ನವದೆಹಲಿ: ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 70 ರನ್ ಗಳ ಮುನ್ನಡೆಯನ್ನು ಸಾಧಿಸಿದೆ.
ಇದನ್ನೂ ಓದಿ: Viral Video: ಸಹೋದರಿ ಜೊತೆಗೆ ಸಖತ್ ಆಗಿ ವೆಡ್ಡಿಂಗ್ ಡ್ಯಾನ್ಸ್ ಮಾಡಿದ ವಧು..!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ತಂಡವು ಮೊದಲ ಇನಿಂಗ್ಸ್ ನಲ್ಲಿ 223 ರನ್ ಗಳಿಗೆ ಸರ್ವಪತನವನ್ನು ಕಂಡಿತ್ತು, ಮೊದಲ ಇನಿಂಗ್ಸ್ ನಲ್ಲಿ ಭಾರತದ ಪರವಾಗಿ ಪೂಜಾರಾ 43,ಹಾಗೂ ಕೊಹ್ಲಿ 79 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ನೆರವಾಗಿದರು.
A five-wicket haul for Jasprit Bumrah and South Africa's innings is wrapped up for 210 👏🏻
India lead by a slender 13 runs.
Watch #SAvIND live on https://t.co/CPDKNxoJ9v (in select regions)#WTC23 | https://t.co/Wbb1FE1P6t pic.twitter.com/cmqKWckoIX
— ICC (@ICC) January 12, 2022
ಇನ್ನೊಂದೆಡೆಗೆ ಮೊದಲ ಇನಿಂಗ್ಸ್ ನ ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡವು 210 ರನ್ ಗಳಿಗೆ ಆಲೌಟ್ ಆಗಿತ್ತು, ದಕ್ಷಿಣ ಆಫ್ರಿಕಾದ ಪರವಾಗಿ ಕೀಗನ್ ಪಿಟರ್ಸನ್ 72 ರನ್ ಗಳಿಸುವುದರ ಮೂಲಕ ತಂಡಕ್ಕೆ ಆಸರೆಯಾದರು.ಇನ್ನೊಂದೆಡೆಗೆ ಭಾರತದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಬುಮ್ರಾ ಐದು ವಿಕೆಟ್ ಗಳನ್ನು ಪಡೆಯುವ ಮೂಲಕ ಹರಿಣಗಳ ಬ್ಯಾಟಿಂಗ್ ಬೆನ್ನೆಲುಬು ಮುರಿಯಲು ಯಶಸ್ವಿಯಾದರು, ಇದರಿಂದಾಗಿ ಭಾರತ ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆಯನ್ನು ಗಳಿಸುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಟ್ವಿಟ್ಟರ್ ಖಾತೆ ಹ್ಯಾಕ್..!
ಈಗ ಎರಡನೇ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡವು ಎರಡನೇ ದಿನದಾಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದೆ.ಈಗ ಕ್ರಿಸ್ ನಲ್ಲಿ ಪೂಜಾರ 9 ಹಾಗೂ ಕೊಹ್ಲಿ 14 ರನ್ ಗಳೊಂದಿಗೆ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.