Team India : ಮೂರನೇ ಪಂದ್ಯದಿಂದ ಸಿರಾಜ್ - ಶಮಿ ಔಟ್? ಸುಳಿವು ನೀಡಿದ ರೋಹಿತ್

India vs New Zealand : ನ್ಯೂಜಿಲೆಂಡ್ ವಿರುದ್ಧದ ಟಿ20 ಬಳಿಕ ಭಾರತ ತಂಡ ಏಕದಿನ ಸರಣಿಯನ್ನು ಗೆದ್ದು ಬಿಗಿದೆ. ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡುತ್ತಿರುವ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

Written by - Channabasava A Kashinakunti | Last Updated : Jan 22, 2023, 05:00 PM IST
  • ಕ್ಯಾಪ್ಟನ್ ರೋಹಿತ್ ಹೇಳಿದ್ದು ಹೀಗೆ
  • ಸಿರಾಜ್ ಮತ್ತು ಶಮಿಗೆ ವಿಶ್ರಾಂತಿ!
  • ಶಮಿ - ಸಿರಾಜ್ ಜೊತೆಯಲ್ಲಿ 12 ಓವರ್‌ ಆಟ
Team India : ಮೂರನೇ ಪಂದ್ಯದಿಂದ ಸಿರಾಜ್ - ಶಮಿ ಔಟ್? ಸುಳಿವು ನೀಡಿದ ರೋಹಿತ್ title=

India vs New Zealand, 3rd ODI Playing 11 : ನ್ಯೂಜಿಲೆಂಡ್ ವಿರುದ್ಧದ ಟಿ20 ಬಳಿಕ ಭಾರತ ತಂಡ ಏಕದಿನ ಸರಣಿಯನ್ನು ಗೆದ್ದು ಬಿಗಿದೆ. ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡುತ್ತಿರುವ ಟೀಂ ಇಂಡಿಯಾ 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇದೀಗ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ಜನವರಿ 24 ರಂದು ಇಂದೋರ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಇಬ್ಬರು ಅತ್ಯುತ್ತಮ ಆಟಗಾರರಿಗೆ ವಿಶ್ರಾಂತಿ ನೀಡಲು ನಾಯಕ ರೋಹಿತ್ ಸೂಚಿಸಿದ್ದಾರೆ.

ಕ್ಯಾಪ್ಟನ್ ರೋಹಿತ್ ಹೇಳಿದ್ದು ಹೀಗೆ

ಭಾರತ ಮುಂದಿನ ತಿಂಗಳಿನಿಂದ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿಯನ್ನು (IND vs AUS ಟೆಸ್ಟ್) ಆಡಬೇಕಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಸಂಬಂಧಿಸಿದಂತೆ ಭಾರತಕ್ಕೆ ಇದು ಅತ್ಯಂತ ಮಹತ್ವದ ಸರಣಿಯಾಗಿದೆ. ಇದಕ್ಕಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈಗಾಗಲೇ ಸಜ್ಜಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ಇಬ್ಬರು ಅದ್ಭುತ ಬೌಲರ್‌ಗಳಾದ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲು ರೋಹಿತ್ ಶರ್ಮಾ ಸೂಚಿಸಿದ್ದಾರೆ.

ಇದನ್ನೂ ಓದಿ : IND vs NZ : ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ!

ಸಿರಾಜ್ ಮತ್ತು ಶಮಿಗೆ ವಿಶ್ರಾಂತಿ!

ರಾಯ್‌ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯದ ಬಳಿಕ ಮಾತನಾಡಿದ ರೋಹಿತ್ ಶರ್ಮಾ, 'ಕಳೆದ ಐದು ಪಂದ್ಯಗಳಲ್ಲಿ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಟೀಂ ಇಂಡಿಯಾದ ಶಮಿ ಮತ್ತು ಸಿರಾಜ್ ಅವರನ್ನು ಮೂರನೇ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಶಮಿ - ಸಿರಾಜ್ ಜೊತೆಯಲ್ಲಿ 12 ಓವರ್‌ ಆಟ

ಎರಡನೇ ಏಕದಿನ ಪಂದ್ಯದಲ್ಲೂ ಈ ಇಬ್ಬರು ಬೌಲರ್‌ಗಳಿಂದ ರೋಹಿತ್ 12 ಓವರ್‌ಗಳನ್ನು ಮಾತ್ರ ಪಡೆಯಲು ಸಾಧ್ಯವಾಗಿದೆ. ಶಮಿ 6 ಓವರ್‌ಗಳಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದರೆ. ಸಿರಾಜ್ ಅಷ್ಟೇ ಓವರ್‌ಗಳನ್ನು ಎಸೆದು, ಕೇವಲ 10 ರನ್ ನೀಡಿ ಒಂದು ವಿಕೆಟ್ ಪಡೆದರು. ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಗೆ ಈ ಇಬ್ಬರೂ ಬೌಲರ್‌ಗಳನ್ನು ಹೊಸದಾಗಿ ಇರಿಸಿಕೊಳ್ಳಲು ಬಯಸಿರುವುದಾಗ ರೋಹಿತ್ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಇಂದೋರ್ ನಲ್ಲಿ ನಡೆಯಲಿರುವ ಸರಣಿಯ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಗೆ ಅವಕಾಶ ಸಿಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : Rohit Sharma Retirement: ನಾಯಕ ಸ್ಥಾನಕ್ಕೆ ರೋಹಿತ್ ಶರ್ಮಾ ನಿವೃತ್ತಿ!? ವಿಶ್ವಕಪ್ ಬಳಿಕ ಇವರೇ ಟೀಂ ಇಂಡಿಯಾ ಕ್ಯಾಪ್ಟನ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News