“ವಿಶ್ವಕಪ್ ಸೆಮಿಫೈನಲ್’ಗೆ ಈ 4 ತಂಡಗಳು ಎಂಟ್ರಿಯಾಗಲಿವೆ…”: ಭವಿಷ್ಯ ನುಡಿದ ಸೌರವ್ ಗಂಗೂಲಿ

ICC ODI World Cup 2023: ವಿಶ್ವಕಪ್ 2023ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ 2023 ರಲ್ಲಿ ಪಾದಾರ್ಪಣೆ ಮಾಡಲಿದೆ.

Written by - Bhavishya Shetty | Last Updated : Jul 9, 2023, 11:30 AM IST
    • ಏಕದಿನ ವಿಶ್ವಕಪ್ 2023 ಅಕ್ಟೋಬರ್ 5 ರಿಂದ ಅಹಮದಾಬಾದ್‌ ನಲ್ಲಿ ಆರಂಭ
    • ಸೆಮಿಫೈನಲ್ ತಲುಪಬಹುದಾದ 4 ತಂಡಗಳ ಹೆಸರನ್ನು ಸೂಚಿಸಿದ ಸೌರವ್ ಗಂಗೂಲಿ
    • ನಾಲ್ಕು ತಂಡಗಳ ಬದಲಿಗೆ ಐದು ತಂಡಗಳನ್ನು ಆಯ್ಕೆ ಮಾಡಿದ್ದಾರೆ.
“ವಿಶ್ವಕಪ್ ಸೆಮಿಫೈನಲ್’ಗೆ ಈ 4 ತಂಡಗಳು ಎಂಟ್ರಿಯಾಗಲಿವೆ…”: ಭವಿಷ್ಯ ನುಡಿದ ಸೌರವ್ ಗಂಗೂಲಿ title=
Sourav Ganguly

ICC ODI World Cup 2023: ಏಕದಿನ ವಿಶ್ವಕಪ್ 2023ರ ಕೌಂಟ್‌ ಡೌನ್ ಪ್ರಾರಂಭವಾಗಿದೆ. ಅಕ್ಟೋಬರ್ 5 ರಿಂದ ಅಹಮದಾಬಾದ್‌ ನಲ್ಲಿ ಟೂರ್ನಿ ಆರಂಭವಾಗಲಿದ್ದು, ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಆಡಲಿವೆ. ಈ ಸಂದರ್ಭದಲ್ಲಿ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಈ ಟೂರ್ನಿಯ ಬಗ್ಗೆ ದೊಡ್ಡ ಭವಿಷ್ಯ ನುಡಿದಿದ್ದು, ಸೆಮಿಫೈನಲ್ ತಲುಪಬಹುದಾದ 4 ತಂಡಗಳ ಹೆಸರನ್ನು ಸೂಚಿಸಿದ್ದಾರೆ.

ಇದನ್ನೂ ಓದಿ: ಈ ಸೊಪ್ಪು-ಎಣ್ಣೆಯ ಹೇರ್ ಮಾಸ್ಕ್ ಹಚ್ಚಿದರೆ ನೈಸರ್ಗಿಕವಾಗಿ ಬಿಳಿಕೂದಲು ಶಾಶ್ವತವಾಗಿ ಕಪ್ಪಾಗುತ್ತೆ!

ವಿಶ್ವಕಪ್ 2023ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ 2023 ರಲ್ಲಿ ಪಾದಾರ್ಪಣೆ ಮಾಡಲಿದೆ. ಈ ಪಂದ್ಯಾವಳಿಯ ಆರಂಭಕ್ಕೆ ಸಾಕಷ್ಟು ಸಮಯವಿದ್ದರೂ ಸಹ ಈಗಾಗಲೇ ಅನೇಕ ಕ್ರಿಕೆಟ್ ದಿಗ್ಗಜರು ಈ ಬಗ್ಗೆ  ನಿರಂತರವಾಗಿ ಭವಿಷ್ಯ ನುಡಿಯುತ್ತಿದ್ದಾರೆ.

