ʻTPL’ಗೆ ತೆರೆ.. ರಾಸು ವಾರಿಯರ್ ಗೆ ಚಾಂಪಿಯನ್ ಪಟ್ಟ!

Television premier league 2024: ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 3 ಮುಕ್ತಾಯಗೊಂಡಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ಫೆಬ್ರವರಿ 28 ರಿಂದ ಟಿಪಿಎಲ್ ಪಂದ್ಯ ಪ್ರಾರಂಭವಾಗಿತ್ತು. 

Written by - YASHODHA POOJARI | Last Updated : Mar 4, 2024, 11:45 PM IST
  • ಕಿರುತೆರೆ ಕ್ರಿಕೆಟ್ ಲೀಗ್ ಸೀಸನ್-3
  • ಟಿಪಿಎಲ್ ಸೀಸನ್-3ಗೆ ತೆರೆ
  • ಟ್ರೋಫಿಗೆ ಮುತ್ತಿಟ್ಟ ಕೆಟಿಎಂ ದೀಕ್ಷಿತ್ ಶೆಟ್ಟಿ
ʻTPL’ಗೆ ತೆರೆ.. ರಾಸು ವಾರಿಯರ್ ಗೆ ಚಾಂಪಿಯನ್ ಪಟ್ಟ! title=

Television premier league 2024 Champion : ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 3 ಮುಕ್ತಾಯಗೊಂಡಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ಫೆಬ್ರವರಿ 28 ರಿಂದ ಟಿಪಿಎಲ್ ಪಂದ್ಯ ಪ್ರಾರಂಭವಾಗಿತ್ತು. ಮಾರ್ಚ್ 3 ರಂದು ನಡೆದ ಅಂತಿಮ ಪಂದ್ಯಾವಳಿಯಲ್ಲಿ ದೀಕ್ಷಿತ್ ಶೆಟ್ಟಿ ನಾಯಕತ್ವದ ರಾಸು ವಾರಿಯರ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಅಲಕಾ ನಂದ ಶ್ರೀನಿವಾಸ್ ನೇತೃತ್ವದ ಬಯೋಟಾಪ್ ಲೈಫ್ ಸೇವಿಯರ್ಸ್ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. 

ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆದುಕೊಂಡು ಬರ್ತಿರುವ ಟಿಪಿಎಲ್ ಪಂದ್ಯದಲ್ಲಿ ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್ಸ್, ಕೆಕೆಆರ್ ಮೀಡಿಯಾ ಹೌಸ್, ಬಯೋಟಾಪ್ ಲೈಫ್ ಸೇವಿಯರ್ಸ್, AVR ಟಸ್ಕರ್ಸ್, ರಾಸು ವಾರಿಯರ್ಸ್, ಭಜರಂಗಿ ಬಾಯ್ಸ್, ದಿ ಬುಲ್ ಸ್ಕ್ವಾಡ್, ಇನ್ಸೇನ್ ಕ್ರಿಕೆಟ್ ಟೀಂ, ಜಿಎಲ್ಆರ್ ವಾರಿಯರ್ಸ್ ಸೇರಿದಂತೆ ಒಟ್ಟು 10 ಟೀಮ್ ಗಳು ಭಾಗವಹಿಸಿದ್ದು, 170 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಟ್ಟಿದ್ದರು. 

ಇದನ್ನೂ ಓದಿ: Actress Arrest: ಗೆಳತಿ ಮನೆಯಲ್ಲೇ ಚಿನ್ನ ಕದ್ದ ಖ್ಯಾತ ನಟಿ ಅರೆಸ್ಟ್.! 

ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ. ರಂಜಿತ್ ಕುಮಾರ್ ಎಸ್ ಓನರ್, ಜಿಎಲ್ಆರ್ ವಾರಿಯರ್ಸ್ ಟೀಂಗೆ ಲೂಸ್ ಮಾದ ಯೋಗಿ ನಾಯಕನಾದರೆ ರಾಜೇಶ್ ಎಲ್ ಓನರ್, ಇನ್ಸೇನ್ ಕ್ರಿಕೆಟ್ ಟೀಂಗೆ ರವಿಶಂಕರ್ ಗೌಡ ನಾಯಕ-ಫೈಜಾನ್ ಖಾನ್ ಓನರ್, ದಿ ಬುಲ್ ಸ್ಕ್ವಾಡ್ ತಂಡಕ್ಕೆ ಶರತ್ ಪದ್ಮನಾಭ್ ನಾಯಕ-ಮೋನಿಶ್ ಓನರ್, ಭಜರಂಗಿ ಬಾಯ್ಸ್ ಟೀಂಗೆ ಸಾಗರ್ ಬಿಳಿಗೌಡ ನಾಯಕ- ಸ್ವಸ್ತಿಕ್ ಆರ್ಯ ಓನರ್, ರಾಸು ವಾರಿಯರ್ಸ್ ಟೀಂಗೆ ದೀಕ್ಷಿತ್ ಶೆಟ್ಟಿ ನಾಯಕ-ರಘು ಭಟ್ ಹಾಗೂ ಸುಗುಣ ಓನರ್, ಎವಿಆರ್ ಟಸ್ಕರ್ಸ್ಗೆ ಚೇತನ್ ಸೂರ್ಯ ನಾಯಕ - ಅರವಿಂದ್ ವೆಂಕಟ್ ರೆಡ್ಡಿ ಓನರ್, ಬಯೋಟಾಪ್ ಲೈಫ್ ಸೇವಿಯರ್ಸ್ ಅಲಕಾ ನಂದ ಶ್ರೀನಿವಾಸ್ ನಾಯಕ-ವಿಶ್ವನಾಥ್, ಪ್ರಸನ್ನ ಓನರ್, ಕೆಕೆಆರ್ ಮೀಡಿಯಾ ಹೌಸ್ ಗೆ ಅರುಣ್ ರಾಮ್ ಗೌಡ ನಾಯಕ-ಲಕ್ಷ್ಮೀ ಕಾಂತ್ ರೆಡ್ಡಿ ಓನರ್, ಗೋಲ್ಡನ್ ಈಗಲ್ಸ್ ವಿಹಾನ್ ನಾಯಕ-ಕುಶಾಲ್ ಗೌಡ ಒಡೆತನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. 

ಟಿಪಿಎಲ್ ರಾಯಭಾರಿಯಾಗಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇದ್ದು, ಪ್ರಮುಖ ನಟರಾದ ಲೂಸ್ ಮಾದ ಯೋಗಿ, ರವಿಶಂಕರ್ ಗೌಡ ಟಿಪಿಎಲ್ 3 ನಲ್ಲಿ ಆಟವಾಡಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ: WPL 2024: ಪೆರ್ರಿ ಪವರ್‌ ಫುಲ್‌ ಶಾಟ್‌ಗೆ ಪುಡಿ ಪುಡಿ ಆಯ್ತು ಕಾರಿನ ಗ್ಲಾಸ್.! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News