ಪಾರ್ಲ್: ಇಲ್ಲಿನ ಬೋಲಾಂಡ್ ಪಾರ್ಕ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ದಕ್ಷಿಣ ಆಫ್ರಿಕಾ ತಂಡವು ಭಾರತಕ್ಕೆ ಮೊದಲು ಬ್ಯಾಟಿಂಗ್ ಅವಕಾಶವನ್ನು ಕಲ್ಪಿಸಿತು.ಒಂದು ಹಂತದಲ್ಲಿ ಟೀಮ್ ಇಂಡಿಯಾ 49 ರನ್ ಗಳಿಸುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು ಈ ಹಂತದಲ್ಲಿ ಸಮಯೋಚಿತ ಆಟವಾಡಿದ ಸಂಜು ಸ್ಯಾಮ್ಸನ್ 114 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳಿಂದ 108 ಗಳನ್ನು ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.ಇವರಿಗೆ ಸಾಥ್ ನೀಡಿದ ತಿಲಕ್ ವರ್ಮಾ ಹಾಗೂ ರಿಂಕು ಸಿಂಗ್ ಕ್ರಮವಾಗಿ 52 ಹಾಗೂ 38 ರನ್ ಗಳಿಸುವ ಮೂಲಕ ತಂಡವನ್ನು ಸುಸ್ಥಿತಿಗೆ ತಂದರು.ಅಂತಿಮವಾಗಿ ಟೀಮ್ ಇಂಡಿಯಾ 50 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಳ್ಳುವ ಮೂಲಕ 296 ರನ್ ಗಳಿಸಿತು.
Sanju Samson comes in clutch with a maiden international ton in the series decider 👌
📝 #SAvIND: https://t.co/XDucAXYJtE pic.twitter.com/GTdM5wHkWE
— ICC (@ICC) December 21, 2023
ಟೀಮ್ ಇಂಡಿಯಾ ನೀಡಿದ 297 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು.ದಕ್ಷಿಣ ಆಫ್ರಿಕಾದ ಪರವಾಗಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೋನಿ ಜಿ ಜಾರ್ಜಿ 81 ರನ್ ಗಳಿಸುವ ಮೂಲಕ ಭಾರತ ತಂಡಕ್ಕೆ ಆಪಾಯಕಾರಿಯಾಗಿ ಪರಿಣಮಿಸಿದ್ದರು. ಆದರೆ ಆರ್ಶ್ದೀಪ್ ಅವರ ಬೌಲಿಂಗ್ ದಾಳಿಗೆ ಎಲ್ಬಿಡಬ್ಲ್ಯು ಗೆ ಬಲಿಯಾದ ನಂತರ ಟೀಮ್ ಇಂಡಿಯಾಗೆ ಗೆಲುವು ಸರಾಗವಾಯಿತು.ಟೀಮ್ ಇಂಡಿಯಾದ ಪರವಾಗಿ ಆರ್ಶ್ದೀಪ್ ನಾಲ್ಕು ವಿಕೆಟ್ ಗಳನ್ನು ಹಾಗೂ ಆವೇಶ ಖಾನ್ ಹಾಗೂ ವಾಶಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಹರಿಣಗಳ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
ಇದರಿಂದಾಗಿ ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡವು 45.5 ಓವರ್ ಗಳಲ್ಲಿ 218 ರನ್ ಗಳಿಗೆ ಸರ್ವಪತನವನ್ನು ಕಾಣುವ ಮೂಲಕ 78 ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು.ಆ ಮೂಲಕ ಟೀಮ್ ಇಂಡಿಯಾ 2-1 ಅಂತರದಲ್ಲಿ ಏಕದಿನ ಸರಣಿ ಗೆಲುವು ಸಾಧಿಸಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