R Ashwin Withdraws: ಟೆಸ್ಟ್ ಪಂದ್ಯದಿಂದ ಹಿಂದೆ ಸರಿದ ಆರ್‌ ಅಶ್ವಿನ್..!!

R Ashwin medical emergency: ಭಾರತದ ಸ್ಟಾರ್ ಸ್ಪಿನ್ನರ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಅವರಿಗೆ ಎಲ್ಲ ರೀತಿಯ ನೆರವು ನೀಡಲು ಸಿದ್ಧ ಎಂದು ಬಿಸಿಸಿಐ ಘೋಷಿಸಿದೆ.

Written by - Chetana Devarmani | Last Updated : Feb 17, 2024, 08:38 AM IST
  • ಭಾರತದ ಸ್ಟಾರ್ ಸ್ಪಿನ್ನರ್ ಅಶ್ವಿನ್
  • ಟೆಸ್ಟ್ ಪಂದ್ಯದಿಂದ ಹಿಂದೆ ಸರಿದ ಅಶ್ವಿನ್
  • ಮೆಡಿಕಲ್‌ ಎಮರ್ಜೆನ್ಸಿ ಕಾರಣ ಪಂದ್ಯದಿಂದ ಹೊರಗೆ
R Ashwin Withdraws: ಟೆಸ್ಟ್ ಪಂದ್ಯದಿಂದ ಹಿಂದೆ ಸರಿದ ಆರ್‌ ಅಶ್ವಿನ್..!! title=

India vs England test match update: ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಭಾರತದ ಸ್ಟಾರ್ ಸ್ಪಿನ್ನರ್ ಅಶ್ವಿನ್ ಹೊರಗುಳಿದಿದ್ದಾರೆ. ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿರುವುದಾಗಿ ಬಿಸಿಸಿಐ ಪ್ರಕಟಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಕೌಟುಂಬಿಕ ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಇಂಗ್ಲೆಂಡ್ ವಿರುದ್ಧದ 3 ನೇ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಈ ಸವಾಲಿನ ಸಮಯದಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಅಶ್ವಿನ್‌ಗೆ ತಂಡ ಸಂಪೂರ್ಣ ಬೆಂಬಲ ನೀಡುತ್ತಿದೆ. 

ಸ್ಟಾರ್ ಕ್ರಿಕೆಟಿಗ ಅಶ್ವಿನ್ ಮತ್ತು ಅವರ ಕುಟುಂಬಕ್ಕೆ ಬಿಸಿಸಿಐ ಸಂಪೂರ್ಣ ಬೆಂಬಲವನ್ನು ನೀಡುತ್ತದೆ. ಆಟಗಾರರು ಮತ್ತು ಪ್ರೀತಿಪಾತ್ರರ ಆರೋಗ್ಯ, ಯೋಗಕ್ಷೇಮವು ಅತ್ಯಂತ ಮುಖ್ಯವಾಗಿದೆ. ಈ ಸವಾಲಿನ ಸಮಯದಲ್ಲಿ ಅಶ್ವಿನ್ ಮತ್ತು ಅವರ ಕುಟುಂಬದ ಖಾಸಗಿತನವನ್ನು ಗೌರವಿಸಬೇಕೆಂದು ಬಿಸಿಸಿಐ ವಿನಂತಿಸಿದೆ. ಅಶ್ವಿನ್‌ಗೆ ಅಗತ್ಯವಿರುವ ಎಲ್ಲ ನೆರವು ನೀಡಲು ಬಿಸಿಸಿಐ ಸಿದ್ಧವಿದೆ. 

ಇದನ್ನೂ ಓದಿ: ಮದ್ಯ ಸೇವಿಸಿ ಮಹಿಳಾ ಕ್ರಿಕೆಟಿಗರೊಂದಿಗೆ ಅನುಚಿತವಾಗಿ ವರ್ತಿಸಿದ ಕೋಚ್‌..! 

ಭಾರತೀಯ ಕ್ರಿಕೆಟ್ ಮಂಡಳಿಯ ಆಡಳಿತಗಾರರಲ್ಲಿ ಒಬ್ಬರಾದ ರಾಜೀವ್ ಶುಕ್ಲಾ ಅವರು ತಮ್ಮ ಎಕ್ಸ್ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ತಾಯಿಯ ಅನಾರೋಗ್ಯದ ಕಾರಣ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಕ್ರಿಕೆಟ್ ಪಂದ್ಯದಿಂದ ಹಿಂದೆ ಸರಿದಿರುವುದಾಗಿ ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ. ಈ ಕಷ್ಟದ ಸಮಯದಲ್ಲಿ ಅಶ್ವಿನ್ ತನ್ನ ತಾಯಿಯೊಂದಿಗೆ ಇರಲು ಚೆನ್ನೈಗೆ ಹೋಗಿದ್ದಾರೆ ಎಂದು ರಾಜೀವ್ ಶುಕ್ಲಾ ಹೇಳಿದ್ದಾರೆ. ಅಶ್ವಿನ್ ತಾಯಿ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ನಿನ್ನೆಯಷ್ಟೇ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 500ನೇ ಟೆಸ್ಟ್ ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎಂಬ ದಾಖಲೆ ಬರೆದರು. ಭಾರತದ ಮಾಜಿ ಆಟಗಾರ ಅನಿಲ್ ಕುಂಬ್ಳೆ 619 ವಿಕೆಟ್‌ಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.  

ಇದನ್ನೂ ಓದಿ:  30 ವರ್ಷ ಹಳೆಯ ಶ್ರೇಷ್ಠ ದಾಖಲೆ ಮುರಿದ ಧ್ರುವ್ ಜುರೆಲ್: ಚೊಚ್ಚಲ ಟೆಸ್ಟ್’ನಲ್ಲೇ ಇತಿಹಾಸ ಸೃಷ್ಟಿ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News