ಲಿ ಕೇವಲ 1 ರನ್‌ ಗಳಿಕೆ ಮಾಡಿದ್ದರು. ಇದಾದ ಬಳಿಕ ಮೊಹಮ್ಮದ್ ಶಮಿ ಒಂದೇ ಸ್ಕೋರ್‌ಗೆ ಡೇವಿಡ್ ವಾರ್ನರ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಈ ಎರಡು ವಿಕೆಟ್ ಉರುಳುತ್ತಿದ್ದಂತೆ ನಾಗ್ಪುರದಲ್ಲಿ ಭಾರತೀಯ ಅಭಿಮಾನಿಗಳು ಸಂಭ್ರಮಿಸಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News