Ravichandran Ashwin: ಸ್ಪಿನ್ ಮಾಂತ್ರಿಕ ಅಶ್ವಿನ್ ಮೋಡಿಗೆ ವಿಶ್ವದಾಖಲೆ ಸೃಷ್ಟಿ: ಕ್ರಿಕೆಟ್ ದಿಗ್ಗಜ ಭಾಗವತ್ ಚಂದ್ರಶೇಖರ್ ವಿಶ್ವದಾಖಲೆಯೂ ಬ್ರೇಕ್

Ravichandran Ashwin Test Wicket Record: ರವಿಚಂದ್ರನ್ ಅಶ್ವಿನ್ ಈಗ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌’ನಲ್ಲಿ 21 ಟೆಸ್ಟ್ ಪಂದ್ಯಗಳಲ್ಲಿ 97 ವಿಕೆಟ್ ಪಡೆದಿದ್ದಾರೆ. ಭಾರತ ಪರ 96 ಟೆಸ್ಟ್ ಪಂದ್ಯಗಳಲ್ಲಿ 499 ವಿಕೆಟ್ ಪಡೆದಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ 34 ಬಾರಿ ಐದು ವಿಕೆಟ್ ಪಡೆದಿರುವ ಸಾಧನೆ ಮಾಡಿದ್ದಾರೆ

Written by - Bhavishya Shetty | Last Updated : Feb 5, 2024, 03:36 PM IST
    • ಟೀಂ ಇಂಡಿಯಾದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್
    • ಮಾಜಿ ಲೆಗ್ ಸ್ಪಿನ್ನರ್ ಭಾಗವತ್ ಚಂದ್ರಶೇಖರ್ ಅವರ ಮಹಾ ದಾಖಲೆ ಬ್ರೇಕ್
    • ಟೆಸ್ಟ್ ಕ್ರಿಕೆಟ್‌’ನಲ್ಲಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದಿರುವ ಬೌಲರ್
Ravichandran Ashwin: ಸ್ಪಿನ್ ಮಾಂತ್ರಿಕ ಅಶ್ವಿನ್ ಮೋಡಿಗೆ ವಿಶ್ವದಾಖಲೆ ಸೃಷ್ಟಿ: ಕ್ರಿಕೆಟ್ ದಿಗ್ಗಜ ಭಾಗವತ್ ಚಂದ್ರಶೇಖರ್ ವಿಶ್ವದಾಖಲೆಯೂ ಬ್ರೇಕ್ title=
Ravichandran Ashwin

Ashwin's Milestone in India vs. England 2nd Test: ವಿಶಾಖಪಟ್ಟಣಂ ಟೆಸ್ಟ್‌ನ ನಾಲ್ಕನೇ ದಿನದಂದು ಟೀಂ ಇಂಡಿಯಾದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಭಾರತದ ಮಾಜಿ ಲೆಗ್ ಸ್ಪಿನ್ನರ್ ಭಾಗವತ್ ಚಂದ್ರಶೇಖರ್ ಅವರ ಮಹಾ ದಾಖಲೆಯನ್ನು ಮುರಿದಿದ್ದಾರೆ.

ರವಿಚಂದ್ರನ್ ಅಶ್ವಿನ್ ಇದೀಗ ಟೆಸ್ಟ್ ಕ್ರಿಕೆಟ್‌’ನಲ್ಲಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದಿರುವ ಬೌಲರ್ ಎಂದೆನಿಸಿಕೊಂಡಿದ್ದಾರೆ. ಇಂಗ್ಲೆಂಡ್‌ನ 2ನೇ ಇನಿಂಗ್ಸ್‌’ನ 29ನೇ ಓವರ್‌’ನ ಎರಡನೇ ಎಸೆತದಲ್ಲಿ ಆಲಿ ಪೋಪ್ (23) ಅವರ ಎಸೆತವನ್ನು ಜಸ್ಟ್ 0.45 ಸೆಕೆಂಡ್’ನಲ್ಲಿ ನಾಯಕ ರೋಹಿತ್ ಶರ್ಮಾ ಕ್ಯಾಚ್ ಪಡೆದು ಔಟ್ ಮಾಡಿದ್ದರು. ಈ ಮೂಲಕ ರವಿಚಂದ್ರನ್ ಅಶ್ವಿನ್ ಈ ದೊಡ್ಡ ಮೈಲಿಗಲ್ಲು ಸಾಧಿಸಿದ್ದಾರೆ.

