Rohit Sharma: ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಭಾರತ ತಂಡ ಗೆದ್ದು ಬೀಗಿದೆ. ಬಾರ್ಬಡೋಸ್ನ ಚಂಡಮಾರುತಕ್ಕೆ ಸಿಲುಕಿಕೊಂಡಿದ್ದ ಟೀಂ ಇಂಡಿಯಾ ಆಟಗಾರರು ಮೂರು ದಿನಗಳ ಕಾಯುವಿಕೆಯ ನಂತರ ತಾಯ್ನಾಡಿಗೆ ಬಂದಿಳಿದಿದ್ದಾರೆ.
ಗುರುವಾರ ಬೆಳಗ್ಗೆ 6 ಗಂಟೆಗೆ ಬಿಸಿಸಿಐ ವ್ಯವಸ್ತೆ ಮಾಡಿದ್ದ ವಿಶೇಷ ವಿಮಾನದಲ್ಲಿ ಭಾರತದ ಆಟಗಾರರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. 13 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು.
ದೆಹಲಿಯಿಂದ ಬಸ್ ಏರಿ ಐಟಿಸಿ ಹೋಟೆಲ್ಗೆ ಆಗಮಿಸಿದ ಟೀಂ ಇಂಡಿಯಾದ ಆಟಗಾರರನ್ನು ಸ್ವಾಗತಿಸಲು ಭರ್ಜರಿ ಸಿದ್ದತೆಗಳನ್ನು ಮಾಡಿಕೊಂಡಿದ್ದರು. ಸಾಂಸ್ಕೃತಿಕ ನೃತ್ಯಗಾರರು ಹಾಗೂ ಅಭಿಮಾನಿಗಳ ಜೊತೆಗೆ ರೋಹಿತ್ ಹಾಗೂ ಟೀ ಇಂಡಿಯಾದ ಹುಡುಗರು ಕುಣಿದು ಕುಪ್ಪಳಿಸಿದರು.
ಇದನ್ನೂ ಓದಿ: ದೆಹಲಿಯಿಂದ ಮುಂಬೈವರೆಗೆ ಸಂಭ್ರಮಾಚರಣೆಯ ಮೇಳ.. ಟೀಂ ಇಂಡಿಯಾಗೆ ಭವ್ಯ ಸ್ವಾಗತ!
ಭಾರತೀಯ ಆಟಗಾರರು ತಮ್ಮ ಕಾಲುಗಳನ್ನು ತಾಳಕ್ಕೆ ತಕ್ಕಂತೆ ಚಲಿಸುವ ಮೂಲಕ ಅಭಿಮಾನಿಗಳನ್ನು ರೋಮಾಂಚನಗೊಳಿಸಿದರು.
ಈ ಮಧ್ಯೆ ಟೀಂ ಇಂಡಿಯಾ ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದೆ. ಕಾರ್ಯಕ್ರಮದ ನಂತರ ಭಾರತ ತಂಡ ಮುಂಬೈಗೆ ತೆರಳಲಿದೆ. ಬಳಿಕ ಸಂಜೆ 5 ಗಂಟೆಗೆ ರೋಡ್ ಶೋನಲ್ಲಿ ಪಾಲ್ಗೊಳ್ಳಲಿದೆ. ಎರಡು ಗಂಟೆಗಳ ಕಾಲ ಮೆರವಣಿಗೆ ನಡೆಯಲಿದ್ದು, ಓಪನ್ ಟಾಪ್ ಬಸ್ ನಲ್ಲಿ ಟೀಂ ಇಂಡಿಯಾ ಆಟಗಾರರು ಅಬಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.
Jubilation in the air 🥳
The #T20WorldCup Champions have arrived in New Delhi! 🛬
Presenting raw emotions of Captain @ImRo45 -led #TeamIndia's arrival filled with celebrations 👏👏 pic.twitter.com/EYrpJehjzj
— BCCI (@BCCI) July 4, 2024
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.