Rohit Sharma : ಟೀಂ ಇಂಡಿಯಾದ ಹಣೆಬರಹವನ್ನೇ ಬದಲಿಸಿದ ಕ್ಯಾಪ್ಟನ್ ರೋಹಿತ್ ಶರ್ಮಾ!

ಇದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಸತತ ಒಂಬತ್ತನೇ ಜಯವಾಗಿದ್ದು, ಪೂರ್ಣಾವಧಿ ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸತತ ಆರನೇ ಟಿ20 ಗೆಲುವಾಗಿದೆ. ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 17 ರನ್ ಗಳಿಂದ ಸೋಲಿಸಿದ ಭಾರತ 3-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

Written by - Channabasava A Kashinakunti | Last Updated : Feb 21, 2022, 09:47 AM IST
  • ನಾಯಕನಾದ ಮೇಲೆ ಹಣೆಬರಹವನ್ನೇ ಬದಲಿಸಿದ ರೋಹಿತ್ ಶರ್ಮಾ
  • ವಿಶ್ವ ಕ್ರಿಕೆಟ್‌ನಲ್ಲಿ ಭಾರತ ಈ ಅದ್ಭುತ ಸಾಧನೆ ಮಾಡಿದೆ
  • ವೆಸ್ಟ್ ಇಂಡೀಸ್ ಏಕದಿನ ಸರಣಿಯಲ್ಲೂ 3-0 ಅಂತರದಿಂದ ಹೊರಬಿದ್ದಿದೆ.
Rohit Sharma : ಟೀಂ ಇಂಡಿಯಾದ ಹಣೆಬರಹವನ್ನೇ ಬದಲಿಸಿದ ಕ್ಯಾಪ್ಟನ್ ರೋಹಿತ್ ಶರ್ಮಾ! title=

ನವದೆಹಲಿ : ರೋಹಿತ್ ಶರ್ಮಾ ಟೆಸ್ಟ್, ಏಕದಿನ ಮತ್ತು ಟಿ20 ನಾಯಕರಾದ ತಕ್ಷಣ ಟೀಂ ಇಂಡಿಯಾದ ಭವಿಷ್ಯವನ್ನೇ ಬದಲಿಸಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ಭಾರತ ಉತ್ತಮ ಸಾಧನೆ ಮಾಡಿದೆ. ಐಸಿಸಿ ಟಿ20 ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಅನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಇದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಸತತ ಒಂಬತ್ತನೇ ಜಯವಾಗಿದ್ದು, ಪೂರ್ಣಾವಧಿ ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸತತ ಆರನೇ ಟಿ20 ಗೆಲುವಾಗಿದೆ. ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 17 ರನ್ ಗಳಿಂದ ಸೋಲಿಸಿದ ಭಾರತ 3-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

ನಾಯಕನಾದ ಮೇಲೆ ಹಣೆಬರಹವನ್ನೇ ಬದಲಿಸಿದ ರೋಹಿತ್ ಶರ್ಮಾ 

ಟಿ20 ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ(Rohit Sharma) ನೇತೃತ್ವದ ಟೀಂ ಇಂಡಿಯಾ ಅಧಿಕೃತವಾಗಿ ನಂಬರ್ ಒನ್ ಸ್ಥಾನದಲ್ಲಿದೆ. 3 ಮೇ 2016 ರಂದು ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತಂಡ ಕೊನೆಯ ಬಾರಿ ಅಗ್ರಸ್ಥಾನದಲ್ಲಿತ್ತು. 12 ಫೆಬ್ರವರಿ 2016 ರಿಂದ ಮೇ 3 2016 ರವರೆಗೆ ಟೀಮ್ ಇಂಡಿಯಾ ಈ ಸ್ಥಾನದಲ್ಲಿತ್ತು.

ಇದನ್ನೂ ಓದಿ : IND vs WI: ಟೀಂ ಇಂಡಿಯಾಗೆ ದೊಡ್ಡ ಹೊಡೆತ, ರೋಹಿತ್ ದೊಡ್ಡ ಅಸ್ತ್ರ ಶ್ರೀಲಂಕಾ ಸರಣಿಯಿಂದ ಹೊರಗುಳಿಯುವ ಸಾಧ್ಯತೆ!