ಇದನ್ನೂ ಓದಿ:‘ಅಬ್ಬಬ್ಬ’ ಏನ್ ಸಖತಾಗಿದೆ ಟ್ರೇಲರ್…! ಫುಲ್ ಫಿದಾ ಆದ್ರಂತೆ ನಟ ರಾಕ್ಷಸ ಡಾಲಿ ಧನಂಜಯ

ರವಿಚಂದ್ರನ್ ಅಶ್ವಿನ್ ಈಗ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌’ನಲ್ಲಿ 21 ಟೆಸ್ಟ್ ಪಂದ್ಯಗಳಲ್ಲಿ 97 ವಿಕೆಟ್ ಪಡೆದಿದ್ದಾರೆ. ಭಾರತ ಪರ 96 ಟೆಸ್ಟ್ ಪಂದ್ಯಗಳಲ್ಲಿ 499 ವಿಕೆಟ್ ಪಡೆದಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ 34 ಬಾರಿ ಐದು ವಿಕೆಟ್ ಪಡೆದಿರುವ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, 8 ಬಾರಿ ಪಂದ್ಯವೊಂದರಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ.

ಭಾರತದ ಮಾಜಿ ಲೆಗ್ ಸ್ಪಿನ್ನರ್ ಭಾಗವತ್ ಚಂದ್ರಶೇಖರ್ ಇಂಗ್ಲೆಂಡ್ ವಿರುದ್ಧ 23 ಟೆಸ್ಟ್ ಪಂದ್ಯಗಳಲ್ಲಿ 27.27 ಸರಾಸರಿಯಲ್ಲಿ 95 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧ ಚಂದ್ರಶೇಖರ್ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವೆಂದರೆ 107 ರನ್‌’ಗಳಿಗೆ 9 ವಿಕೆಟ್ ಪಡೆದಿರುವುದು. ಭಾಗವತ್ ಚಂದ್ರಶೇಖರ್ ಭಾರತ ಪರ 58 ಟೆಸ್ಟ್ ಪಂದ್ಯಗಳಲ್ಲಿ 242 ವಿಕೆಟ್ ಪಡೆದಿದ್ದಾರೆ. ಇದೀಗ ಅಶ್ವಿನ್ ಟೆಸ್ಟ್ ಕ್ರಿಕೆಟ್‌’ನಲ್ಲಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದಿರುವ ಭಾಗವತ್ ಚಂದ್ರಶೇಖರ್ ಅವರನ್ನು ಹಿಂದಿಕ್ಕಿದ್ದಾರೆ.

ಇನ್ನು ಭಾರತದ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಇಂಗ್ಲೆಂಡ್ ವಿರುದ್ಧ 19 ಟೆಸ್ಟ್ ಪಂದ್ಯಗಳಲ್ಲಿ 30.59 ಸರಾಸರಿಯಲ್ಲಿ 92 ವಿಕೆಟ್ ಪಡೆದಿದ್ದಾರೆ. ಭಾರತ ಪರ 132 ಟೆಸ್ಟ್ ಪಂದ್ಯಗಳಲ್ಲಿ 619 ವಿಕೆಟ್ ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್‌’ನಲ್ಲಿ 35 ಬಾರಿ ಐದು ವಿಕೆಟ್ ಪಡೆದಿದ್ದು, 8 ಬಾರಿ ಪಂದ್ಯವೊಂದರಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ.

ಬಿಷನ್ ಸಿಂಗ್ ಬೇಡಿ ಇಂಗ್ಲೆಂಡ್ ವಿರುದ್ಧ 22 ಟೆಸ್ಟ್ ಪಂದ್ಯಗಳಲ್ಲಿ 29.87 ಸರಾಸರಿಯಲ್ಲಿ 85 ವಿಕೆಟ್ ಪಡೆದಿದ್ದಾರೆ. ಭಾರತ ಪರ 67 ಟೆಸ್ಟ್ ಪಂದ್ಯಗಳಲ್ಲಿ 266 ವಿಕೆಟ್ ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ, 14 ಬಾರಿ ಐದು ವಿಕೆಟ್ ಪಡೆದಿದ್ದರೆ, ಒಮ್ಮೆ ಪಂದ್ಯವೊಂದರಲ್ಲಿ 10 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: ಜಸ್ಟ್ 0.45 ಸೆಕೆಂಡ್’ನಲ್ಲಿ ಅಸಾಧ್ಯ ಕ್ಯಾಚ್ ಹಿಡಿದ ರೋಹಿತ್ ಶರ್ಮಾ: ಕ್ರಿಕೆಟ್ ಜಗತ್ತೇ ಅಚ್ಚರಿ!

ಇಂಗ್ಲೆಂಡ್‌’ನ ಸ್ಟಾರ್ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಭಾರತದ ವಿರುದ್ಧ ಟೆಸ್ಟ್ ಕ್ರಿಕೆಟ್‌’ನಲ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಜೇಮ್ಸ್ ಆಂಡರ್ಸನ್ ಇದುವರೆಗೆ ಭಾರತದ ವಿರುದ್ಧ 36 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 144 ವಿಕೆಟ್ ಪಡೆದಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ 6 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News