ಇದೇ ವೇಳೆ ಸೌರವ್ ಗಂಗೂಲಿ ಕೂಡ ಸೆಮಿಫೈನಲ್ ತಲುಪಲಿರುವ ತಂಡಗಳ ಹೆಸರನ್ನು ಹೇಳಿದ್ದಾರೆ. ಅವರು ನಾಲ್ಕು ತಂಡಗಳ ಬದಲಿಗೆ ಐದು ತಂಡಗಳನ್ನು ಆಯ್ಕೆ ಮಾಡಿದ್ದಾರೆ. ಗಂಗೂಲಿ ಪ್ರಕಾರ ವಿಶ್ವಕಪ್ 2023 ರ ಸೆಮಿಫೈನಲ್‌ ಗೆ ಇಂಗ್ಲೆಂಡ್, ಭಾರತ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಪ್ರವೇಶ ಪಡೆಯಬಹುದು.

Revsports ಜೊತೆ ಮಾತನಾಡಿದ ಸೌರವ್ ಗಂಗೂಲಿ, “ಹೇಳುವುದು ತುಂಬಾ ಕಷ್ಟ. ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ. ಈ ದೊಡ್ಡ ಪಂದ್ಯಗಳಲ್ಲಿ ನೀವು ನ್ಯೂಜಿಲೆಂಡ್ ಅನ್ನು ಎಂದಿಗೂ ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ನಾನು ಐವರನ್ನು ಆಯ್ಕೆ ಮಾಡುತ್ತೇನೆ. ಅದರಲ್ಲಿ ಪಾಕಿಸ್ತಾನವನ್ನೂ ಸೇರಿಸುತ್ತೇನೆ. ಆದ್ರೆ ಪಾಕ್ ಖಂಡಿತವಾಗಿಯೂ ಅರ್ಹತೆ ಪಡೆಯಬೇಕು. ಹಾಗಿದ್ದರೆ ಮಾತ್ರ ಈಡನ್ ಗಾರ್ಡನ್ಸ್ ನಲ್ಲಿ ಭಾರತ-ಪಾಕಿಸ್ತಾನ ಸೆಮಿಫೈನಲ್ ಪಂದ್ಯ ನೋಡಬಹುದು” ಎಂದು ನಗುತ್ತಾ ಹೇಳಿದರು.

ಇದನ್ನೂ ಓದಿ: ಜಗತ್ತಿನ ಅತೀ ಶ್ರೀಮಂತ ಭಿಕ್ಷುಕನ ಆಸ್ತಿ ಮೌಲ್ಯ ರೂ. 7.5 ಕೋಟಿ! ಈ ಹೈಫೈ ಬೆಗ್ಗರ್ ಭಾರತದವನೇ…

ಹತ್ತು ತಂಡಗಳು ವಿಶ್ವಕಪ್‌ ನಲ್ಲಿ ಭಾಗವಹಿಸಲಿದ್ದು, ಅದರಲ್ಲಿ ಎಂಟು ತಂಡಗಳು ಐಸಿಸಿ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್ ಮೂಲಕ ಅರ್ಹತೆ ಪಡೆದಿವೆ. ಭಾರತ, ಇಂಗ್ಲೆಂಡ್, ಪಾಕಿಸ್ತಾನ, ಬಾಂಗ್ಲಾದೇಶ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಅಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾದ ತಂಡಗಳನ್ನು ಒಳಗೊಂಡಿದೆ. ಜಿಂಬಾಬ್ವೆಯಲ್ಲಿ ನಡೆಯುತ್ತಿರುವ ಕ್ವಾಲಿಫೈಯರ್ ಈವೆಂಟ್‌ ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಶ್ರೀಲಂಕಾ ಮತ್ತು ನೆದರ್ಲ್ಯಾಂಡ್ಸ್ 2023 ರ ODI ವಿಶ್ವಕಪ್‌ ಗೆ ಅರ್ಹತೆ ಪಡೆದಿವೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News