T20 IND W vs SA W: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ದೊಡ್ಡ ಅಘಾತ..?

T20 IND W vs SA W: ಭಾರತ ಪ್ರವಾಸದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿತು. ಟೆಸ್ಟ್ ಹಾಗೂ ಮೂರು ಏಕದಿನ ಸರಣಿಯಲ್ಲಿ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ, ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು ಬೀಗಿದೆ. 

Written by - Zee Kannada News Desk | Last Updated : Jul 6, 2024, 10:15 AM IST
  • ಭಾರತ ಪ್ರವಾಸದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿತು.
  • ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟಕ್ಕೆ 189 ರನ್ ಕಲೆಹಾಕಿತು.
  • ಟಾಸ್ ಸೋತು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಉತ್ತಮ ಆರಂಭ ಪಡೆಯಿತು.
T20 IND W vs SA W: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ದೊಡ್ಡ ಅಘಾತ..?  title=

T20 IND W vs SA W: ಭಾರತ ಪ್ರವಾಸದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿತು. ಟೆಸ್ಟ್ ಹಾಗೂ ಮೂರು ಏಕದಿನ ಸರಣಿಯಲ್ಲಿ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ, ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು ಬೀಗಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 12 ರನ್‌ಗಳ ಜಯ ಸಾಧಿಸಿದೆ. ಭಾರತದ ಹುಡುಗಿಯರು ಗೆಲುವಿಗಾಗಿ ಸಾಕಷ್ಟು ಪ್ರಯತ್ನಿಸಿದರು ಅವರ ವಿರುದ್ಧ ವಿಫಲವಾಗಿದೆ.

ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟಕ್ಕೆ 189 ರನ್ ಕಲೆಹಾಕಿತು. ಆರಂಭಿಕ ಆಟಗಾರ ತಜ್ಮಿನ್ ಬ್ರಿಟ್ಸ್ 56 ಎಸೆತಗಳಲ್ಲಿ 10 ಬೌಂಡರಿ, 3 ಸಿಕ್ಸರ್ ಭಾರಿಸುವ ಮೂಲಕ 81 ರನ್‌ ಕಲೆಹಾಕಿದರು, ಮರಿಜನ್ ಕಪ್ 33 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಸಿಡಿಸಿ 51 ಕಲೆಹಾಕುವಲ್ಲಿ ಯಶಸ್ವಿಯಾದರು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಉತ್ತಮ ಆರಂಭ ಪಡೆಯಿತು. 

ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಸಿರಾಜ್‌ಗೆ ಸಿಕ್ತು ಅದ್ದೂರಿ ಸ್ವಾಗತ..!

ಬಳಿಕ 190 ರನ್‌ಗಳ ಟಾರ್ಗೆಟ್‌ ಬೆನ್ನತ್ತಿದ, ಟೀಂ ಇಂಡಿಯಾ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ಕಳೆದುಕೊಂಡು 177 ರನ್ ಗಳಿಸಲಷ್ಟೇ ಶಕ್ತವಾಯಿತು. ಜೆಮಿಮಾ ರಾಡ್ರಿಗಸ್   30 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್ ಸಿಡಿಸಿ 50 ರನ್‌ ಕಲೆಹಾಕಿದರು ಮತ್ತು ಸ್ಮೃತಿ ಮಂಧಾನ  30 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಸಿಡಿಸಿ 43 ರನ್‌ ಕಲೆಹಾಕಿದರು.

ತೀವ್ರವಾದ ಹೋರಾಟದ ನಡುವೆಯೂ ಭಾರತ ನಾರಿಯರ ತಂಡ ವಿರೋಧಿ ತಂಡದ ಎದುರು ಮಂಡಿಯೂರಿತು.  ಮೂರು ಟಿ20 ಸರಣಿಯ ಭಾಗವಾಗಿ ಎರಡನೇ ಪಂದ್ಯ ಭಾನುವಾರ ಚೆಪಾಕ್ ಮೈದಾನದಲ್ಲಿ ನಡೆಯಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News