IPL 2022: ಅಬ್ಬರಿಸುತ್ತಿರುವ ಆರ್‌ಸಿಬಿಗೆ ಅಂಕಪಟ್ಟಿಯಲ್ಲಿದೆ ಈ ಸ್ಥಾನ...

ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 18 ರನ್‌ಗಳ ಜಯಗಳಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ರನ್‌ಗಳ ಗೆಲುವು ಸಾಧಿಸಿದೆ. 

Written by - Bhavishya Shetty | Last Updated : Apr 17, 2022, 10:34 AM IST
  • ಅಂಕಪಟ್ಟಿಯಲ್ಲಿ ಮೇಲ್ದರ್ಜೆಗೆ ಏರಿದ ಆರ್‌ಸಿಬಿ
  • 60 ಎಸೆತಗಳಲ್ಲಿ ಅಜೇಯ 103 ರನ್ ಬಾರಿಸಿದ ಕೆಎಲ್ ರಾಹುಲ್
  • ಡೆಲ್ಲಿ ವಿರುದ್ಧ ಬೆಂಗಳೂರು ಅಬ್ಬರ
IPL 2022: ಅಬ್ಬರಿಸುತ್ತಿರುವ ಆರ್‌ಸಿಬಿಗೆ ಅಂಕಪಟ್ಟಿಯಲ್ಲಿದೆ ಈ ಸ್ಥಾನ... title=
Indian Premier League

ಬೆಂಗಳೂರು: ಐಪಿಎಲ್‌ 15ನೇ ಆವೃತ್ತಿಯ ಪಂದ್ಯಗಳು ನಡೆಯುತ್ತಿದ್ದು, ಕಳೆದ ದಿನ (ಏಪ್ರಿಲ್‌ 16) ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು  ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಒಂದು ಪಂದ್ಯ ನಡೆದರೆ, ಇನ್ನೊಂದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಟ ನಡೆಸಿದೆ. ಈ ಎರಡೂ ಪ್ರತ್ಯೇಕ ಪಂದ್ಯಗಳಲ್ಲಿ ಲಕ್ನೋ ಮತ್ತು ಬೆಂಗಳೂರು ತಂಡ ಜಯಿಸಿದ್ದು, ಅಂಕಪಟ್ಟಿಯಲ್ಲಿ ಮೇಲ್ದರ್ಜೆಗೆ ಏರಿದೆ. 

ಇದನ್ನು ಓದಿ: Kohli Catch Video : ಗಾಳಿಯಲ್ಲಿ ಜಿಗಿದು ಅಚ್ಚರಿಯ ಕ್ಯಾಚ್ ಹಿಡಿದ ವಿರಾಟ್ : ನೋಡಿದ್ರೆ ನೀವು ಶಾಕ್ ಆಗ್ತೀರಾ!

ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 18 ರನ್‌ಗಳ ಜಯ ಗಳಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ರನ್‌ಗಳ ಗೆಲುವು ಸಾಧಿಸಿದೆ. ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ 60 ಎಸೆತಗಳಲ್ಲಿ ಅಜೇಯ 103 ರನ್ ಬಾರಿಸಿ ತಂಡದ ಗೆಲುವಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಇನ್ನೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಗ್ಲೆನ್ ಮ್ಯಾಕ್ಸ್‌ವೆಲ್ 55 ರನ್‌ ಮತ್ತು ದಿನೇಶ್ ಕಾರ್ತಿಕ್ ಅಜೇಯ 66 ರನ್ ಬಾರಿಸಿ ಅಬ್ಬರಿಸಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ ಸೋಲುವುದರ ಮೂಲಕ ಟೂರ್ನಿಯಲ್ಲಿ ಸತತ ಆರನೇ ಸೋಲನ್ನು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿಯೇ ಉಳಿದುಕೊಂಡಿದೆ. ಇನ್ನೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಇಳಿಕೆ ಕಂಡಿದೆ. ಇನ್ನು ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಜಿಗಿತ ಕಂಡಿವೆ. 

ಅಂಕಪಟ್ಟಿ ವಿವರ: 
5 ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ಗಳಿಸಿ 8 ಅಂಕ ಪಡೆದಿದ್ದ ಗುಜರಾತ್ ಟೈಟಾನ್ಸ್ ತಂಡ ಅಗ್ರ ಸ್ಥಾನದಲ್ಲಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ 6 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಗೆಲುವು ಕಂಡು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ಇನ್ನು 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಆರೆಂಜ್‌ ಕ್ಯಾಪ್‌ ಪಟ್ಟಿ: 
ಕಳೆದ ದಿನ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 60 ಎಸೆತಗಳಿಗೆ ಅಜೇಯ 103 ರನ್ ಬಾರಿಸಿ ಅಬ್ಬರಿಸಿದ ಕೆಎಲ್ ರಾಹುಲ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ರಾಜಸ್ತಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ 5 ಪಂದ್ಯಗಳನ್ನಾಡಿ 272 ರನ್ ಕಲೆಹಾಕಿ ಅಗ್ರಸ್ಥಾನದಲ್ಲಿದ್ದಾರೆ. 

ಇದನ್ನು ಓದಿ: MI vs LSG: ಕನ್ನಡಿಗ ಕೆ.ಎಲ್ ರಾಹುಲ್ ಆರ್ಭಟಕ್ಕೆ ಸಚಿನ್, ಸೆಹ್ವಾಗ್ ದಾಖಲೆ ಧೂಳಿಪಟ

ಪರ್ಪಲ್ ಕ್ಯಾಪ್ ಪಟ್ಟಿ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 1 ವಿಕೆಟ್ ಪಡೆದಿರುವ ಕುಲ್ದೀಪ್ ಯಾದವ್ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದಾರೆ.  5 ಪಂದ್ಯಗಳನ್ನಾಡಿ 11 ವಿಕೆಟ್ ಪಡೆದಿರುವ ಕುಲ್ದೀಪ್ ಯಾದವ್ ದ್ವಿತೀಯ ಸ್ಥಾನದಲ್ಲಿದ್ದರೆ, 5 ಪಂದ್ಯಗಳನ್ನಾಡಿ 12 ವಿಕೆಟ್ ಪಡೆದಿರುವ ಯುಜುವೇಂದ್ರ ಚಾಹಲ್ ಅಗ್ರಸ್ಥಾನದಲ್ಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News