BCCI President : ಕನ್ನಡಿಗ ರೋಜರ್ ಬಿನ್ನಿಗೆ ಬಿಸಿಸಿಐ ಅಧ್ಯಕ್ಷ ಪಟ್ಟ

ವಿಶೇಷವೆಂದರೆ ರೋಜರ್ ಬಿನ್ನಿ ಬಿಸಿಸಿಐನಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಮೊದಲ ವಿಶ್ವ ಚಾಂಪಿಯನ್ ಕ್ರಿಕೆಟಿಗರಾಗಿದ್ದಾರೆ. ಅವರು 1983 ರಲ್ಲಿ ಮೊದಲ ಬಾರಿಗೆ ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದರು.

Written by - Channabasava A Kashinakunti | Last Updated : Oct 18, 2022, 02:20 PM IST
  • ಟೀಂ ಇಂಡಿಯಾ ಮಾಜಿ ಆಲ್ ರೌಂಡರ್ ರೋಜರ್ ಬಿನ್ನಿ
  • ಬಿಸಿಸಿಐ ಹೊಸ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಬಿನ್ನಿ
  • ಕ್ರಿಕೆಟ್ ನಿರ್ವಾಹಕರಾಗಿ ಬಿನ್ನಿ ಹೊಸಬರೇನಲ್ಲ
BCCI President : ಕನ್ನಡಿಗ ರೋಜರ್ ಬಿನ್ನಿಗೆ ಬಿಸಿಸಿಐ ಅಧ್ಯಕ್ಷ ಪಟ್ಟ title=

BCCI New President Roger Binny : ಟೀಂ ಇಂಡಿಯಾ ಮಾಜಿ ಆಲ್ ರೌಂಡರ್ ರೋಜರ್ ಬಿನ್ನಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹೊಸ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ನಾಯಕ ಸೌರವ್ ಗಂಗೂಲಿ ನಂತರ ಅವರು ಈ ಮಹತ್ವದ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿಶೇಷವೆಂದರೆ ರೋಜರ್ ಬಿನ್ನಿ ಬಿಸಿಸಿಐನಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಮೊದಲ ವಿಶ್ವ ಚಾಂಪಿಯನ್ ಕ್ರಿಕೆಟಿಗರಾಗಿದ್ದಾರೆ. ಅವರು 1983 ರಲ್ಲಿ ಮೊದಲ ಬಾರಿಗೆ ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದರು.

ಅವಿರೋಧವಾಗಿ ಆಯ್ಕೆಯಾದ ಬಿನ್ನಿ 

ಮುಂಬೈನಲ್ಲಿ ಮಂಗಳವಾರ ನಡೆದ 91ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ 36 ನೇ ಅಧ್ಯಕ್ಷರಾಗಿ ರೋಜರ್ ಬಿನ್ನಿ ಅವರನ್ನು ಆಯ್ಕೆ ಮಾಡಿದೆ. ಅವರೊಂದಿಗೆ ಸೌರವ್ ಗಂಗೂಲಿ ಕೂಡ ಇದ್ದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಪ್ರತಿನಿಧಿಸುವ ಬಿನ್ನಿ ಅವಿರೋಧವಾಗಿ ಆಯ್ಕೆಯಾದರು. ಬಿನ್ನಿ ಬಿಸಿಸಿಐ ಅಧ್ಯಕ್ಷರಾದ ಮೊದಲ ವಿಶ್ವಕಪ್ ಚಾಂಪಿಯನ್. 1983 ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಾಗ ಬಿನ್ನಿ ತಂಡದ ಸದಸ್ಯರಾಗಿದ್ದರು.

ಇದನ್ನೂ ಓದಿ : IND vs PAK ಮ್ಯಾಚ್​ಗೆ ಹೀಗಿದೆ ಟೀಂ ಇಂಡಿಯಾ Playing 11

ಕ್ರಿಕೆಟ್ ನಿರ್ವಾಹಕರಾಗಿ ಬಿನ್ನಿ ಹೊಸಬರೇನಲ್ಲ

67 ವರ್ಷದ ಬಿನ್ನಿ ಕ್ರಿಕೆಟ್ ಆಡಳಿತಕ್ಕೆ ಹೊಸಬರೇನಲ್ಲ. ಅವರು ಈ ಮೊದಲು ಕೋಚ್, ಮಾಜಿ ರಾಷ್ಟ್ರೀಯ ಆಯ್ಕೆಗಾರನ ಪಾತ್ರವನ್ನೂ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ ಸಿಎ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಅದೇ ಸಂಸ್ಥೆಯೊಂದಿಗೆ ಕೆಲಸ ಮಾಡಿದ್ದಾರೆ. ಬಿನ್ನಿ ದೇಶದ ಕ್ರಿಕೆಟ್ ಮಂಡಳಿಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಾಗ, ಅವರ ಮೇಲೆ ನಿರೀಕ್ಷೆಗಳು ಕೂಡ ಹೆಚ್ಚಿವೆ.

ರೋಜರ್ ವೃತ್ತಿಜೀವನ ಹೀಗಿತ್ತು

ರೋಜರ್ ಬಿನ್ನಿ ತಮ್ಮ ದೇಶೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಗೋವಾ ಮತ್ತು ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅವರು 27 ಟೆಸ್ಟ್ ಮತ್ತು 72 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಅವರು ಟೆಸ್ಟ್‌ನಲ್ಲಿ 47 ಮತ್ತು ಏಕದಿನ ಮಾದರಿಯಲ್ಲಿ 77 ವಿಕೆಟ್‌ಗಳನ್ನು ಪಡೆದಿದ್ದಾರೆ. ರೋಜರ್ ತಮ್ಮ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿಜೀವನದಲ್ಲಿ ಒಟ್ಟು 205 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅವರು ಐದು ಅರ್ಧ ಶತಕಗಳ ಸಹಾಯದಿಂದ ಟೆಸ್ಟ್‌ನಲ್ಲಿ 830 ರನ್ ಗಳಿಸಿದರು, ಆದರೆ ODIಗಳಲ್ಲಿ ಅವರು ಒಂದು ಅರ್ಧ ಶತಕದ ಆಧಾರದ ಮೇಲೆ ಒಟ್ಟು 629 ರನ್ ಗಳಿಸಿದರು. ಅವರ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ, ರೋಜರ್ ಒಟ್ಟು 6579 ರನ್ ಗಳಿಸಿದರು, 14 ಶತಕಗಳು ಮತ್ತು 33 ಅರ್ಧ ಶತಕಗಳನ್ನು ಗಳಿಸಿದರು.

ಇದನ್ನೂ ಓದಿ : ಫೈವ್ ಸ್ಟಾರ್ ದಬಾಂಗ್ ಡೆಲ್ಲಿಗೆ ಸತತ ಐದನೇ ಗೆಲುವು: ಪಾಟ್ನಾ ವಿರುದ್ಧ ಗೆದ್ದ ತಲೈವಾಸ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News