ಐರ್ಲೆಂಡ್ ವಿರುದ್ಧ 2ನೇ ಟಿ20ಯಲ್ಲಿ Team India ಗೆಲ್ಲಲು ಕಾರಣ ಧೋನಿಯ ಅಪ್ಪಟ ಶಿಷ್ಯ ಈ ಆರಂಭಿಕ ಆಟಗಾರ!

India vs Ireland 2nd T20: ಮಲಾಹೈಡ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ರುತುರಾಜ್ ಗಾಯಕ್ವಾಡ್ ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ. ಆರಂಭಿಕರಾಗಿ ಆಡಿದ ರುತುರಾಜ್ ಗಾಯಕ್ವಾಡ್ ಅದ್ಭುತ ಅರ್ಧಶತಕ ಗಳಿಸಿದರು.

Written by - Bhavishya Shetty | Last Updated : Aug 21, 2023, 07:27 AM IST
    • ಭಾರತ ಮತ್ತು ಐರ್ಲೆಂಡ್ ನಡುವೆ 3 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ
    • ಟೀಂ ಇಂಡಿಯಾದ ಯುವ ಆಟಗಾರನೊಬ್ಬ ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ
    • ಮಲಾಹೈಡ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ರುತುರಾಜ್ ಗಾಯಕ್ವಾಡ್ ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ.
ಐರ್ಲೆಂಡ್ ವಿರುದ್ಧ 2ನೇ ಟಿ20ಯಲ್ಲಿ Team India ಗೆಲ್ಲಲು ಕಾರಣ ಧೋನಿಯ ಅಪ್ಪಟ ಶಿಷ್ಯ ಈ ಆರಂಭಿಕ ಆಟಗಾರ!  title=
Ruturaj Gaikwad

India vs Ireland 2nd T20: ಭಾರತ ಮತ್ತು ಐರ್ಲೆಂಡ್ ನಡುವೆ 3 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಡಬ್ಲಿನ್‌ನ ಮಲಾಹೈಡ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 185 ರನ್ ಗಳಿಸಿತು. ಇನ್ನು ಈ ಇನ್ನಿಂಗ್ಸ್’ನಲ್ಲಿ ಟೀಂ ಇಂಡಿಯಾದ ಯುವ ಆಟಗಾರನೊಬ್ಬ ಸ್ಫೋಟಕ ಇನ್ನಿಂಗ್ಸ್ ಆಡಿದ್ದು, ತಂಡದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ಇದನ್ನೂ ಓದಿ: 1 ವರ್ಷದ ನಂತರ Team Indiaಗೆ ಮರಳಿದ ಈ ಆಟಗಾರನಿಗೆ ಉಪನಾಯಕ ಸ್ಥಾನ: ಕಮರಿದ ಹಾರ್ದಿಕ್ ಕನಸು!

ಮಲಾಹೈಡ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ರುತುರಾಜ್ ಗಾಯಕ್ವಾಡ್ ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ. ಆರಂಭಿಕರಾಗಿ ಆಡಿದ ರುತುರಾಜ್ ಗಾಯಕ್ವಾಡ್ ಅದ್ಭುತ ಅರ್ಧಶತಕ ಗಳಿಸಿದರು. 43 ಎಸೆತಗಳಲ್ಲಿ 58 ರನ್’ಗಳ ಇನಿಂಗ್ಸ್‌ ಆಡಿದ ರುತುರಾಜ್ ಗಾಯಕ್ವಾಡ್ ಅವರ ಬ್ಯಾಟ್‌’ನಿಂದ 6 ಬೌಂಡರಿ ಮತ್ತು 1 ಸಿಕ್ಸರ್ ಹೊರಬಂದಿದೆ. ಗಾಯಕ್ವಾಡ್ 134.88 ಸ್ಟ್ರೈಕ್ ರೇಟ್‌’ನಲ್ಲಿ ರನ್ ಗಳಿಸುವ ಮೂಲಕ ತಂಡಕ್ಕೆ ದೊಡ್ಡ ಸ್ಕೋರ್ ತಲುಪಲು ಮಹತ್ವದ ಕೊಡುಗೆ ನೀಡಿದರು.

ಈ ಸರಣಿಗೆ ರುತುರಾಜ್ ಗಾಯಕ್ವಾಡ್ ಅವರನ್ನು ಟೀಂ ಇಂಡಿಯಾದ ಉಪನಾಯಕರನ್ನಾಗಿ ಮಾಡಲಾಗಿದೆ. ಇನ್ನು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಟೀಮ್ ಇಂಡಿಯಾ ಏಷ್ಯನ್ ಗೇಮ್ಸ್ ಆಡಲಿದೆ. ಈ ಏಷ್ಯನ್ ಗೇಮ್ಸ್ 2023 ರ ಭಾರತೀಯ ಪುರುಷರ ಕ್ರಿಕೆಟ್ ತಂಡದ ನಾಯಕತ್ವವನ್ನು ರುತುರಾಜ್ ಗಾಯಕ್ವಾಡ್ ಅವರಿಗೆ ಹಸ್ತಾಂತರಿಸಲಾಗಿದೆ. ಗಾಯಕ್ವಾಡ್ ನೇತೃತ್ವದ ಪುರುಷರ ತಂಡವು ಜೂನ್ 1 ರವರೆಗೆ ಐಸಿಸಿ ಟಿ20 ಶ್ರೇಯಾಂಕದ ಆಧಾರದ ಮೇಲೆ ಕ್ವಾರ್ಟರ್ ಫೈನಲ್‌’ಗೆ ನೇರ ಪ್ರವೇಶ ಪಡೆದಿದೆ.

ಇದನ್ನೂ ಓದಿ: Ireland vs India, 2nd T20I: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 33 ರನ್ ಗಳ ಭರ್ಜರಿ ಗೆಲುವು

ಸಂಜು ಸ್ಯಾಮ್ಸನ್ ಶಕ್ತಿ ಪ್ರದರ್ಶನ:

ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೂಡ ಉತ್ತಮ ಇನಿಂಗ್ಸ್ ಆಡುವಲ್ಲಿ ಯಶಸ್ವಿಯಾದರು. ಸಂಜು ಸ್ಯಾಮ್ಸನ್ 26 ಎಸೆತಗಳಲ್ಲಿ 40 ರನ್ ಗಳಿಸಿದ್ದು, ಅವರ ಈ ಇನ್ನಿಂಗ್ಸ್‌’ನಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿದ್ದಾರೆ. ಇದಲ್ಲದೇ ಯಶಸ್ವಿ ಜೈಸ್ವಾಲ್ 11 ಎಸೆತಗಳಲ್ಲಿ 18 ರನ್ ಗಳಿಸಿದ್ದಾರೆ. ಉತ್ತಮ ಆರಂಭವನ್ನು ಪಡೆದರೂ ಸಹ ದೊಡ್ಡ ಮೊತ್ತವನ್ನು ಗಳಿಸುವಲ್ಲಿ ವಿಫಲರಾದರು. ಇನ್ನು, ರಿಂಕು ಸಿಂಗ್ ಕೂಡ 21 ಎಸೆತಗಳಲ್ಲಿ 38 ರನ್ ಕೊಡುಗೆ ನೀಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News