BCCI ಸಭೆಯಲ್ಲಿ ಏನಾಯ್ತು? IPL ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಗಂಗೂಲಿ!

ಸೌರವ್ ಗಂಗೂಲಿ ಅವರನ್ನು ಪದಚ್ಯುತಗೊಳಿಸಿರುವುದು ದಾದಾಗೆ ಮಾಡಿದ ಅವಮಾನ ಎಂದು ಟಿಎಂಸಿ ಹೇಳಿದೆ. ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಯಬಹುದಾದರೆ ಸೌರವ್ ಗಂಗೂಲಿಯನ್ನು ಬಿಸಿಸಿಐ ಅಧ್ಯಕ್ಷರಾಗಿ ಏಕೆ ಮುಂದುವರಿಸಬಾರದು ಎಂದು ಪ್ರಶ್ನಿಸಿದೆ.

Written by - Channabasava A Kashinakunti | Last Updated : Oct 12, 2022, 03:06 PM IST
  • ಈ ಕಾರಣಕ್ಕಾಗಿ ಐಪಿಎಲ್ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಗಂಗೂಲಿ
  • ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ನಾಮಪತ್ರ
  • ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿದ ಜಯ್ ಶಾ
BCCI ಸಭೆಯಲ್ಲಿ ಏನಾಯ್ತು? IPL ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಗಂಗೂಲಿ! title=

Sourav Ganguly refused IPL Chairman Post : ಸೌರವ್ ಗಂಗೂಲಿ ಬದಲಿಗೆ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ರಾಜಕೀಯ ತಿಕ್ಕಾಟ ತೀವ್ರಗೊಂಡಿದೆ. ಸೌರವ್ ಗಂಗೂಲಿ ಅವರನ್ನು ಪದಚ್ಯುತಗೊಳಿಸಿರುವುದು ದಾದಾಗೆ ಮಾಡಿದ ಅವಮಾನ ಎಂದು ಟಿಎಂಸಿ ಹೇಳಿದೆ. ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಯಬಹುದಾದರೆ ಸೌರವ್ ಗಂಗೂಲಿಯನ್ನು ಬಿಸಿಸಿಐ ಅಧ್ಯಕ್ಷರಾಗಿ ಏಕೆ ಮುಂದುವರಿಸಬಾರದು ಎಂದು ಪ್ರಶ್ನಿಸಿದೆ.

ಬಿಸಿಸಿಐ ಸಭೆಯಲ್ಲಿ ಏನಾಯ್ತು?

ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದರು ಎಂಬ ಸುದ್ದಿಯಿದ್ದು, ನಿನ್ನೆ (ಅಕ್ಟೋಬರ್ 11) ನಡೆದ ಬಿಸಿಸಿಐ ಸಭೆಯಲ್ಲೂ ಅವರು ಮಾತನಾಡಿದರು. ಗಂಗೂಲಿ ಅವರು ಬಿಸಿಸಿಐ ಅಥವಾ ಐಸಿಸಿ ಅಧ್ಯಕ್ಷರಾಗಲು ಬಯಸಿದ್ದರು, ಆದರೆ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಎರಡನೇ ಅವಧಿಗೆ ಆಯ್ಕೆ ಮಾಡುವ ಅವಕಾಶವಿಲ್ಲ ಎಂದು ಅವರಿಗೆ ತಿಳಿಸಲಾಗಿದೆ. ಸಭೆಯಲ್ಲಿ ಗಂಗೂಲಿ ಅವರಿಗೆ ಐಪಿಎಲ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಸಲಹೆ ನೀಡಲಾಯಿತು, ಆದ್ರೆ, ಅವರು ಅದನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ : Shikhar Dhawan Movie : ಬಾಲಿವುಡ್​ಗೆ ಎಂಟ್ರಿ ನೀಡಿದ ಶಿಖರ್ ಧವನ್, ಸಿನಿಮಾ ಫಸ್ಟ್ ಲುಕ್ ರಿಲೀಸ್!

ಈ ಕಾರಣಕ್ಕಾಗಿ ಐಪಿಎಲ್ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಗಂಗೂಲಿ

ಬಿಸಿಸಿಐ ಮೂಲಗಳು, "ಸೌರವ್ ಅವರಿಗೆ ಐಪಿಎಲ್ ಅಧ್ಯಕ್ಷ ಸ್ಥಾನವನ್ನು ನೀಡಲಾಯಿತು, ಆದರೆ ಅವರು ಅದನ್ನು ನಯವಾಗಿ ತಿರಸ್ಕರಿಸಿದರು. ಬಿಸಿಸಿಐ ಅಧ್ಯಕ್ಷರಾದ ಮೇಲೆ ಅದರ ಉಪ ಸಮಿತಿಯ ಮುಖ್ಯಸ್ಥರಾಗಲು ಸಾಧ್ಯವಿಲ್ಲ ಎಂಬುದು ಅವರ ವಾದವಾಗಿತ್ತು. ಅವರು (ಅಧ್ಯಕ್ಷರು) ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ತೋರಿಸಿದ್ದರು. ಗಂಗೂಲಿ ನಿರಾಕರಿಸಿದ ಹಿನ್ನೆಲೆಯಲ್ಲಿ ಬ್ರಿಜೇಶ್ ಪಟೇಲ್ ಅವರ ಸ್ಥಾನಕ್ಕೆ ಅರುಣ್ ಸಿಂಗ್ ಧುಮಾಲ್ ಅವರನ್ನು ಐಪಿಎಲ್ ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗಿದೆ.

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ನಾಮಪತ್ರ

1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರಾಗಿದ್ದ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ರೋಜರ್ ಬಿನ್ನಿ ಈ ಉನ್ನತ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ. ಈ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ, ಉಪಾಧ್ಯಕ್ಷ ಸ್ಥಾನಕ್ಕೆ ನಾನು, ಜಯ್ ಶಾ ಕಾರ್ಯದರ್ಶಿ, ಆಶಿಶ್ ಶೆಲಾರ್ ಖಜಾಂಚಿ ಮತ್ತು ದೇವ್‌ಜಿತ್ ಸೈಕಿಯಾ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

67 ವರ್ಷದ ಕನ್ನಡಿಗ ರೋಜರ್ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿಯಾಗಿದ್ದು, ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ, 18 ಅಕ್ಟೋಬರ್ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮುಂಬೈನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಗಂಗೂಲಿ ಅವರನ್ನು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ.

ಇದನ್ನೂ ಓದಿ : IND vs SA 3rd ODI: ಸರಣಿ ಗೆದ್ದ ಭಾರತ: ಏಕದಿನದಲ್ಲೂ ದ.ಆಫ್ರಿಕಾಗೆ ಸೋಲಿನ ರುಚಿ ತೋರಿಸಿದ ಟೀಂ ಇಂಡಿಯಾ

ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿದ ಜಯ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಕೂಡ ನಾಮಪತ್ರ ಸಲ್ಲಿಸಿದ್ದು, ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಜಯ್ ಶಾ ಹೊರತುಪಡಿಸಿ, ಸೌರವ್ ಗಂಗೂಲಿ ಬದಲಿಗೆ ಭಾರತೀಯ ಪ್ರತಿನಿಧಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಂಡಳಿಯಲ್ಲಿ ನಿರೀಕ್ಷಿಸಲಾಗಿದೆ.

ಕನ್ನಡ ಭಾಷೆಯಲ್ಲ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News