Rohit Sharma Ruled Out From First Test : ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಟೆಸ್ಟ್‌ಗಳ ಸರಣಿ ನಡೆಯಲಿದೆ. ಆದರೆ ಇದಕ್ಕೂ ಮುನ್ನ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ಟೆಸ್ಟ್ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಯುವ ಬ್ಯಾಟ್ಸ್‌ಮನ್‌ಗೆ ಟೀಂ ಇಂಡಿಯಾ ಎಂಟ್ರಿ ನೀಡಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬದಲಿಗೆ ಕೆಎಲ್ ರಾಹುಲ್ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.
ರೋಹಿತ್ ಬದಲಿಗೆ ಈ ಆಟಗಾರನಿಗೆ ಅವಕಾಶ ಸಿಕ್ಕಿದೆ
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಎಡಗೈ ಹೆಬ್ಬೆರಳಿಗೆ ಗಾಯವಾದ ಕಾರಣ ಮುಂಬೈನಲ್ಲಿ ತಜ್ಞರನ್ನು ಭೇಟಿ ಮಾಡಿದ್ದರು. ಗಾಯದ ಸರಿಯಾದ ನಿರ್ವಹಣೆಗೆ ಅವರಿಗೆ ಸಲಹೆ ನೀಡಲಾಗಿದೆ ಮತ್ತು ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಆಡುತ್ತಿಲ್ಲ. ಬಿಸಿಸಿಐನ ವೈದ್ಯಕೀಯ ತಂಡವು ಎರಡನೇ ಮತ್ತು ಅಂತಿಮ ಟೆಸ್ಟ್‌ಗೆ ಅವರ ಲಭ್ಯತೆಯ ಬಗ್ಗೆ ನಂತರ ನಿರ್ಧರಿಸುತ್ತದೆ. ಆಯ್ಕೆಗಾರರು ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಬದಲಿಗೆ ಅಭಿಮನ್ಯು ಈಶ್ವರನ್ ಗೆ ಅವಕಾಶ ನೀಡಿದ್ದಾರೆ.
ಇದನ್ನೂ ಓದಿ : Team India : ಈ ಸ್ಟಾರ್ ಆಟಗಾರನ ವೃತ್ತಿಜೀವನಕ್ಕೆ ಮುಳುವಾದ ಇಶಾನ್ ಕಿಶನ್!
ಅತ್ಯುತ್ತಮ ಫಾರ್ಮ್‌ನಲ್ಲಿ ಈ ಆಟಗಾರ
ಅಭಿಮನ್ಯು ಈಶ್ವರನ್ ಸ್ಫೋಟಕ ಬ್ಯಾಟಿಂಗ್‌ನಲ್ಲಿ ಪರಿಣತಿ ಹೊಂದಿರುವ ಆಟಗಾರ. ಅವರು ಯಾವುದೇ ಬೌಲರ್ ನ ಬೌಲಿಂಗ್ ಗೆ ಹಿಗ್ಗಾಮುಗ್ಗಾ ಬ್ಯಾಟ್ ಬೀಸುವ ಸಾಮರ್ಥ್ಯ ಹೊಂದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಈಶ್ವರನ್ ಶತಕ ಬಾರಿಸಿ ಎಲ್ಲರ ಮನ ಗೆದ್ದಿದ್ದರು. ಅಭಿಮನ್ಯು ಈಶ್ವರನ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ.
ದೇಶಿ ಕ್ರಿಕೆಟ್ ನಲ್ಲಿ ಶಕ್ತಿ ಪ್ರದರ್ಶನ
ಅವಕಾಶ ಸಿಕ್ಕರೆ 27ರ ಹರೆಯದ ಈಶ್ವರನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಬಹುದು. ಈಶ್ವರನ್ ಇದುವರೆಗೆ 77 ಪ್ರಥಮ ದರ್ಜೆ ಪಂದ್ಯಗಳಲ್ಲಿ 17 ಶತಕ ಮತ್ತು 23 ಅರ್ಧ ಶತಕ ಸೇರಿದಂತೆ 5419 ರನ್ ಗಳಿಸಿದ್ದಾರೆ. ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಅವರು 78 ಪಂದ್ಯಗಳಲ್ಲಿ 7 ಶತಕ ಮತ್ತು 21 ಅರ್ಧ ಶತಕಗಳ ಸಹಾಯದಿಂದ 3376 ರನ್ ಗಳಿಸಿದ್ದಾರೆ.
ಬಾಂಗ್ಲಾದೇಶ ಟೆಸ್ಟ್‌ಗೆ ಟೀಂ ಇಂಡಿಯಾ :
ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವ್‌ದೀಪ್ ಸಾನಿ, ಸ. ಜಯದೇವ್ ಉನದ್ಕತ್.
ಇದನ್ನೂ ಓದಿ : Team India: ಟೀಂ ಇಂಡಿಯಾಕ್ಕೆ ಮಾರಕವಾಗುತ್ತಿದೆ ರೋಹಿತ್-ದ್ರಾವಿಡ್ ಜೋಡಿ! ಇದುವೇ ಅತಿ ದೊಡ್ಡ ಕಾರಣ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.