ಆಸೀಸ್ ವಿರುದ್ಧದ ಪಂದ್ಯದಿಂದ ಈ ಸ್ಟಾರ್ ಆಟಗಾರನನ್ನೇ ಹೊರಗಿಟ್ಟ ರೋಹಿತ್! ಭಾರತ ಏಷ್ಯಾಕಪ್ ಗೆಲ್ಲಲು ಕಾರಣವಾಗಿದ್ದೇ ಈತ...

India vs Australia: ಪ್ರಸ್ತುತ ODI ವಿಶ್ವಕಪ್ ಭಾರತದ ಆತಿಥ್ಯದಲ್ಲಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಭಾರತದ ಮೊದಲ ಪಂದ್ಯ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಭಾರತವನ್ನು ಟ್ರೋಫಿ ಗೆಲ್ಲಲು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.

Written by - Bhavishya Shetty | Last Updated : Oct 7, 2023, 09:26 PM IST
    • ಪ್ರಸ್ತುತ ODI ವಿಶ್ವಕಪ್ ಭಾರತದ ಆತಿಥ್ಯದಲ್ಲಿ ನಡೆಯುತ್ತಿದೆ
    • ಭಾರತವನ್ನು ಟ್ರೋಫಿ ಗೆಲ್ಲಲು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ
    • ಶುಭ್ಮನ್ ಗಿಲ್ ಬಗ್ಗೆ ನಾಯಕ ರೋಹಿತ್ ಶರ್ಮಾ ಬಿಗ್ ಅಪ್ಡೇಟ್
ಆಸೀಸ್ ವಿರುದ್ಧದ ಪಂದ್ಯದಿಂದ ಈ ಸ್ಟಾರ್ ಆಟಗಾರನನ್ನೇ ಹೊರಗಿಟ್ಟ ರೋಹಿತ್! ಭಾರತ ಏಷ್ಯಾಕಪ್ ಗೆಲ್ಲಲು ಕಾರಣವಾಗಿದ್ದೇ ಈತ... title=
Rohit Sharma

India vs Australia, Shubman Gill Update: ಭಾರತೀಯ ಕ್ರಿಕೆಟ್ ತಂಡವು ತನ್ನ ವಿಶ್ವಕಪ್ ಅಭಿಯಾನವನ್ನು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ ಪ್ರಾರಂಭಿಸಲಿದೆ. ಈ ಪಂದ್ಯ ನಾಳೆ ಅಂದರೆ ಭಾನುವಾರ ಅಕ್ಟೋಬರ್ 8 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಶುಭ್ಮನ್ ಗಿಲ್ ಆಡುವ ಬಗ್ಗೆ ಅನುಮಾನವಿದೆ. ಇದೀಗ ನಾಯಕ ರೋಹಿತ್ ಶರ್ಮಾ ಬಿಗ್ ಅಪ್ಡೇಟ್ ನೀಡಿದ್ದಾರೆ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಈ ತರಕಾರಿಯ ರಸ ಕುಡಿದರೆ ಒಂದೇ ವಾರದಲ್ಲಿ ಸರಾಗವಾಗಿ ಕರಗುತ್ತೆ ಹೊಟ್ಟೆಯ ಬೊಜ್ಜು

ಭಾರತದ ಮೊದಲ ಪಂದ್ಯ

ಪ್ರಸ್ತುತ ODI ವಿಶ್ವಕಪ್ ಭಾರತದ ಆತಿಥ್ಯದಲ್ಲಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಭಾರತದ ಮೊದಲ ಪಂದ್ಯ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಭಾರತವನ್ನು ಟ್ರೋಫಿ ಗೆಲ್ಲಲು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪಂದ್ಯಕ್ಕೆ ಒಂದು ದಿನ ಮೊದಲು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, “ಶುಭ್ಮನ್ ಗಿಲ್ ಇನ್ನೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ನಾವು ಅವರಿಗೆ ಚೇತರಿಸಿಕೊಳ್ಳಲು ಸಂಪೂರ್ಣ ಅವಕಾಶ ನೀಡುತ್ತಿದ್ದೇವೆ. ಸಮಯಕ್ಕೆ ಸರಿಯಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ಪ್ರಸ್ತುತ ಕಾಯುತ್ತಿದ್ದೇವೆ” ಎಂದಿದ್ದಾರೆ.

ಶುಭ್ಮನ್ ಗಿಲ್‌ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಇದೇ ಕಾರಣದಿಂದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಆಡುವುದು ಅನುಮಾನ. ಈಗ ಪಂದ್ಯಕ್ಕೆ ಬಹಳ ಕಡಿಮೆ ಸಮಯವಿದ್ದು, ಅಲ್ಲಿಯವರೆಗೆ ಫಿಟ್ ಆಗಿರಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.

12 ವರ್ಷಗಳ ನಂತರ ಸಿಕ್ಕಿದೆ ಅವಕಾಶ…!

ಭಾರತ 1983 ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಇದೀಗ 12 ವರ್ಷಗಳ ನಂತರ ವಿಶ್ವಕಪ್ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಮತ್ತೆ ಸಿಕ್ಕಿದೆ. 2011ರ ಫೈನಲ್‌’ನಲ್ಲಿ ಭಾರತ ಶ್ರೀಲಂಕಾವನ್ನು ಸೋಲಿಸಿತ್ತು. ಇನ್ನು ಇಲ್ಲಿಯವರೆಗೆ ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿರೋದು ಆಸ್ಟ್ರೇಲಿಯಾ. ಆದರೆ, 2015 ರಿಂದ ಈ ತಂಡಕ್ಕೆ ವಿಶ್ವಕಪ್ ಗೆಲ್ಲಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: 6,6,6,4,4,4,4,4,4... ವಿಶ್ವಕಪ್’ನಲ್ಲಿ 14 ಬೌಂಡರಿ, 3 ಸಿಕ್ಸರ್ ಬಾರಿಸಿದ ಈ ಸ್ಟಾರ್ ಕ್ರಿಕೆಟಿಗ!

ವಿಶ್ವಕಪ್‌’ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ ಮತ್ತು ರವಿಚಂದ್ರನ್ ಅಶ್ವಿನ್

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News