ವೆಸ್ಟ್ ಇಂಡೀಸ್ ವಿರುದ್ಧದ ಈ ಟಿ20 ಸರಣಿ ಗೆಲುವು ಭಾರತಕ್ಕೆ ತವರಿನಲ್ಲಿ ಸತತ ಆರನೇ ಟಿ20 ಸರಣಿ ಜಯವಾಗಿದೆ. ಭಾರತ ಕೊನೆಯದಾಗಿ 2019ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ20(T20)ಯಲ್ಲಿ ತವರಿನ ಸರಣಿಯನ್ನು ಕಳೆದುಕೊಂಡಿತ್ತು. ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ಗೆ 185 ರನ್ ಗಳ ಗುರಿ ನೀಡಿದೆ. ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 184 ರನ್ ಗಳಿಸಿತು. ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಲಷ್ಟೇ ಶಕ್ತವಾಯಿತು.

ವಿಶ್ವ ಕ್ರಿಕೆಟ್‌ನಲ್ಲಿ ಭಾರತ ಈ ಅದ್ಭುತ ಪವಾಡ ಮಾಡಿದೆ

ಭಾರತದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್(Surya Kumar Yadav) 31 ಎಸೆತಗಳಲ್ಲಿ 65 ರನ್ ಗಳಿಸಿದರು. ವೆಂಕಟೇಶ್ ಅಯ್ಯರ್ 19 ಎಸೆತಗಳಲ್ಲಿ 35 ರನ್ ಗಳಿಸಿ ಅಮೋಘ ಇನ್ನಿಂಗ್ಸ್ ಆಡಿದರು. ಈ ವೇಳೆ ಸೂರ್ಯಕುಮಾರ್ ಯಾದವ್ ಒಂದು ಬೌಂಡರಿ ಹಾಗೂ 7 ಸಿಕ್ಸರ್ ಬಾರಿಸಿದರು. ಸೂರ್ಯಕುಮಾರ್ ಪಂದ್ಯಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿ ಪಡೆದರು. ರೋಹಿತ್ ಶರ್ಮಾಗೆ ಇದು ಸತತ ಮೂರನೇ ಸರಣಿ ಜಯವಾಗಿದೆ. ಇದಕ್ಕೂ ಮುನ್ನ ರೋಹಿತ್ ನಾಯಕತ್ವದಲ್ಲಿ ಭಾರತ ತಂಡ ಟಿ20ಯಲ್ಲಿ ನ್ಯೂಜಿಲೆಂಡ್ ವಿರುದ್ಧ 3-0 ಅಂತರದಲ್ಲಿ ಜಯ ಸಾಧಿಸಿತ್ತು. ನಾಯಕನಾಗಿ ರೋಹಿತ್ ತಮ್ಮ ತವರಿನಲ್ಲಿ 15 ಪಂದ್ಯಗಳಲ್ಲಿ 14 ಪಂದ್ಯಗಳನ್ನು ಗೆದ್ದಿದ್ದಾರೆ.

ಇದನ್ನೂ ಓದಿ : IND vs WI: ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್, ಭಾರತಕ್ಕೆ 3-0 ಅಂತರದಿಂದ ಸರಣಿ ವಶ

ವೆಸ್ಟ್ ಇಂಡೀಸ್(West Indies) ಪರ ನಿಕೋಲಸ್ ಪೂರನ್ ಸತತ ಮೂರನೇ ಅರ್ಧಶತಕ ಗಳಿಸಿದರು. ಭಾರತದ ಪರ ವೇಗಿ ಹರ್ಷಲ್ ಪಟೇಲ್ 22 ರನ್ ನೀಡಿ 3 ವಿಕೆಟ್ ಪಡೆದರು. ಕೋಲ್ಕತ್ತಾದ ಈಡನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ 17 ರನ್‌ಗಳ ಜಯ ಸಾಧಿಸಿತು. ವೆಸ್ಟ್ ಇಂಡೀಸ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 3-0 ಅಂತರದಲ್ಲಿ ಜಯ ಸಾಧಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News