‘ದಿಲ್ ಖುಷ್’ ಸಿನಿಮಾ ಟ್ರೇಲರ್ ಅನಾವರಣಗೊಳಿಸಿದ ಶ್ರೀಮುರಳಿ: ಮಾ.22ರಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ ತೆರೆಗೆ

Sandalwood Updates: ಸಿಂಪಲ್ ಸುನಿ ಅವರ ಬಳಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರು ನಿರ್ದೇಶಿಸಿರುವ ಚೊಚ್ಚಲ ಚಿತ್ರವಿದು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ.

Written by - YASHODHA POOJARI | Edited by - Bhavishya Shetty | Last Updated : Mar 19, 2024, 02:01 PM IST
    • ದಿಲ್ ಖುಷ್’ ಚಿತ್ರದ ಟ್ರೇಲರ್ ಬಿಡುಗಡೆ
    • ಟ್ರೇಲರ್ ಬಿಡುಗಡೆ ಮಾಡಿದ ನಟ ಶ್ರೀಮುರಳಿ
    • ಮಾರ್ಚ್ 22 ರಂದು ಚಿತ್ರ ತೆರೆಗೆ ಬರಲಿದೆ
‘ದಿಲ್ ಖುಷ್’ ಸಿನಿಮಾ ಟ್ರೇಲರ್ ಅನಾವರಣಗೊಳಿಸಿದ ಶ್ರೀಮುರಳಿ: ಮಾ.22ರಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ ತೆರೆಗೆ title=
Dil Khush Movie

Dil Kush Movie Trailer: ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭಾಶೇಖರ್ ನಿರ್ಮಿಸಿರುವ ಹಾಗೂ ಪ್ರಮೋದ್ ಜಯ ನಿರ್ದೇಶನದ ‘ದಿಲ್ ಖುಷ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಶ್ರೀಮುರಳಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಅಂದಹಾಗೆ ಮಾರ್ಚ್ 22 ರಂದು ಚಿತ್ರ ತೆರೆಗೆ ಬರಲಿದೆ.

ಇದನ್ನೂ ಓದಿ: Virat Kohli: ಅಕಾಯ್ ಹುಟ್ಟುತ್ತಿದ್ದಂತೆ ಭಾರತ ತೊರೆದು ಈ ದೇಶದಲ್ಲಿ ನೆಲೆಸಲು ವಿರಾಟ್ ನಿರ್ಧಾರ! ಕೊನೆಯಾಗುತ್ತಾ ಟೀಂ ಇಂಡಿಯಾದ ನಂಟು?

ಸಿಂಪಲ್ ಸುನಿ ಅವರ ಬಳಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರು ನಿರ್ದೇಶಿಸಿರುವ ಚೊಚ್ಚಲ ಚಿತ್ರವಿದು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ.

ಐದು ಹಾಡುಗಳಿರುವ ಈ ಚಿತ್ರಕ್ಕೆ ಪ್ರಸಾದ್ ಕೆ ಶೆಟ್ಟಿ ಅವರ ಸಂಗೀತ ನಿರ್ದೇಶನವಿದೆ. ಪ್ರದ್ಯೋತನ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ನಿವಾಸ್ ನಾರಾಯಣ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿರುವ ‘ದಿಲ್ ಖುಷ್’ ಚಿತ್ರದ ನಾಯಕನಾಗಿ ರಂಜಿತ್ ನಟಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ಈ ಭಾಗಗಳಲ್ಲಿ ಅಬ್ಬರಿಸಲಿದ್ದಾನೆ ವರುಣ !ಮೂರು ದಿನಗಳವರೆಗೆ ಎಡೆಬಿಡದೆ ಸುರಿಯಲಿದೆ  ಮಳೆ ! ನೀಗುವುದೇ ಬೆಂಗಳೂರಿನ ನೀರಿನ ಬವಣೆ ! 

ಸ್ಪಂದನ ಸೋಮಣ್ಣ ಈ ಚಿತ್ರದ ನಾಯಕಿ. ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News