Surya Kumar Yadav: ಯುವಿ ದಾಖಲೆ ಮುರಿದ ಸೂರ್ಯ ಕುಮಾರ್: ’ಇಂಡಿಯಾದ ಮಿಸ್ಟರ್ 360’ಯಿಂದ ಹೊಸ ವಿಶ್ವ ದಾಖಲೆ

ಕಳೆದ ಮೂರು ಮ್ಯಾಚ್ ಗಳಲ್ಲಿ ಅಬ್ಬರದ ಪ್ರದರ್ಶನ ತೋರಿದ್ದ ಯಾದವ್, ಇಂದು ನಡೆದ ಪಂದ್ಯದಲ್ಲಿ ಟೀಂ ಇಂಡಿಯಾದ ದಿಗ್ಗಜ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಹೊಸ ವಿಶ್ವ ದಾಖಲೆಯನ್ನು ಬರೆದಿದ್ದಾರೆ.

Written by - Bhavishya Shetty | Last Updated : Sep 25, 2022, 11:21 PM IST
    • ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದ ಭಾರತ
    • ಕ್ರೀಸ್ ನಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್
    • ಯುವರಾಜ್ ಸಿಂಗ್ ದಾಖಲೆ ಮುರಿದ ಸೂರ್ಯಕುಮಾರ್
Surya Kumar Yadav: ಯುವಿ ದಾಖಲೆ ಮುರಿದ ಸೂರ್ಯ ಕುಮಾರ್: ’ಇಂಡಿಯಾದ ಮಿಸ್ಟರ್ 360’ಯಿಂದ ಹೊಸ ವಿಶ್ವ ದಾಖಲೆ title=
suryakumar yadav

ಇಂದು ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಬಿರುಸಿನ ಅರ್ಧಶತಕ ಬಾರಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಕೇವಲ 36 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಸಹಾಯದಿಂದ 69 ರನ್ ಬಾರಿಸಿದ್ದಾರೆ. ಈ ಸಮಯದಲ್ಲಿ ಅವರ ಸ್ಟ್ರೈಕ್ ರೇಟ್ 191.66 ಆಗಿತ್ತು. 

ಇದನ್ನೂ ಓದಿ:  India vs Australia 3rd T20I: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ: ಕೊಹ್ಲಿ, ಯಾದವ್ ಅಬ್ಬರಕ್ಕೆ ಆಸೀಸ್ ತತ್ತರ

ಕಳೆದ ಮೂರು ಮ್ಯಾಚ್ ಗಳಲ್ಲಿ ಅಬ್ಬರದ ಪ್ರದರ್ಶನ ತೋರಿದ್ದ ಯಾದವ್, ಇಂದು ನಡೆದ ಪಂದ್ಯದಲ್ಲಿ ಟೀಂ ಇಂಡಿಯಾದ ದಿಗ್ಗಜ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಹೊಸ ವಿಶ್ವ ದಾಖಲೆಯನ್ನು ಬರೆದಿದ್ದಾರೆ.

ಈ ಇನ್ನಿಂಗ್ಸ್‌ನಲ್ಲಿ ಐದು ಸಿಕ್ಸರ್‌ಗಳೊಂದಿಗೆ, ಟಿ20 ಇಂಟರ್‌ನ್ಯಾಶನಲ್‌ಗಳಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ಹಿಟ್‌ಗಳನ್ನು ಸಿಡಿಸಿದ ಪರಾಕ್ರಮಿಗಳ ಪಟ್ಟಿಯಲ್ಲಿ ಸೂರ್ಯಕುಮಾರ್ ಮೊದಲ ಸ್ಥಾನವನ್ನು ತಲುಪಿದ್ದಾರೆ. ಈ ವರ್ಷದಲ್ಲಿ ಸೂರ್ಯಕುಮಾರ್ ಯಾದವ್ 42 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಅಷ್ಟೇ ಅಲ್ಲದೆ, ಯಾದವ್ 2021 ರಲ್ಲಿ ಟಿ 20 ಅಂತರರಾಷ್ಟ್ರೀಯ ಪಂದ್ಯದಲ್ಲಿ 42 ಸಿಕ್ಸರ್‌ಗಳನ್ನು ಬಾರಿಸಿದ್ದ ಪಾಕಿಸ್ತಾನದ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ಅವರ ದಾಖಲೆಯನ್ನೂ ಸಹ ಮುರಿದಿದ್ದಾರೆ.

ಸೂರ್ಯಕುಮಾರ್ ಅವರು ಈ ವರ್ಷ ನಾಲ್ಕನೇ ಬಾರಿಗೆ ಐವತ್ತಕ್ಕೂ ಹೆಚ್ಚು ಪ್ಲಸ್ ರನ್ ಬಾರಿಸಿದ್ದಾರೆ. ಈ ಮೂಲಕ 2009ರಲ್ಲಿ ಮೂರು 50 ಪ್ಲಸ್ ಸ್ಕೋರ್ ಗಳಿಸಿದ್ದ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಸೂರ್ಯಕುಮಾರ್ ಮುರಿದಿದ್ದಾರೆ.

ಇದನ್ನೂ ಓದಿ:   IND-W vs ENG-W 3rd ODI: ಜೂಲನ್ ಗೋಸ್ವಾಮಿಗೆ ಪರಿಪೂರ್ಣ ವಿದಾಯ: ಇಂಗ್ಲೆಂಡ್ ವಿರುದ್ಧ ಗೆದ್ದ ಟೀಂ ಇಂಡಿಯಾ

ಇನ್ನು ಕಳೆದ ಕೆಲ ಪ್ರಮುಖ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಸಿಡಿಸಿದ್ದ 50+ ಸ್ಕೋರ್ ಗಳ ಸ್ಟ್ರೈಕ್ ರೇಟ್ ಹೀಗಿದೆ.  1) 183.87, 2) 147.05, 3) 155.00, 4) 209.67, 5) 212.72, 6) 172.72, 7) 261.53, 8) 191.66

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News