IND vs BAN: 2ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾಗೆ ಈ ಆಟಗಾರನ ಎಂಟ್ರಿ: ಮೈದಾನದಲ್ಲಿ ಬಿರುಗಾಳಿ ಗ್ಯಾರಂಟಿ

India vs Bangladesh, 2nd Test: ಇನ್ನು ಬಾಂಗ್ಲಾದೇಶ ವಿರುದ್ಧ ಡಿಸೆಂಬರ್ 22 ರಿಂದ ಢಾಕಾದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಳ್ಳಲು ಸಂಪೂರ್ಣ ಕಾತುರದಿಂದ ಕಾಯುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ತಲುಪುವ ರೇಸ್‌ನಲ್ಲಿ ಉಳಿಯಲು ಭಾರತಕ್ಕೆ ಈ ಪಂದ್ಯವನ್ನು ಗೆಲ್ಲುವುದು ಅವಶ್ಯಕ.

Written by - Bhavishya Shetty | Last Updated : Dec 20, 2022, 08:27 AM IST
    • ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಶಕ್ತಿ ದ್ವಿಗುಣಗೊಳ್ಳಲಿದೆ
    • ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ಗೆ ಅಪಾಯಕಾರಿ ಆಟಗಾರನ ಪ್ರವೇಶ
    • ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ
IND vs BAN: 2ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾಗೆ ಈ ಆಟಗಾರನ ಎಂಟ್ರಿ: ಮೈದಾನದಲ್ಲಿ ಬಿರುಗಾಳಿ ಗ್ಯಾರಂಟಿ title=
Shardul Thakur

India vs Bangladesh, 2nd Test: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 22 ರಿಂದ ಢಾಕಾದಲ್ಲಿ ನಡೆಯಲಿದೆ. ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಶಕ್ತಿ ದ್ವಿಗುಣಗೊಳ್ಳಲಿದೆ. ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ಗೆ ಅಪಾಯಕಾರಿ ಆಟಗಾರನ ಪ್ರವೇಶ ಬಿರುಗಾಳಿ ಸೃಷ್ಟಿಸಲಿದೆ. ಚಿತ್ತಗಾಂಗ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಬಾಂಗ್ಲಾದೇಶ ವಿರುದ್ಧ 188 ರನ್‌ಗಳ ಜಯ ಸಾಧಿಸಿದ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: Rishabh Pant house: ರಿಷಬ್ ಪಂತ್ ಮನೆ ಮುಂದೆ ಹೂತು ಹಾಕಿದೆ ಹತ್ತಾರು ರೈಲ್ವೆ ಕಂಬಗಳು: ಇದರ ಹಿಂದಿದೆ ಆಘಾತಕಾರಿ ಕಾರಣ

ಇನ್ನು ಬಾಂಗ್ಲಾದೇಶ ವಿರುದ್ಧ ಡಿಸೆಂಬರ್ 22 ರಿಂದ ಢಾಕಾದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಳ್ಳಲು ಸಂಪೂರ್ಣ ಕಾತುರದಿಂದ ಕಾಯುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ತಲುಪುವ ರೇಸ್‌ನಲ್ಲಿ ಉಳಿಯಲು ಭಾರತಕ್ಕೆ ಈ ಪಂದ್ಯವನ್ನು ಗೆಲ್ಲುವುದು ಅವಶ್ಯಕ. ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಅಪಾಯಕಾರಿ ಆಟಗಾರನೊಬ್ಬ ಟೀಂ ಇಂಡಿಯಾದ ಪ್ಲೇಯಿಂಗ್ XIಗೆ ಮರಳುವ ಸಾಧ್ಯತೆಯಿದೆ.

ಈ ಆಟಗಾರನನ್ನು ಟೀಂ ಇಂಡಿಯಾದ ಮಾರಕ ಅಸ್ತ್ರ ಎಂದು ಪರಿಗಣಿಸಲಾಗಿದೆ. ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಗೆ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ಅವಕಾಶ ಸಿಗಬಹುದು. ವೇಗದ ಬೌಲರ್ ಉಮೇಶ್ ಯಾದವ್ ಬದಲಿಗೆ ಶಾರ್ದೂಲ್ ಠಾಕೂರ್ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದ ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆಯಬಹುದು. ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಉಮೇಶ್ ಯಾದವ್ ವಿಶೇಷ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ.

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಉಮೇಶ್ ಯಾದವ್ ಕೇವಲ 2 ವಿಕೆಟ್ ಪಡೆದರು. ಈ ವೈಫಲ್ಯದ ನಂತರ, ಉಮೇಶ್ ಯಾದವ್ ಅವರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಕೈಬಿಡಬಹುದು. ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಉಮೇಶ್ ಯಾದವ್ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡಬಹುದು. ಶಾರ್ದೂಲ್ ಠಾಕೂರ್ ಆಗಮನದೊಂದಿಗೆ ಟೀಮ್ ಇಂಡಿಯಾದ ಶಕ್ತಿ ದ್ವಿಗುಣಗೊಳ್ಳಲಿದೆ. ಏಕೆಂದರೆ ಈ ಆಟಗಾರ ಸ್ಫೋಟಕ ಬ್ಯಾಟಿಂಗ್ ಜೊತೆಗೆ ಕಿಲ್ಲರ್ ಬೌಲಿಂಗ್‌ನಲ್ಲಿ ಪರಿಣತಿ ಪಡೆದಿದ್ದಾನೆ.

ಇದನ್ನೂ ಓದಿ: WATCH: ಪುಟ್ಬಾಲ್ ವಿಶ್ವಕಪ್ ಗೆಲುವಿನ ನಂತರ ಹೇಗಿತ್ತು ಗೊತ್ತಾ? ಮೆಸ್ಸಿ ಡ್ಯಾನ್ಸ್..!

ಟೀಂ ಇಂಡಿಯಾದ ಅತ್ಯಂತ ಅಪಾಯಕಾರಿ ಆಲ್ ರೌಂಡರ್:

ಶಾರ್ದೂಲ್ ಠಾಕೂರ್ ಬೌಲಿಂಗ್ ತೀಕ್ಷ್ಣವಾದ ಸ್ವಿಂಗ್‌ನಲ್ಲಿ ಪರಿಣತಿ ಹೊಂದಿದ್ದಾರೆ. ಇನ್ನು ಠಾಕೂರ್ ಕೂಡ ಕೆಳ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಾರೆ. ಇವರ ಆಗಮನದಿಂದ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಮತ್ತು ಬೌಲರ್‌ನ ಸಂಯೋಜನೆಯನ್ನು ಪಡೆಯಲಿದೆ. ಶಾರ್ದೂಲ್ ಠಾಕೂರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ಅತ್ಯಂತ ಅಪಾಯಕಾರಿ ಆಲ್‌ರೌಂಡರ್.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News