Team India : ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾದ ಓಪನರ್ ಬ್ಯಾಟ್ಸ್‌ಮನ್‌ ಚೆಂಜ್

ಈ ಪಂದ್ಯದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ. ಕೆಲ ದಿನಗಳಿಂದ ನಿರಂತರ ಓಪನಿಂಗ್ ಕಾಂಬಿನೇಷನ್ ಮಾಡುತ್ತಿರುವ ಟೀಂ ಇಂಡಿಯಾ ಈ ಪಂದ್ಯದಲ್ಲೂ ಹೊಸ ಜೋಡಿಗೆ ಅವಕಾಶ ನೀಡಿದೆ.

Written by - Channabasava A Kashinakunti | Last Updated : Oct 10, 2022, 04:43 PM IST
  • 2022 ರ ಟಿ 20 ವಿಶ್ವಕಪ್ ಗಾಗಿ ಟೀಂ ಇಂಡಿಯಾ ತನ್ನ ತಯಾರಿ
  • ಈ ಬ್ಯಾಟ್ಸಮನ್ ಗೆ ದೊಡ್ಡ ಜವಾಬ್ದಾರಿ
  • ಇತ್ತೀಚೆಗಷ್ಟೇ ಬ್ಯಾಟ್‌ನಿಂದ ಅಬ್ಬರಿಸಿದ್ದ ಈ ಆಟಗಾರ
Team India : ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾದ ಓಪನರ್ ಬ್ಯಾಟ್ಸ್‌ಮನ್‌ ಚೆಂಜ್ title=

India vs Australia XI Warm up Match : 2022 ರ ಟಿ 20 ವಿಶ್ವಕಪ್ ಗಾಗಿ ಟೀಂ ಇಂಡಿಯಾ ತನ್ನ ತಯಾರಿಯನ್ನು ತೀವ್ರಗೊಳಿಸಿದೆ. ಅಕ್ಟೋಬರ್ 16 ರಂದು ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಮುನ್ನ ಟೀಂ ಇಂಡಿಯಾ ವೆಸ್ಟರ್ನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಪರ್ತ್‌ನಲ್ಲಿ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಸೋಮವಾರ ಉಭಯ ತಂಡಗಳ ನಡುವೆ ಮೊದಲ ಅಭ್ಯಾಸ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ. ಕೆಲ ದಿನಗಳಿಂದ ನಿರಂತರ ಓಪನಿಂಗ್ ಕಾಂಬಿನೇಷನ್ ಮಾಡುತ್ತಿರುವ ಟೀಂ ಇಂಡಿಯಾ ಈ ಪಂದ್ಯದಲ್ಲೂ ಹೊಸ ಜೋಡಿಗೆ ಅವಕಾಶ ನೀಡಿದೆ.

ಈ ಬ್ಯಾಟ್ಸಮನ್ ಗೆ ದೊಡ್ಡ ಜವಾಬ್ದಾರಿ

ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಬದಲಿಗೆ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಜೊತೆಗೆ ರಿಷಬ್ ಪಂತ್ ಬಂದಿದ್ದಾರೆ. ಆದಾಗ್ಯೂ, ಈ ಆರಂಭಿಕ ಜೋಡಿ ಸಂಪೂರ್ಣ ಫ್ಲಾಪ್ ಆಗಿತ್ತು. ನಾಯಕ ರೋಹಿತ್ ಶರ್ಮಾ 3 ರನ್ ಗಳಿಸಿ ಔಟಾದರೆ ರಿಷಬ್ ಪಂತ್ 9 ರನ್ ಗಳಿಸಲಷ್ಟೇ ಶಕ್ತರಾದರು.

ಇದನ್ನೂ ಓದಿ : T20 World Cup: T20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಇವರೇ ನೋಡಿ

ಕೆಎಲ್ ರಾಹುಲ್ ಗೆ ವಿಶ್ರಾಂತಿ

ಮೊದಲ ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು. ಈ ಇಬ್ಬರೂ ಆಟಗಾರರು ಎರಡನೇ ಅಭ್ಯಾಸ ಪಂದ್ಯದಲ್ಲಿ ಆಡುವುದನ್ನು ಕಾಣಬಹುದು. ಈ ಪಂದ್ಯದಲ್ಲಿ ಕೆಎಲ್ ರಾಹುಲ್‌ಗೆ ವಿಶ್ರಾಂತಿ ನೀಡಿದ್ದರಿಂದ ರಿಷಬ್ ಪಂತ್ ಓಪನಿಂಗ್ ಜವಾಬ್ದಾರಿ ಪಡೆದರು. ರಿಷಬ್ ಪಂತ್ ಈ ಹಿಂದೆ ಹಲವು ಬಾರಿ ಟೀಂ ಇಂಡಿಯಾ ಪರ ಇನ್ನಿಂಗ್ಸ್ ಆರಂಭಿಸಿದ್ದರು.

ಇತ್ತೀಚೆಗಷ್ಟೇ ಬ್ಯಾಟ್‌ನಿಂದ ಅಬ್ಬರಿಸಿದ್ದ ಈ ಆಟಗಾರ 

ಆಸ್ಟ್ರೇಲಿಯಾಕ್ಕೆ ತೆರಳುವ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಆಡಿತ್ತು. ಈ ಎರಡೂ ಸರಣಿಗಳಲ್ಲಿ ಕೆಎಲ್ ರಾಹುಲ್ ಅದ್ಭುತ ಪ್ರದರ್ಶನ ನೀಡಿದರು. ಟಿ20 ವಿಶ್ವಕಪ್‌ನಲ್ಲಿ ಆರಂಭಿಕ ಆಟಗಾರನಾಗಿ ಕೆಎಲ್ ರಾಹುಲ್ ಟೀಮ್ ಇಂಡಿಯಾದ ಮೊದಲ ಆಯ್ಕೆಯಾಗಲಿದ್ದಾರೆ. ಕೆಎಲ್ ರಾಹುಲ್ ಟೀಂ ಇಂಡಿಯಾ ಪರ ಇದುವರೆಗೆ 66 ಟಿ20 ಪಂದ್ಯಗಳನ್ನಾಡಿದ್ದು, 39.57ರ ಸರಾಸರಿಯಲ್ಲಿ 2137 ರನ್ ಗಳಿಸಿದ್ದಾರೆ.

ಇದನ್ನೂ ಓದಿ : IND vs SA 2nd ODI: ಅಯ್ಯರ್ ಶತಕದಬ್ಬರ-ಭಾರತಕ್ಕೆ ಭರ್ಜರಿ ಜಯ: ಸರಣಿ ಆಸೆ ಜೀವಂತ

ಕನ್ನಡ ಭಾಷೆಯಲ್ಲ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News