Team India In Final: ಎರಡನೇ ಸೆಮಿಫೈನಲ್’ನಲ್ಲಿ ಇಂಗ್ಲೆಂಡ್ ಅನ್ನು 68 ರನ್’ಗಳಿಂದ ಸೋಲಿಸುವ ಮೂಲಕ ಟೀಂ ಇಂಡಿಯಾ 10 ವರ್ಷಗಳ ನಂತರ 2024ರ ಟಿ20 ವಿಶ್ವಕಪ್ 2024 ರ ಫೈನಲ್‌ಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ 2022 ರ ಟಿ20 ವಿಶ್ವಕಪ್’ನಲ್ಲಿ 2 ವರ್ಷಗಳ ಹಿಂದೆ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಸೋಲಿಗೆ ಭಾರತವೂ ಸೇಡು ತೀರಿಸಿಕೊಂಡಿದೆ.
ಇದನ್ನೂ ಓದಿ: ದರ್ಶನ್ ಒಳ್ಳೆಯವರು, ಅವರು ನಿರಪರಾಧಿಯಾಗಿ ಹೊರಬರುತ್ತಾರೆ..! ನಟ ನಾಗ ಶೌರ್ಯ
ಟೀಂ ಇಂಡಿಯಾದ ಈ ಗೆಲುವಿನಲ್ಲಿ ನಾಯಕ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದಾರೆ. ರೋಹಿತ್ ಶರ್ಮಾ ತಮ್ಮ ನಾಯಕತ್ವ ಮತ್ತು ಅತ್ಯುತ್ತಮ ಬ್ಯಾಟಿಂಗ್’ನಿಂದ ಎಲ್ಲರ ಮನಗೆದ್ದಿರುವುದು ಸುಳ್ಳಲ್ಲ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ 39 ಎಸೆತಗಳಲ್ಲಿ 57 ರನ್ ಗಳ ಮಹತ್ವದ ಇನ್ನಿಂಗ್ಸ್ ಆಡಿದ್ದು ಟೀಂ ಇಂಡಿಯಾ ಸ್ಕೋರ್ ಅನ್ನು 171 ರನ್’ಗಳಿಗೆ ಕೊಂಡೊಯ್ದರು. ರೋಹಿತ್ ಶರ್ಮಾ ಅವರ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು.
2024 ರ T20 ವಿಶ್ವಕಪ್‌ನ ಫೈನಲ್’ನಲ್ಲಿ ಟೀಮ್ ಇಂಡಿಯಾ ಈಗ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ 2024 ರ ಅಂತಿಮ ಪಂದ್ಯವು ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ನಡೆಯಲಿದೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿ T20 ವಿಶ್ವಕಪ್ 2024 ರ ಫೈನಲ್’ಗೆ ತಲುಪುತ್ತಿದ್ದಂತೆ ಕಣ್ಣೀರು ಸುರಿಸಿದ್ದಾರೆ. ಡ್ರೆಸ್ಸಿಂಗ್ ರೂಮಿನ ಹೊರಗೆ ಕುರ್ಚಿಯ ಮೇಲೆ ಕುಳಿತು ಅಳುತ್ತಿರುವುದು ಕಂಡುಬಂತು. ರೋಹಿತ್ ಅಳುವುದನ್ನು ನೋಡಿದ ವಿರಾಟ್ ಕೊಹ್ಲಿ ನಗಿಸಲು ಪ್ರಯತ್ನಿಸಿದರು. ಈ ವೇಳೆ ರೋಹಿತ್ ಶರ್ಮಾ ಮುಖ ಮರೆಸಿಕೊಂಡರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
The pitch was hard for batting but he made easy runs.
He lost Kohli and Pant soon but he didn't lose the temperament.
He played with 3 spinners and proved himself as a captain too.
Now crying like a child after a great Victory over England.
Rohit Sharma the legend.… pic.twitter.com/YRNifbKs8U
— Sunanda Roy 👑 (@SaffronSunanda) June 27, 2024
Rohit Sharma got emotional on the Semis Finals victory. 🥹
- Virat Kohli confronted him! ❤️ pic.twitter.com/JMVT2qFx2q
— Mufaddal Vohra (@mufaddal_vohra) June 27, 2024
ಇದನ್ನೂ ಓದಿ: ಮಳೆಯಿಂದ ವಿಶ್ವಕಪ್ ಫೈನಲ್ ಪಂದ್ಯ ರದ್ದಾದರೆ ಟ್ರೋಫಿ ಗೆಲ್ಲುವ ತಂಡ ಯಾವುದು?
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವಿನ ಈ ಬಾಂಧವ್ಯವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